ಮುಂಬೈ: 15ನೇ ಆವೃತ್ತಿಯ ಐಪಿಎಲ್ ಟೂರ್ನಿ(Indian Premier League 2022)ಯ 14ನೇ ಪಂದ್ಯದಲ್ಲಿ ಇಂದು ಬಲಿಷ್ಠ ತಂಡಗಳು ಮುಖಾಮುಖಿಯಾಗುತ್ತಿವೆ. ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯಲಿರುವ ಮಹತ್ವದ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್‍ಗೆ ಮುಂಬೈ ಇಂಡಿಯನ್ಸ್(KKR vs MI) ಸವಾಲು ಎದುರಾಗಿದೆ.


COMMERCIAL BREAK
SCROLL TO CONTINUE READING

ಮುಂಬೈ ಇಂಡಿಯನ್ಸ್(Mumbai Indians) ತಾನಾಡಿರುವ 2 ಪಂದ್ಯಗಳಲ್ಲಿಯೂ ಹೀನಾಯ ಸೋಲು ಕಂಡಿದೆ. ದೆಹಲಿ ಕ್ಯಾಪಿಟಲ್ಸ್ ಎದುರಿನ ಮೊದಲ ಪಂದ್ಯದಲ್ಲಿ 4 ವಿಕೆಟ್‍ಗಳಿಂದ ಸೋಲು ಕಂಡಿದ್ದ ಮುಂಬೈ 2ನೇ ಪಂದ್ಯದಲ್ಲಿ ರಾಜಸ್ಥಾನ್ ವಿರುದ್ಧ 23 ರನ್‍ಗಳಿಂದ ಸೋಲು ಕಂಡಿತ್ತು. ಹೀಗಾಗಿ ಇಂದಿನ ಪಂದ್ಯ ರೋಹಿತ್ ಶರ್ಮಾ ಪಡೆಗೆ ಬಹುಮುಖ್ಯವಾಗಿದೆ. ಬಲಿಷ್ಠ ಬ್ಯಾಟ್ಸ್‍ಮನ್‍ಗಳನ್ನು ಹೊಂದಿದ್ದರು ಮುಂಬೈ ಎದುರಾಳಿ ತಂಡದ ವಿರುದ್ಧ ತನ್ನ ಸಾಮರ್ಥ್ಯವನ್ನು ತೋರುವಲ್ಲಿ ವಿಫಲವಾಗುತ್ತಿದೆ.


ಇದನ್ನೂ ಓದಿ: IPL 2022: ಸಿಎಸ್‌ಕೆ ತಂಡದ ನಿರಂತರ ಸೋಲಿಗೆ 3 ದೊಡ್ಡ ಕಾರಣಗಳು


5 ಬಾರಿ ಐಪಿಎಲ್ ಚಾಂಪಿಯನ್ ಆಗಿರುವ ಮುಂಬೈಗೆ ಇಂದು ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಹಳೆಯ ಪಂದ್ಯಗಳಲ್ಲಿ ಮಾಡಿಕೊಂಡ ತಪ್ಪುಗಳನ್ನು ತಿದ್ದುಕೊಂಡು ರೋಹಿತ್(Rohit Sharma) ಪಡೆ ಕಣಕ್ಕಿಳಿಯಬೇಕಿದೆ. ಬ್ಯಾಟಿಂಗ್‍ನಲ್ಲಿ ಚೆನ್ನಾಗಿ ಆಡಿದರೂ ಬೌಲಿಂಗ್‍ನಲ್ಲಿ ಮುಂಬೈ ವೈಫಲ್ಯತೆ ಕಾಣುತ್ತಿದೆ. ಹೀಗಾಗಿ ಬೌಲಿಂಗ್ ಸುಧಾರಿಸಿಕೊಳ್ಳುವ ಮೂಲಕ ಎದುರಾಳಿ ತಂಡವನ್ನು ಅಲ್ಪಮೊತ್ತಕ್ಕೆ ಕಟ್ಟಿಹಾಕುವ ತಂತ್ರವನ್ನು ಪ್ರಯೋಗಿಸಬೇಕಿದೆ.


