ಕೊಲ್ಕತ್ತಾ: ಇಲ್ಲಿನ ಈಡನ್ ಗಾರ್ಡನ್ ನಲ್ಲಿ ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ಕೊಲ್ಕತಾ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 1 ರನ್ ಗಳ ರೋಚಕ ಗೆಲುವು ಸಾಧಿಸಿದೆ.
ಟಾಸ್ ಗೆದ್ದ ಬೆಂಗಳೂರು ತಂಡವು ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು.ಇದೆ ವೇಳೆ ಮೊದಲ ಬ್ಯಾಟಿಂಗ್ ಅವಕಾಶ ಪಡೆದ ಕೊಲ್ಕತ್ತಾ ತಂಡವು 20 ಓವರ್ ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 222 ರನ್ ಗಳಿಸಿತು.ಕೋಲ್ಕತ್ತಾ ತಂಡದ ಪರವಾಗಿ ಸಾಲ್ಟ್ ಕೇವಲ 14 ಎಸೆತಗಳಲ್ಲಿ ಮೂರು ಸಿಕ್ಸರ್ ಹಾಗೂ ಏಳು ಬೌಂಡರಿಗಳ ನೆರವಿನಿಂದ 48 ರನ್ ಗಳಿಸಿದರೆ ಇನ್ನೊಂದೆಡೆಗೆ ಶ್ರೇಯಸ್ ಅಯ್ಯರ್ 36 ಎಸೆತಗಳಲ್ಲಿ ಏಳು ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 50 ರನ್ ಗಳಿಸುವ ಮೂಲಕ ತಂಡಕ್ಕೆ ನೆರವಾದರು.
📽️ WATCH: A jaw-dropping finish!
The final delivery that sealed the win for the @KKRiders 👏👏
Scorecard ▶️ https://t.co/hB6cFsk9TT#TATAIPL | #KKRvRCB pic.twitter.com/BR5RYrOeDM
— IndianPremierLeague (@IPL) April 21, 2024
ಇನ್ನೊಂದೆಡೆಗೆ ಕೊಲ್ಕತ್ತಾ ನೀಡಿದ 223 ರನ್ ಗಳ ಗೆಲುವಿನ ಗುರಿಯನ್ನು ಬೆನ್ನತ್ತಿದ ಬೆಂಗಳೂರು ತಂಡವು ವಿಲ್ ಜಾಕ್ಸ್ 55, ರಜತ್ ಪಟಿದಾರ್ 52 ರನ್ ಗಳಿಸುವ ತಂಡಕ್ಕೆ ಗೆಲುವಿನ ಆಸೆ ಮೂಡಿಸಿದ್ದರು.ಒಂದೆಡೆ ವಿಕೆಟ್ ಉರುಳುತ್ತಿದ್ದರು ಇತ್ತ ಕಡೆ ಬೆಂಗಳೂರು ತಂಡದ ಬ್ಯಾಟ್ಸ್ಮನ್ ಗಳು ಗೆಲುವಿನ ಪ್ರಯತ್ನವನ್ನು ಮುಂದುವರೆಸಿದ್ದರು.
ಕರ್ನ ಶರ್ಮಾ ಕೇವಲ 7 ಎಸೆತಗಳಲ್ಲಿ 20 ರನ್ ಗಳನ್ನು ಗಳಿಸುವ ಮೂಲಕ ತಂಡವನ್ನು ಗೆಲುವಿನ ಹಂತಕ್ಕೆ ತಂದಿದ್ದರಾದರೂ ಅಂತಿಮವಾಗಿ ಬೆಂಗಳೂರು ತಂಡವು 20 ಓವರ್ ಗಳಲ್ಲಿ ಎಲ್ಲ ವಿಕೆಟ್ ಗಳನ್ನು ಕಳೆದುಕೊಂಡು 221 ರನ್ ಗಳನ್ನಷ್ಟೇ ಗಳಿಸಲು ಸಾಧ್ಯವಾಯಿತು. ಆ ಮೂಲಕ ಕೇವಲ ಒಂದು ರನ್ ಅಂತರದಿಂದ ಸೋಲನ್ನು ಅನುಭವಿಸಿತು.
So close, yet so far. This hurts! 💔
Hard luck, boys! You never gave up and kept at it right until the final ball. ❤️🩹#PlayBold #ನಮ್ಮRCB #IPL2024 #KKRvRCB pic.twitter.com/TfjrxpQbNf
— Royal Challengers Bengaluru (@RCBTweets) April 21, 2024
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.