Indian Cricket Team, Karun Nair: ಭಾರತ ತಂಡವು ಪ್ರಸ್ತುತ ಐರ್ಲೆಂಡ್ ಪ್ರವಾಸದಲ್ಲಿದೆ (IND vs IRE). 3 ಪಂದ್ಯಗಳ ಟಿ20 ಸರಣಿಯಲ್ಲಿ ಟೀಂ ಇಂಡಿಯಾ ಗೆಲುವಿನೊಂದಿಗೆ ಶುಭಾರಂಭ ಮಾಡಿದೆ. ಈ ಸರಣಿಯಲ್ಲಿ ಟೀಂ ಇಂಡಿಯಾಗೆ ವೇಗಿ ಜಸ್ಪ್ರೀತ್ ಬುಮ್ರಾ ನಾಯಕತ್ವ ವಹಿಸುತ್ತಿದ್ದಾರೆ. ಈ ಮಧ್ಯೆ, ಆಟಗಾರನೊಬ್ಬ ಸುಮಾರು 6 ವರ್ಷಗಳಿಗೂ ಹೆಚ್ಚು ಕಾಲ ಭಾರತ ತಂಡದಿಂದ ಹೊರಗುಳಿದಿದ್ದು, ಒಂದೇ ಒಂದು ಅವಕಾಶಕ್ಕಾಗಿ ಹಾತೊರೆಯುತ್ತಿದ್ದಾನೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಐರ್ಲೆಂಡ್ ವಿರುದ್ಧ ಗೆಲ್ಲುತ್ತಿದ್ದಂತೆ ಜಸ್ಪ್ರೀತ್ ಬುಮ್ರಾ ಪಾಲಿಗೆ ಸೇರಿತು 2 ಶ್ರೇಷ್ಠ ದಾಖಲೆ! 17 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲು


ಈ ಆಟಗಾರ ಬೇರೆ ಯಾರೂ ಅಲ್ಲ ಕರುಣ್ ನಾಯರ್. ಕರುಣ್ ನಾಯರ್ ಸದ್ಯ ಮಹಾರಾಜ ಟಿ20 ಟ್ರೋಫಿಯಲ್ಲಿ ಆಡುತ್ತಿದ್ದು, ಮೈಸೂರು ವಾರಿಯರ್ಸ್ ತಂಡದ ನಾಯಕತ್ವವನ್ನು ನಿಭಾಯಿಸುತ್ತಿದ್ದಾರೆ. ಸತತ ಪಂದ್ಯಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ್ದು, ಬ್ಯಾಟಿಂಗ್ ಮೂಲಕ ರನ್ ಕಲೆ ಹಾಕುತ್ತಲೇ ಇದ್ದಾರೆ. ಶುಕ್ರವಾರ ಶಿವಮೊಗ್ಗ ಲಯನ್ಸ್ ವಿರುದ್ಧದ ಪಂದ್ಯದಲ್ಲಿ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಕರುಣ್ ನಾಯರ್ 33 ಎಸೆತಗಳಲ್ಲಿ 9 ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 60 ರನ್ ಕಲೆ ಹಾಕಿದ್ದರು.  ಈ ಪಂದ್ಯದ ಮೊದಲು ಮಿಸ್ಟಿಕ್ಸ್ ತಂಡದ ವಿರುದ್ಧ 57 ಮತ್ತು ಡ್ರಾಗನ್ಸ್ ವಿರುದ್ಧ 77 ರನ್ ಗಳಿಸಿದ್ದರು.


ದೇಶೀಯ ಕ್ರಿಕೆಟ್‌ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ಕರುಣ್ ನಾಯರ್ 6 ವರ್ಷಗಳಿಗೂ ಹೆಚ್ಚು ಕಾಲ ಭಾರತ ತಂಡದಿಂದ ಹೊರಗುಳಿಯುತ್ತಿದ್ದಾರೆ. 2017 ರಲ್ಲಿ ಭಾರತಕ್ಕಾಗಿ ಕೊನೆಯ ಟೆಸ್ಟ್ ಪಂದ್ಯವನ್ನು ಆಡಿದ್ದರು. ಮಾರ್ಚ್ 2017 ರಲ್ಲಿ ಧರ್ಮಶಾಲಾದಲ್ಲಿ ಆಸ್ಟ್ರೇಲಿಯಾ ವಿರುದ್ಧ ಆಡಿದ ಟೆಸ್ಟ್ ಪಂದ್ಯದಲ್ಲಿ ಕೇವಲ 5 ರನ್ ಗಳಿಸಿದ್ದರು. ಇದಾದ ಬಳಿಕ ಅವರಿಗೆ ಮತ್ತೆ ಟೀಂ ಇಂಡಿಯಾದಲ್ಲಿ ಅವಕಾಶ ಸಿಗಲಿಲ್ಲ.


ಇದನ್ನೂ ಓದಿ: ಮೊದಲ ಶತಕ ಸಿಡಿಸಿದ ಭಾರತೀಯ ಕ್ರಿಕೆಟಿಗ ಯಾರು ಗೊತ್ತಾ? ಈತ ಸಚಿನ್, ಧೋನಿ, ಕೊಹ್ಲಿಗಿಂತಲೂ ಶ್ರೀಮಂತ ವ್ಯಕ್ತಿ


ಕರುಣ್ ನಾಯರ್ ಭಾರತ ಪರ ಕೇವಲ 8 ಪಂದ್ಯಗಳನ್ನು ಆಡಿದ್ದು, ಟೆಸ್ಟ್ ಮಾದರಿಯಲ್ಲೂ ತ್ರಿಶತಕ ಬಾರಿಸಿದ್ದಾರೆ. (ಟೆಸ್ಟ್ ಪಂದ್ಯಗಳಲ್ಲಿ 374 ರನ್ ಗಳಿಸಿದ್ದಾರೆ). ಇದಲ್ಲದೇ 2 ಏಕದಿನ ಪಂದ್ಯಗಳಲ್ಲಿ 46 ರನ್, ಪ್ರಥಮ ದರ್ಜೆ ಕ್ರಿಕೆಟ್‌’ನಲ್ಲಿ 85 ಪಂದ್ಯಗಳ 136 ಇನ್ನಿಂಗ್ಸ್‌’ಗಳಲ್ಲಿ ಒಟ್ಟು 5922 ರನ್ ಗಳಿಸಿದ್ದಾರೆ. ಮತ್ತೊಂದೆಡೆ ಲಿಸ್ಟ್ A ನಲ್ಲಿ 90 ಪಂದ್ಯಗಳನ್ನಾಡಿದ್ದು, ಅದರಲ್ಲಿ 30.71 ರ ಸರಾಸರಿಯಲ್ಲಿ 2119 ರನ್ ಮತ್ತು 150 T20 ಪಂದ್ಯಗಳಲ್ಲಿ 2989 ರನ್’ಗಳನ್ನು ಗಳಿಸಿದ್ದಾರೆ. ಇದರಲ್ಲಿ 2 ಶತಕಗಳು ಮತ್ತು 16 ಅರ್ಧ ಶತಕಗಳು ಸೇರಿವೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