ಇನ್ನು ಶ್ರೇಯಸ್ ಅಯ್ಯರ್(Shreyas Iyer) ನೇತೃತ್ವದ ಕೆಕೆಆರ್ ಮತ್ತೊಂದು ಗೆಲುವಿನ ನಿರೀಕ್ಷೆಯಲ್ಲಿದೆ. ಮೊದಲ ಪಂದ್ಯದಲ್ಲಿ ಚೆನ್ನೈ ವಿರುದ್ಧ ಭರ್ಜರಿ ಜಯ ಸಾಧಿಸಿದ್ದ ಕೆಕೆಆರ್ 2ನೇ ಪಂದ್ಯದಲ್ಲಿ ಆರ್‍ಸಿಬಿ ಎದುರು ಸೋಲು ಕಂಡಿತ್ತು. 3ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್‍ ತಂಡವನ್ನು 6 ವಿಕೆಟ್‍ಗಳಿಂದ ಮಣಿಸಿರುವ ಅಯ್ಯರ್ ಪಡೆ ಗೆಲುವಿನ ಉತ್ಸಾಹದಲ್ಲಿದೆ.


RCB vs RR:ಆರ್‌ಸಿಬಿ-ಆರ್‌ಆರ್‌ ಪಂದ್ಯದಲ್ಲಿ ಕಳಪೆ ಅಂಪೈರಿಂಗ್‌: ಸಾಮಾಜಿಕ ಜಾಲತಾಣದಲ್ಲಿ ಚರ್ಚೆ


ಬ್ಯಾಟಿಂಗ್-ಬೌಲಿಂಗ್ ಸೇರಿದಂತೆ ಎಲ್ಲಾ ವಿಭಾಗಗಳಲ್ಲಿಯೂ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಕೆಕೆಆರ್(Kolkata Knight Riders) ಎದುರಾಳಿ ತಂಡಕ್ಕೆ ಮಣ್ಣುಮುಕ್ಕಿಸುವ ತಂತ್ರಗಳನ್ನು ಪ್ರತಿಪಂದ್ಯದಲ್ಲಿಯೂ ಪ್ರಯೋಗಿಸುತ್ತಿದೆ. ಅಯ್ಯರ್ ನಾಯಕತ್ವ, ಯುವ ಆಟಗಾರರಿಂದ ತುಂಬಿರುವ ಕೆಕೆಆರ್ ಬಲಿಷ್ಠ ತಂಡವಾಗಿ ಗುರುತಿಸಿಕೊಂಡಿದೆ. ಅಜಿಂಕ್ಯ ರಹಾನೆ, ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ, ಆಂಡ್ರೆ ರಸೆಲ್, ಸುನಿಲ್ ನರೈನ್, ಟಿಮ್ ಸೌಥಿ, ಶಿವಂ ಮಾವಿ, ಉಮೇಶ್ ಯಾದವ್, ವರುಣ್ ಚಕ್ರವರ್ತಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ತಂಡ ಪ್ಲಸ್ ಪಾಯಿಂಟ್ ಆಗಿದೆ. ಉಭಯ ತಂಡಗಳು ಬಲಿಷ್ಠವಾಗಿರುವುದರಿಂದ ಇಂದಿನ ಪಂದ್ಯ ಬಲುರೋಚಕತೆಯಿಂದ ಕೂಡಿರಲಿದೆ. ಎರಡೂ ತಂಡಗಳ ನಡುವೆ ಗೆಲುವಿಗಾಗಿ ಭರ್ಜರಿ ಪೈಪೋಟಿ ನಡೆಯಲಿದ್ದು, ಪ್ರೇಕ್ಷಕರಿಗೆ ಬರಪೂರ ಮನರಂಜನೆ ಸಿಗಲಿದೆ.


