ಆಸೀಸ್ ವಿರುದ್ಧದ ಪಂದ್ಯಕ್ಕಿಲ್ಲ ರೋಹಿತ್ ಶರ್ಮಾ: ಟೀಂ ಇಂಡಿಯಾಗೆ ಇವರೇ ಹೊಸ ಕ್ಯಾಪ್ಟನ್.. ಈತನೇ ಓಪನರ್ ಎಂದ ಕೋಚ್ ಗಂಭೀರ್
India vs Australia: ನವೆಂಬರ್ 22 ರಿಂದ ಪರ್ತ್‌ನಲ್ಲಿ ಪ್ರಾರಂಭವಾಗುವ ಐದು ಟೆಸ್ಟ್‌ಗಳ ಸರಣಿಗೆ ಆಸ್ಟ್ರೇಲಿಯಾ ಯಾವುದೇ ನಿರ್ದಿಷ್ಟ ರೀತಿಯ ಪಿಚ್‌ಗಳನ್ನು ಸಿದ್ಧಪಡಿಸುವುದಿಲ್ಲ. ಹಾಗೆಯೇ ಭಾರತವು ತನ್ನ ಸಂಪೂರ್ಣ ಸಾಮರ್ಥ್ಯದೊಂದಿಗೆ ಆಡಿದರೆ, ಯಾವುದೇ ರೀತಿಯ ಪಿಚ್‌ನಲ್ಲೂ ಗೆಲುವು ಸಾಧಿಸಬಹುದು ಎಂದು ಗೌತಮ್ ಗಂಭೀರ್ ಭರವಸೆ ವ್ಯಕ್ತಪಡಿಸಿದ್ದಾರೆ.
coach Gautam Gambhir: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಹೈ ಪ್ರೊಫೈಲ್ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲು ಪಿಚ್ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಆದರೆ, ಟೀಂ ಇಂಡಿಯಾದ ಮುಖ್ಯ ಕೋಚ್ ಗೌತಮ್ ಗಂಭೀರ್ ಈ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಸೋಮವಾರ ಆಸ್ಟ್ರೇಲಿಯಾ ಪ್ರವಾಸಕ್ಕೆ ತೆರಳುವ ಮುನ್ನ ಮುಖ್ಯ ಕೋಚ್ ಗೌತಮ್ ಗಂಭೀರ್ ಸುದ್ದಿಗೋಷ್ಠಿ ನಡೆಸಿ ಒಂದಷ್ಟು ವಿಷಯಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು.
ನವೆಂಬರ್ 22 ರಿಂದ ಪರ್ತ್‌ನಲ್ಲಿ ಪ್ರಾರಂಭವಾಗುವ ಐದು ಟೆಸ್ಟ್‌ಗಳ ಸರಣಿಗೆ ಆಸ್ಟ್ರೇಲಿಯಾ ಯಾವುದೇ ನಿರ್ದಿಷ್ಟ ರೀತಿಯ ಪಿಚ್‌ಗಳನ್ನು ಸಿದ್ಧಪಡಿಸುವುದಿಲ್ಲ. ಹಾಗೆಯೇ ಭಾರತವು ತನ್ನ ಸಂಪೂರ್ಣ ಸಾಮರ್ಥ್ಯದೊಂದಿಗೆ ಆಡಿದರೆ, ಯಾವುದೇ ರೀತಿಯ ಪಿಚ್‌ನಲ್ಲೂ ಗೆಲುವು ಸಾಧಿಸಬಹುದು ಎಂದು ಗೌತಮ್ ಗಂಭೀರ್ ಭರವಸೆ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗೆ ನಡೆದ ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ನಡುವಿನ ODI ಸರಣಿಯ ಸಂದರ್ಭದಲ್ಲಿ, ಮೆಲ್ಬೋರ್ನ್, ಅಡಿಲೇಡ್ ಮತ್ತು ಪರ್ತ್ ಮೈದಾನಗಳಲ್ಲಿ ಅತ್ಯಂತ ಕಡಿಮೆ ಸ್ಕೋರಿಂಗ್ ಪಂದ್ಯಗಳು ಕಂಡುಬಂದವು. ಈ ಸರಣಿಯನ್ನು ಪಾಕಿಸ್ತಾನ 2-1ರಿಂದ ಗೆದ್ದುಕೊಂಡಿತು. ಮೆಲ್ಬೋರ್ನ್, ಅಡಿಲೇಡ್ ಮತ್ತು ಪರ್ತ್‌ನಲ್ಲಿ ನಡೆದ ಎಲ್ಲಾ ಮೂರು ಪಂದ್ಯಗಳಲ್ಲಿ ವೇಗದ ಬೌಲರ್‌ಗಳ ಪ್ರಾಬಲ್ಯ ಕಂಡುಬಂದಿದೆ.
