Team India Squad Announced: ಟೀಂ ಇಂಡಿಯಾ ಜುಲೈ 12 ರಿಂದ ಆಗಸ್ಟ್ 13 ರವರೆಗೆ ವೆಸ್ಟ್ ಇಂಡೀಸ್ ಪ್ರವಾಸ ಕೈಗೊಳ್ಳಲಿದೆ. ಈ ವೇಳೆ ಎರಡು ಟೆಸ್ಟ್ ಪಂದ್ಯಗಳು, ಮೂರು ಏಕದಿನ ಪಂದ್ಯಗಳು ಮತ್ತು ಐದು ಟಿ20 ಪಂದ್ಯಗಳು ಉಭಯ ತಂಡಗಳ ನಡುವೆ ನಡೆಯಲಿವೆ. ಸದ್ಯ ಭಾರತದ ಆಯ್ಕೆಗಾರರು ಟೆಸ್ಟ್ ಮತ್ತು ಏಕದಿನ ಸರಣಿಗೆ ಟೀಂ ಇಂಡಿಯಾವನ್ನು ಪ್ರಕಟಿಸಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: West Indies Series: ವಿಂಡೀಸ್ ಪ್ರವಾಸಕ್ಕೆ ಟೀಮ್ ಇಂಡಿಯಾ ಘೋಷಣೆ, ಈ 16 ಆಟಗಾರರಿಗೆ ಸಿಕ್ತು ಅವಕಾಶ


ಟೆಸ್ಟ್ ಸರಣಿಯ ನಂತರ ಮೂರು ಪಂದ್ಯಗಳ ODI ಸರಣಿ ನಡೆಯಲಿದೆ, ಇದರಲ್ಲಿ ಮೊದಲ ಎರಡು ಪಂದ್ಯಗಳು ಜುಲೈ 27 ಮತ್ತು 29 ರಂದು ಬಾರ್ಬಡೋಸ್‌ ನ ಕೆನ್ಸಿಂಗ್ಟನ್ ಓವಲ್‌ ನಲ್ಲಿ ನಡೆದರೆ, ಮೂರನೇ ಏಕದಿನ ಪಂದ್ಯ ಆಗಸ್ಟ್ 1 ರಂದು ಟ್ರಿನಿಡಾಡ್‌ ನ ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿಯಲ್ಲಿ ನಡೆಯಲಿದೆ. ಇನ್ನು ಈ ಏಕದಿನ ಸರಣಿಯು ಭಾರತೀಯ ಆಟಗಾರನಿಗೆ ತುಂಬಾ ವಿಶೇಷವಾಗಿದ್ದು, 10 ವರ್ಷಗಳ ನಂತರ ಟೀಂ ಇಂಡಿಯಾ ಪರ ಏಕದಿನ ಪಂದ್ಯಗಳನ್ನು ಆಡಲಿದ್ದಾರೆ,  


ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾದಲ್ಲಿ 31 ವರ್ಷದ ವೇಗದ ಬೌಲರ್ ಜಯದೇವ್ ಉನದ್ಕತ್ ಸೇರ್ಪಡೆಗೊಂಡಿದ್ದಾರೆ. ಜಯದೇವ್ ಉನದ್ಕತ್ 2013 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಕೊಚ್ಚಿಯಲ್ಲಿ ತಮ್ಮ ಕೊನೆಯ ಏಕದಿನ ಪಂದ್ಯವನ್ನು ಆಡಿದ್ದರು. ಈ ಪಂದ್ಯದ ನಂತರ ಜಯದೇವ್ ಉನದ್ಕತ್ ಏಕದಿನ ತಂಡದಿಂದ ಹೊರಗುಳಿದಿದ್ದರು. ಐಪಿಎಲ್ 2023 ರ ಮೊದಲು ಆಸ್ಟ್ರೇಲಿಯಾ ವಿರುದ್ಧ ಆಡಿದ ODI ಸರಣಿಗೆ ಆಯ್ಕೆಯಾದರೂ ಸಹ ಪ್ಲೇಯಿಂಗ್ 11 ರಲ್ಲಿ ಭಾಗವಾಗಲು ಸಾಧ್ಯವಾಗಲಿಲ್ಲ. ಈ ಹಿನ್ನೆಲೆಯಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಈ ಸರಣಿ ಅವರಿಗೆ ಅತ್ಯಂತ ಮಹತ್ವದ್ದಾಗಿದೆ. 10 ವರ್ಷಗಳ ನಂತರ ಭಾರತ ಏಕದಿನ ತಂಡದ ಭಾಗವಾಗುವ ಅವಕಾಶವನ್ನು ಪಡೆಯಲಿದ್ದಾರೆ.