ಎರಡೂ ತಂಡಗಳ ಸ್ಕ್ವಾಡ್ ಈ ರೀತಿ ಇದೆ:


ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಅನ್ಮೋಲ್‌ಪ್ರೀತ್ ಸಿಂಗ್, ತಿಲಕ್ ವರ್ಮಾ, ಕೀರನ್ ಪೊಲಾರ್ಡ್, ಟಿಮ್ ಡೇವಿಡ್, ಡೇನಿಯಲ್ ಸಾಮ್ಸ್, ಮುರುಗನ್ ಅಶ್ವಿನ್, ಜಸ್‌ಪ್ರೀತ್ ಬುಮ್ರಾ, ಟೈಮಲ್ ಮಿಲ್ಸ್, ಬಾಸಿಲ್ ಥಂಪಿ, ಸೂರ್ಯಕುಮಾರ್ ಯಾದವ್, ಜಯದೇವ್ ಉನದ್ಕತ್, ಫ್ಯಾಬಿಯನ್ ಅಲೆನ್, ಸಂಜಯ್ ಯಾದವ್, ರಿಲೆ ಮೆರೆಡಿತ್, ರಮಣದೀಪ್ ಸಿಂಗ್, ಮಯಾಂಕ್ ಮಾರ್ಕಂಡೆ, ಆರ್ಯನ್ ಜುಯಲ್, ಅರ್ಜುನ್ ತೆಂಡೂಲ್ಕರ್, ಹೃತಿಕ್ ಶೋಕೀನ್, ರಾಹುಲ್ ಬುದ್ಧಿ, ಅರ್ಷದ್ ಖಾನ್, ಡೆವಾಲ್ಡ್ ಬ್ರೆವಿಸ್


ಕೋಲ್ಕತ್ತಾ ನೈಟ್ ರೈಡರ್ಸ್: ಶ್ರೇಯಸ್ ಅಯ್ಯರ್ (ನಾಯಕ), ಸ್ಯಾಮ್ ಬಿಲ್ಲಿಂಗ್ಸ್ (ವಿಕೆಟ್ ಕೀಪರ್), ಅಜಿಂಕ್ಯ ರಹಾನೆ, ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ, ಆಂಡ್ರೆ ರಸೆಲ್, ಸುನಿಲ್ ನರೈನ್, ಟಿಮ್ ಸೌಥಿ, ಶಿವಂ ಮಾವಿ, ಉಮೇಶ್ ಯಾದವ್, ವರುಣ್ ಚಕ್ರವರ್ತಿ, ಮೊಹಮ್ಮದ್ ನಬಿ, ಪ್ಯಾಟ್ ಕಮಿನ್ಸ್, ಪ್ಯಾಟ್ ಜಮಿನ್ಸ್ , ಚಾಮಿಕಾ ಕರುಣಾರತ್ನೆ, ಬಾಬಾ ಇಂದ್ರಜಿತ್, ರಿಂಕು ಸಿಂಗ್, ಅನುಕುಲ್ ರಾಯ್, ಪ್ರಥಮ್ ಸಿಂಗ್, ಅಭಿಜೀತ್ ತೋಮರ್, ರಸಿಖ್ ಸಲಾಂ, ಅಮನ್ ಹಕೀಮ್ ಖಾನ್, ಅಶೋಕ್ ಶರ್ಮಾ, ರಮೇಶ್ ಕುಮಾರ್


ಐಪಿಎಲ್‌ ಪಂದ್ಯ: 14


ಕೋಲ್ಕತ್ತಾ ನೈಟ್ ರೈಡರ್ಸ್ vs ಮುಂಬೈ ಇಂಡಿಯ್ಸ್


ದಿನಾಂಕ: ಏಪ್ರಿಲ್ 6, ಬುಧವಾರ


ಸ್ಥಳ: ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ


ಸಮಯ: ಸಂಜೆ 7.30ಕ್ಕೆ


=======================================================================================


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.