Jitesh Sharma, IND vs IRE: ಭಾರತ ಮತ್ತು ಐರ್ಲೆಂಡ್ ನಡುವಿನ 3 ಪಂದ್ಯಗಳ ಟಿ20 ಅಂತಾರಾಷ್ಟ್ರೀಯ ಸರಣಿಯು ಆಗಸ್ಟ್ 18 ರಿಂದ ಆಗಸ್ಟ್ 23 ರವರೆಗೆ ನಡೆಯಲಿದೆ. ಐರ್ಲೆಂಡ್ ವಿರುದ್ಧದ ಈ ಟಿ20 ಅಂತರಾಷ್ಟ್ರೀಯ ಸರಣಿಯಲ್ಲಿ ಟೀಂ ಇಂಡಿಯಾದ ಯುವ ತಾರೆಯೊಬ್ಬನ ಅದೃಷ್ಟ ತೆರೆದುಕೊಳ್ಳಲಿದೆ, ಏಕೆಂದರೆ ಈ ಆಟಗಾರ ಪದಾರ್ಪಣೆ ಮಾಡುವ ಅವಕಾಶವನ್ನು ಪಡೆಯುವ ಸಾಧ್ಯತೆ ಇದೆ. ಈ ಕ್ರಿಕೆಟಿಗ ಭಾರತದ ಮುಂದಿನ ಮ್ಯಾಚ್ ಫಿನಿಶರ್ ಆಗುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ.
ಇದನ್ನೂ ಓದಿ: ಭಾರತ ಸರಣಿ ಸೋಲಲು ಈ ಆಟಗಾರನೇ ಕಾರಣ! ಪಬ್ಲಿಕ್’ನಲ್ಲಿ ನಾಯಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?
ಐಪಿಎಲ್ 2023 ರ ಋತುವಿನಲ್ಲಿ ಅದ್ಭುತ ಪ್ರದರ್ಶನ ನೀಡಿದ ಪಂಜಾಬ್ ಕಿಂಗ್ಸ್ ವಿಕೆಟ್-ಕೀಪರ್ ಬ್ಯಾಟ್ಸ್‌ಮನ್ ಜಿತೇಶ್ ಶರ್ಮಾ ಅವರು ಐರ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಟಿ 20 ಅಂತರರಾಷ್ಟ್ರೀಯ ಸರಣಿಗೆ ಭಾರತದ ಟಿ 20 ತಂಡಕ್ಕೆ ಆಯ್ಕೆಯಾಗಿದ್ದಾರೆ.
ಐಪಿಎಲ್ 2023 ರ ಋತುವಿನಲ್ಲಿ ಪಂಜಾಬ್ ಕಿಂಗ್ಸ್ ಫಿನಿಶರ್ ಜಿತೇಶ್ ಶರ್ಮಾ ಬುಲೆಟ್’ನಂತೆ ಸಿಕ್ಸರ್ಗಳನ್ನು ಸಿಡಿಸಿದ್ದರು. ಈ ಅದ್ಭುತ ಪ್ರದರ್ಶನದ ಆಧಾರದ ಮೇಲೆ ಜಿತೇಶ್ ಶರ್ಮಾ ಟೀಮ್ ಇಂಡಿಯಾಕ್ಕೆ ಎಂಟ್ರಿ ಕೊಟ್ಟಿದ್ದಾರೆ. ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಜಿತೇಶ್ ಶರ್ಮಾ ಅತ್ಯಂತ ಸ್ಫೋಟಕ ಬ್ಯಾಟಿಂಗ್ ಮತ್ತು ಚಿರತೆಯಂತೆ ವಿಕೆಟ್ ಕೀಪಿಂಗ್’ಗೆ ಹೆಸರುವಾಸಿಯಾಗಿದ್ದಾರೆ. ಜಿತೇಶ್ ಶರ್ಮಾ ಅವರು ತಮ್ಮ ಅಪಾಯಕಾರಿ ಆಟದಿಂದ ಮಹೇಂದ್ರ ಸಿಂಗ್ ಧೋನಿ ಅವರನ್ನು ನೆನಪಿಸುತ್ತಾರೆ.