ಜಯದೇವ್ ಉನದ್ಕತ್ ಇತ್ತೀಚಿನ ದಿನಗಳಲ್ಲಿ ಭಾರತೀಯ ದೇಶೀಯ ಕ್ರಿಕೆಟ್‌ ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಇದೇ ಕಾರಣದಿಂದಾಗಿ ಭಾರತ ತಂಡಕ್ಕೆ ಇದೀಗ ಮರಳಲು ಸಾಧ್ಯವಾಗಿದೆ. ಕಳೆದ ವರ್ಷ ಡಿಸೆಂಬರ್‌ ನಲ್ಲಿ ಬಾಂಗ್ಲಾದೇಶ ಪ್ರವಾಸದಲ್ಲಿ ಜಯದೇವ್ ಉನದ್ಕತ್ ಭಾರತ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿದ್ದರು. ಈ ಸರಣಿಯ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ ನಲ್ಲಿ ಜಯದೇವ್ ಉನದ್ಕತ್ 50 ರನ್‌ ಗಳಿಗೆ 2 ವಿಕೆಟ್ ಪಡೆದರೆ, ಎರಡನೇ ಇನ್ನಿಂಗ್ಸ್‌ ನಲ್ಲಿ ಒಂದು ವಿಕೆಟ್ ಪಡೆದರು. ಇದಕ್ಕೂ ಮುನ್ನ 2010ರಲ್ಲಿ ಸೆಂಚುರಿಯನ್‌ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಪರ ಟೆಸ್ಟ್ ಪಂದ್ಯ ಆಡಿದ್ದರು.


ಟೀಂ ಇಂಡಿಯಾದ ಪರ ಇದುವರೆಗಿನ ಪ್ರದರ್ಶನ:


ಜಯದೇವ್ ಉನದ್ಕತ್ ಭಾರತ ಪರ 7 ಏಕದಿನ ಪಂದ್ಯಗಳಲ್ಲಿ 8 ವಿಕೆಟ್ ಹಾಗೂ 10 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 14 ವಿಕೆಟ್ ಪಡೆದಿದ್ದಾರೆ. ಇನ್ನು 2 ಟೆಸ್ಟ್ ಪಂದ್ಯಗಳಲ್ಲಿ 3 ವಿಕೆಟ್ಗಳನ್ನು ಕಬಳಿಸಿದ್ದಾರೆ.


ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಟೀಂ ಇಂಡಿಯಾ:


ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ರಿತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನದ್ಕತ್ ಮತ್ತು ನವದೀಪ್ ಸೈನಿ.


ಇದನ್ನೂ ಓದಿ:  ನನಸಾಯ್ತು ಕನಸು… ಆಟೋ ಚಾಲಕನ ಮಗನಿಗೆ ಕೊನೆಗೂ Team Indiaದಲ್ಲಿ ಸಿಕ್ಕೇಬಿಡ್ತು ಸ್ಥಾನ!


ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ರಿತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಯುಜ್ವೇಂದ್ರ ಚಹಾಲ್, ಕುಲದೀಪ್ ಯಾದವ್, ಜಯದೇವ್ ಉನದ್ಕತ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್ ಮತ್ತು ಮುಖೇಶ್ ಕುಮಾರ್.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.