ಇದಲ್ಲದೆ, ತವರಿನಲ್ಲಿ ನ್ಯೂಜಿಲೆಂಡ್ ಕೈಯಲ್ಲಿ 3-0 ಅಂತರದಲ್ಲಿ ಟೆಸ್ಟ್ ಸರಣಿಯನ್ನು ಕಳೆದುಕೊಂಡ ಬಗ್ಗೆ ಮಾತನಾಡಿದ ಅವರು, "ಉತ್ತಮ ಪ್ರದರ್ಶನ ನೀಡುವ ಅದಮ್ಯ ಬಯಕೆ ನನಗೆ ಮತ್ತು ಎಲ್ಲಾ ಆಟಗಾರರಿಗೆ ಇದೆ. ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅತ್ಯಂತ ಬಲಿಷ್ಠ ಆಟಗಾರರು ಮತ್ತು ಭಾರತೀಯ ಕ್ರಿಕೆಟ್‌ಗಾಗಿ ಸಾಕಷ್ಟು ಸಾಧಿಸಿದ್ದಾರೆ. ಭವಿಷ್ಯದಲ್ಲಿಯೂ ಸಾಕಷ್ಟು ಸಾಧಿಸಲಿದ್ದಾರೆ. ಅವರು ಇನ್ನೂ ನಿಜವಾಗಿಯೂ ಕಷ್ಟಪಟ್ಟು ಕೆಲಸ ಮಾಡುತ್ತಿದ್ದಾರೆ ಮತ್ತು ಉತ್ಸಾಹವನ್ನು ಹೊಂದಿದ್ದಾರೆ" ಎಂದಿದ್ದಾರೆ.
ಇದನ್ನೂ ಓದಿ: ನವೆಂಬರ್ 15 ಮತ್ತು 20 ಸಾರ್ವಜನಿಕ ರಜೆ !ಎಲ್ಲಾ ಶಾಲಾ, ಕಾಲೇಜು, ಕಚೇರಿಗಳಿಗೆ ಕಡ್ಡಾಯ ರಜೆ ಘೋಷಿಸಿದ ರಾಜ್ಯ ಸರ್ಕಾರ
ಇನ್ನು ವೈಯಕ್ತಿಕ ಕಾರಣಗಳಿಂದಾಗಿ ಮೊದಲ ಟೆಸ್ಟ್‌ಗೆ ರೋಹಿತ್ ಶರ್ಮಾ ಅಲಭ್ಯರಾಗುವ ಸಾಧ್ಯತೆ ಇದೆ. ಹೀಗಾಗಿ ಅಲಭ್ಯವಾದರೆ, ಮೊದಲ ಟೆಸ್ಟ್ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಮುಖ್ಯ ಕೋಚ್ ಗೌತಮ್ ಗಂಭೀರ್ ಹೇಳಿದ್ದಾರೆ. ಜೊತೆಗೆ ಆರಂಭಿಕ ಆಟಗಾರರಾಗಿ ಕೆಎಲ್ ರಾಹುಲ್ ಇನ್ನಿಂಗ್ಸ್ ಆರಂಭಿಸಹುದು ಎಂದು ಸುಳಿವು ನೀಡಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