ಐರ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಜಿತೇಶ್ ಶರ್ಮಾ ಟೀಂ ಇಂಡಿಯಾದ ಪ್ಲೇಯಿಂಗ್ 11ರ 6ನೇ ಕ್ರಮಾಂಕದಲ್ಲಿ ಆಡಬಹುದು. ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಜಿತೇಶ್ ಶರ್ಮಾ ಸ್ಫೋಟಕ ಬ್ಯಾಟಿಂಗ್’ನಲ್ಲಿ ಪರಿಣತಿ ಹೊಂದಿದ್ದಾರೆ. 26 ಐಪಿಎಲ್ ಪಂದ್ಯಗಳಲ್ಲಿ 159.24 ಸ್ಟ್ರೈಕ್ ರೇಟ್’ನಲ್ಲಿ 543 ರನ್ ಗಳಿಸಿದ್ದಾರೆ. ಇದರಲ್ಲಿ 33 ಸಿಕ್ಸರ್ ಮತ್ತು 44 ಬೌಂಡರಿಗಳನ್ನು ಬಾರಿಸಿದ್ದಾರೆ.
90 ಟಿ20 ಪಂದ್ಯಗಳಲ್ಲಿ 1 ಶತಕ ಮತ್ತು 9 ಅರ್ಧಶತಕ ಸೇರಿದಂತೆ 2096 ರನ್ ಗಳಿಸಿದ್ದಾರೆ. ಸದ್ಯ ಇವರು ಅತ್ಯುತ್ತಮ ಫಾರ್ಮ್‌ನಲ್ಲಿ ಓಡುತ್ತಿದ್ದು, ಸ್ಫೋಟಕ ಬ್ಯಾಟಿಂಗ್’ನಲ್ಲಿ ಪರಿಣತಿ ಹೊಂದಿದ್ದಾರೆ. ಐರ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಜಿತೇಶ್ ಶರ್ಮಾ ತಮ್ಮ ಮಾರಕ ಆಟದಿಂದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರನ್ನು ನೆನಪಿಸಲಿದ್ದಾರೆ.
ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ:
ಜಸ್ಪ್ರೀತ್ ಬುಮ್ರಾ (ನಾಯಕ), ರಿತುರಾಜ್ ಗಾಯಕ್ವಾಡ್ (ಉಪನಾಯಕ), ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ರವಿ ಬಿಷ್ಣೋಯ್, ಎಫ್. ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್, ಅವೇಶ್ ಖಾನ್.
ಇದನ್ನೂ ಓದಿ: “ವಿಶ್ವಕಪ್’ಗೆ ಅರ್ಹತೆ ಪಡೆಯದ ತಂಡದ ವಿರುದ್ಧ ಸೋಲು, ಇದಕ್ಕೆ ಕಾರಣ ಇವರೇ!”: ಹೆಸರು ಉಲ್ಲೇಖಿಸಿ ನಿಂದಿಸಿದ ವೆಂಕಟೇಶ್
ಭಾರತ vs ಐರ್ಲೆಂಡ್ T20 ಸರಣಿ ವೇಳಾಪಟ್ಟಿ (ಭಾರತೀಯ ಕಾಲಮಾನ):
1ನೇ ಟಿ20 ಪಂದ್ಯ, ಆಗಸ್ಟ್ 18, ರಾತ್ರಿ 7.30, ಡಬ್ಲಿನ್
2ನೇ ಟಿ20 ಪಂದ್ಯ, ಆಗಸ್ಟ್ 20, ರಾತ್ರಿ 7.30, ಡಬ್ಲಿನ್
ಮೂರನೇ ಟಿ20 ಪಂದ್ಯ, ಆಗಸ್ಟ್ 23, ರಾತ್ರಿ 7.30, ಡಬ್ಲಿನ್
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