Kolkata Knight Riders vs Chennai Super Kings: ಡೆವಾಲ್ಡ್ ಬ್ರೆವಿಸ್ (52 ರನ್) ಸ್ಫೋಟಕ ಅರ್ಧಶತಕ ಹಾಗೂ ನೂರ್ ಅಹ್ಮದ್ (31ಕ್ಕೆ 4) ಸ್ಪಿನ್ ಮೋಡಿಯ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 2 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿತು. ಬುಧವಾರ ಕೋಲ್ಕತ್ತಾ ಈಡನ್ ಗಾರ್ಡನ್‌ನಲ್ಲಿ ನಡೆದ ಐಪಿಎಲ್ ಟೂರ್ನಿಯ 57ನೇ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 179 ರನ್ ಗಳಿಸಿತು.
ಕೆಕೆಆರ್ ನೀಡಿದ್ದ 180 ರನ್‌ಗಳ ಗುರಿ ಹಿಂಬಾಲಿಸಿದ ಚೆನ್ನೈ 19.4 ಓವರ್‌ಗಳಿಗೆ 8 ವಿಕೆಟ್ ನಷ್ಟಕ್ಕೆ 183 ರನ್ ಗಳಿಸಿ ಟೂರ್ನಿಯಲ್ಲಿ 3 ಜಯ ಗಳಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ಪರ ಅಜಿಂಕ್ಯ ರಹಾನೆ, ಆಂಡ್ರೆ ರಸೆಲ್ ಹಾಗೂ ಮನೀಷ್ ಪಾಂಡೆ ಉತ್ತಮ ಬ್ಯಾಟಿಂಗ್ ಮಾಡಿದರು. ಕೆಕೆಆರ್ ನಾಯಕ ಅಜಿಂಕ್ಯ ರಹಾನೆ 33 ಎಸೆತಗಳಲ್ಲಿ 2 ಸಿಕ್ಸರ್ ಹಾಗೂ 4 ಬೌಂಡರಿ ಇದ್ದ 48 ರನ್‌ಗಳನ್ನು ಕಲೆ ಹಾಕಿದರು. ಅರ್ಧಶತಕದಂಚಿನಲ್ಲಿ ಅವರು ರವೀಂದ್ರ ಜಡೇಜಾಗೆ ವಿಕೆಟ್ ಒಪ್ಪಿಸಿದರು.
The magician at work ?
For his ? spell with the ball, Noor Ahmad bags the Player of the Match award ?
Relive his spell ▶ https://t.co/OkzL9cOq65 #TATAIPL | #CSKvKKR pic.twitter.com/KT2XBT1h9g
— IndianPremierLeague (@IPL) May 7, 2025
ರಹಾನೆ ವಿಕೆಟ್ ಒಪ್ಪಿಸಿದ ಬಳಿಕ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಕನ್ನಡಿಗ ಮನೀಷ್ ಪಾಂಡೆ 28 ಎಸೆತಗಳಲ್ಲಿ 36 ರನ್ ಸಿಡಿಸಿದರೆ, ಆಂಡ್ರೆ ರಸೆಲ್ 21 ಎಸೆತಗಳಲ್ಲಿ 38 ರನ್ ಸಿಡಿಸಿದರು. ಆ ಮೂಲಕ ಕೆಕೆಆರ್ 150ರ ಗಡಿ ದಾಟಲು ನೆರವಾದರು. ಚೆನ್ನೈ ತಂಡದ ನೂರ್ ಅಹ್ಮದ್ ಸ್ಪಿನ್ ಮೋಡಿ ಮಾಡಿದರು. ನಾಲ್ಕು ಓವರ್‌ಗಳಲ್ಲಿ 31 ರನ್ ನೀಡಿದ ಅವರು 4 ವಿಕೆಟ್‌ಗಳನ್ನ ಕಬಳಿಸಿ ಸಿಎಸ್‌ಕೆ ಪರ ಯಶಸ್ವಿ ಬೌಲರ್ ಎನಿಸಿಕೊಂಡರು. ರವೀಂದ್ರ ಜಡೇಜಾ ಹಾಗೂ ಅನ್ಶುಲ್ ಕಾಂಬೋಜ್ ತಲಾ ಒಂದೊಂದು ವಿಕೆಟ್ ಕಬಳಿಸಿದರು.
180 ರನ್‌ಗಳ ಗುರಿ ಹಿಂಬಾಲಿಸಿದ ಚೆನ್ನೈ ಪರ ಡೆವಾಲ್ಡ್ ಬ್ರೆವಿಸ್ ಕೇವಲ 25 ಎಸೆತಗಳಲ್ಲಿ 4 ಬೌಂಡರಿ ಮತ್ತು 4 ಸಿಕ್ಸರ್ ಇದ್ದ 52 ರನ್ ಚಚ್ಚಿದರು. ನಂತರ ಕೆಳೆ ಮಧ್ಯಮ ಕ್ರಮಾಂಕದಲ್ಲಿ ಶಿವಂ ದುಬೆ 40 ಎಸೆಗಳಲ್ಲಿ 2 ಬೌಂಡರಿ ಮತ್ತು 3 ಸಿಕ್ಸರ್ ಇದ್ದ 45 ರನ್ ಗಳಿಸಿದರೆ, ಇದಕ್ಕೂ ಮುನ್ನ ಊರ್ವಲ್ ಪಟೇಲ್ ಕೇವಲ 11 ಎಸೆತಗಳಲ್ಲಿ 1 ಬೌಂಡರಿ ಮತ್ತು 4 ಸಿಕ್ಸರ್ ಇದ್ದ 31 ರನ್ ಸಿಡಿಸಿದ್ದರು. ಕೊನೆಯ ಓವರ್‌ನಲ್ಲಿ ಧೋನಿ ಸಿಕ್ಸರ್ ಬಾರಿಸಿದ್ದು ಹಾಗೂ ಅನ್ಶುಲ್ ಕಾಂಬೋಜ್ ಬೌಂಡರಿ ಮೂಲಕ ಗೆಲುವಿನ ರನ್ ಬಾರಿಸಿದ್ದು ವಿಶೇಷವಾಗಿತ್ತು.
ಕೆಕೆಆರ್ ಪ್ಲೇಆಫ್ಸ್ ಹಾದಿ ಮತ್ತಷ್ಟು ಕಠಿಣ
ಈ ಪಂದ್ಯದಲ್ಲಿ ಸೋಲು ಅನುಭವಿಸಿದ ಕೋಲ್ಕತಾದ ಪ್ಲೇಆಫ್ಸ್ ಹಾದಿ ಮತ್ತಷ್ಟು ಕಠಿಣವಾಗಿದೆ. ಇದೀಗ 11 ಅಂಕಗಳನ್ನು ಹೊಂದಿರುವ ಕೆಕೆಆರ್, ಇನ್ನುಳಿದ ಎರಡೂ ಪಂದ್ಯಗಳನ್ನು ಗೆಲ್ಲಬೇಕಾದ ಒತ್ತಡಕ್ಕೆ ಸಿಲುಕಿದೆ. ಒಂದು ವೇಳೆ ಗೆದ್ದರೂ ಕೆಕೆಆರ್‌ನ ನಾಕ್‌ಔಟ್ ಭವಿಷ್ಯ ಇತರೆ ತಂಡಗಳ ಫಲಿತಾಂಶದ ಮೇಲೆ ಅವಲಂಬಿತವಾಗಿರುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.









