KL Rahul-Athiya Shetty Marriage Date: ಬಾಲಿವುಡ್ ಖ್ಯಾತ ನಟ ಸುನೀಲ್ ಶೆಟ್ಟಿ ಅವರ ಪುತ್ರಿ ನಟಿ ಅಥಿಯಾ ಶೆಟ್ಟಿ ಮತ್ತು ಭಾರತೀಯ ಕ್ರಿಕೆಟಿಗ ಕೆಎಲ್ ರಾಹುಲ್ ಬಹಳ ಸಮಯದಿಂದ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ಎಲ್ಲರಿಗೂ ತಿಳಿದಿದೆ. ಆದರೆ ಈ ಬಗ್ಗೆ ಇಬ್ಬರೂ ಸಹ ಎಂದಿಗೂ ಗುಟ್ಟು ಬಿಟ್ಟುಕೊಟ್ಟಿಲ್ಲ. ಅನೇಕ ಸಂದರ್ಭಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡಿರುವ ಈ ಜೋಡಿಯನ್ನು ಎಲ್ಲರೂ ‘ಕಪಲ್’ ಎಂದೇ ಕರೆಯುತ್ತಿದ್ದರು. ಇದೀಗ ಈ ಜೋಡಿ ಶೀಘ್ರವೇ ಹಸೆಮಣೆ ಏರಲಿದೆ ಎಂದು ಹಲವು ಮಾಧ್ಯಮಗಳು ವರದಿ ಪ್ರಸಾರ ಮಾಡುತ್ತಿವೆ.


COMMERCIAL BREAK
SCROLL TO CONTINUE READING

ಅಥಿಯಾ ಮತ್ತು ಕೆಎಲ್ ರಾಹುಲ್ ಅನೇಕ ಸಂದರ್ಭದಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಇದೀಗ, ಇಬ್ಬರೂ ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎಂದು ಹಲವು ಮಾಧ್ಯಮಗಳಲ್ಲಿ ಹೇಳಲಾಗುತ್ತಿದೆ. ಇನ್ನೂ ಕೆಲ ಮಾಧ್ಯಮ ವರದಿಯಲ್ಲಿ ಮದುವೆಯ ದಿನಾಂಕ ಕೂಡ ಸುದ್ದಿಯಾಗಿದೆ. ಕೆಎಲ್ ರಾಹುಲ್ ಮತ್ತು ಅಥಿಯಾ ಮದುವೆ ದಿನಾಂಕ ಯಾವುದು ಎಂದು ತಿಳಿಯೋಣ.


ಇದನ್ನೂ ಓದಿ: World Test Championship: ಪಾಕಿಸ್ತಾನದ ಸೋಲಿನಿಂದ ಟೀಂ ಇಂಡಿಯಾಗೆ ಲಾಭ: 10 ವರ್ಷಗಳ ಬಳಿಕ ಕೈಸೇರುತ್ತಾ ಐಸಿಸಿ ಟ್ರೋಫಿ!


ಪಿಂಕ್ ವಿಲ್ಲಾ ಮಾಧ್ಯಮದ ವರದಿಯ ಪ್ರಕಾರ, ಕೆಎಲ್ ರಾಹುಲ್ ಮತ್ತು ಅಥಿಯಾ ಶೆಟ್ಟಿ 2023ರ ಜನವರಿ ಕೊನೆಯ ವಾರದಲ್ಲಿ ಮದುವೆಯಾಗಬಹುದು. ಅವರ ಮದುವೆ ಕಾರ್ಯಕ್ರಮದಲ್ಲಿ ಕುಟುಂಬಸ್ಥರು ಮತ್ತು ಆಪ್ತರು ಮಾತ್ರ ಪಾಲ್ಗೊಳ್ಳಲಿದ್ದಾರೆ. ಡಿಸೆಂಬರ್ 2022 ರ ಅಂತ್ಯದ ವೇಳೆಗೆ ಅತಿಥಿಗಳಿಗೆ ಆಹ್ವಾನಗಳು ಬರಲಿವೆ ಎಂದು ಹೇಳಲಾಗುತ್ತಿದೆ.


ಪಿಂಕ್ ವಿಲ್ಲಾ ವರದಿಯ ಪ್ರಕಾರ, ಕೆಎಲ್ ರಾಹುಲ್ ಮತ್ತು ಅಥಿಯಾ ಶೆಟ್ಟಿ ಅವರ ವಿವಾಹದ ಎಲ್ಲಾ ಕಾರ್ಯಕ್ರಮಗಳು ಜನವರಿ 21 ರಿಂದ ಜನವರಿ 23, 2023 ರವರೆಗೆ ನಡೆಯಲಿದೆ. ಈ ದಿನಾಂಕಗಳ ಬಗ್ಗೆ ಪ್ರಸ್ತುತ ಇಬ್ಬರಲ್ಲಿ ಯಾರೂ ದೃಢೀಕರಣವನ್ನು ನೀಡಿಲ್ಲ. ಆದರೆ ವರದಿಗಳ ಪ್ರಕಾರ ಈ ದಿನಾಂಕಗಳು ಉತ್ತಮವಾಗಿದ್ದು, ಸಿದ್ಧತೆಗಳು ಭರದಿಂದ ಸಾಗುತ್ತಿದೆ.


ದಕ್ಷಿಣ ಭಾರತದ ಅದ್ಧೂರಿ ವಿವಾಹ ಸಂಪ್ರದಾಯದ ಪ್ರಕಾರ ಮದುವೆಯಾಗಲಿದ್ದು, ಇದರಲ್ಲಿ ಅರಿಶಿನ, ಮೆಹಂದಿ, ಸಂಗೀತ್ ಎಲ್ಲವೂ ಇರಲಿದೆ ಎಂದು ಹೇಳಲಾಗುತ್ತಿದೆ. ಸುನೀಲ್ ಶೆಟ್ಟಿ ಅವರ ಮನೆ ‘ಜಹಾನ್’ನಲ್ಲಿ ಈ ಮದುವೆ ನಡೆಯಲಿದೆ ಎನ್ನಲಾಗುತ್ತಿದೆ.


ಇದನ್ನೂ ಓದಿ: Sania Mirza - Shoaib Malik : ಸಾನಿಯಾ ಜೊತೆಗಿನ ವಿಚ್ಛೇದನದ ವದಂತಿ ಕುರಿತು ಶೋಯೆಬ್ ಸ್ಪಷ್ಟನೆ


ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದ ರಾಹುಲ್:


ಮೂಲತಃ ಮಂಗಳೂರಿನವರಾದ ಕ್ರಿಕೆಟಿಗ ಕೆ.ಎಲ್.ರಾಹುಲ್ ಇತ್ತೀಚೆಗೆಯಷ್ಟೇ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ್ದರು. ಆಸ್ಟ್ರೇಲಿಯಾದಲ್ಲಿ ನಡೆದಿದ್ದ ಟಿ-20 ವಿಶ್ವಕಪ್‌ನಲ್ಲಿ ಕೆ.ಎಲ್‌.ರಾಹುಲ್ ಕಳಪೆ ಪ್ರದರ್ಶನ ತೋರಿದ್ದರು. ಈ ಹಿನ್ನೆಲೆಯಲ್ಲಿ ಕುಟುಂಬದವರೊಂದಿಗೆ ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು. ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಿದ ಬಳಿಕ ಕೆ‌.ಎಲ್.ರಾಹುಲ್ ಮಹಾಪೂಜೆಯಲ್ಲಿ ಭಾಗಿಯಾಗಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.