KL Rahul career: ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯವು ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಈ ಪಂದ್ಯವು ಟೀಂ ಇಂಡಿಯಾಕ್ಕೆ ಬಹಳ ಮಹತ್ವದ್ದಾಗಿದೆ ಏಕೆಂದರೆ ಇದನ್ನು ಗೆದ್ದರೆ ಮಾತ್ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ (ಡಬ್ಲ್ಯುಟಿಸಿ ಫೈನಲ್) ಫೈನಲ್‌ಗೆ ಟಿಕೆಟ್ ಪಡೆಯಲು ಸಾಧ್ಯವಾಗುತ್ತದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ರಾಷ್ಟ್ರೀಯ ಪಿಂಚಣಿ ವ್ಯವಸ್ಥೆಯಲ್ಲಿ ₹3000 ಹೂಡಿಕೆ ಮಾಡಿ, ₹44,00,000 ಲಕ್ಷ ಪಡೆಯಿರಿ!


ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಆರಂಭಿಕ ಎರಡು ಪಂದ್ಯಗಳಲ್ಲಿ ನಾಯಕ ರೋಹಿತ್ ಶರ್ಮಾ ಆರಂಭಿಕ ರಾಹುಲ್‌’ಗೆ ಅವಕಾಶ ನೀಡಿದರು. ಆದರೆ ಈ ಪಂದ್ಯದಲ್ಲಿ ಹೇಳಿಕೊಳ್ಳುವಂತಹ ಸಾಧನೆ ಏನೂ ಮಾಡಿಲ್ಲ. ಬಿಸಿಸಿಐ ಉಳಿದ ಎರಡು ಟೆಸ್ಟ್ ಪಂದ್ಯಗಳಿಗೆ ಟೀಂ ಇಂಡಿಯಾವನ್ನು ಘೋಷಿಸಿದಾಗ, ರಾಹುಲ್ ಹೆಸರಿನ ಹಿಂದಿರುವ ಉಪನಾಯಕನನ್ನು ತೆಗೆದುಹಾಕಲಾಯಿತು. ಇದರ ನಂತರ ಮೂರು ಮತ್ತು ನಾಲ್ಕನೇ ಟೆಸ್ಟ್ ಪಂದ್ಯಗಳಲ್ಲಿ ರಾಹುಲ್ ಅವರನ್ನು ತಂಡದಿಂದ ಹೊರಗಿಡಲಾಗಿತ್ತು.


ಇದೀಗ ಕೆಎಲ್ ರಾಹುಲ್ ಬದಲಿಗೆ 23ರ ಹರೆಯದ ಆರಂಭಿಕ ಆಟಗಾರ ಶುಭ್ಮನ್ ಗಿಲ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಗಿಲ್ ಕೂಡ ನಾಯಕ ರೋಹಿತ್ ಅವರ ನಂಬಿಕೆಗೆ ಬದ್ಧರಾಗಿದ್ದಾರೆ. ಅಹಮದಾಬಾದ್ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ 128 ರನ್ ಗಳಿಸಿದರು. 235 ಎಸೆತಗಳ ಸಂಯಮದ ಇನ್ನಿಂಗ್ಸ್‌ನಲ್ಲಿ ಗಿಲ್ 12 ಬೌಂಡರಿ ಮತ್ತು ಒಂದು ಸಿಕ್ಸರ್‌ಗಳನ್ನು ಬಾರಿಸಿದರು. ಗಿಲ್ ಫಾರ್ಮ್ ನೋಡಿದರೆ ಮುಂಬರುವ ಟೆಸ್ಟ್ ಪಂದ್ಯಗಳಲ್ಲೂ ಅವರನ್ನು ಕಣಕ್ಕಿಳಿಸುವಂತಿದೆ. ಭಾರತ ತಂಡ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಆಡಿದರೂ, ಗಿಲ್ ಅವರ ಸ್ಥಾನ ಬಲವಾಗಿರುವಂತಿದೆ. ಹೀಗಿರುವಾಗ ಮತ್ತೊಮ್ಮೆ ಟೆಸ್ಟ್ ತಂಡದಲ್ಲಿ ಅವಕಾಶ ಪಡೆಯುವುದು ರಾಹುಲ್ ಗೆ ತುಂಬಾ ಕಷ್ಟವಾಗುತ್ತಿದೆ.


ಇದನ್ನೂ ಓದಿ: 19 ಎಸೆತ, 18 ಬೌಂಡರಿ, 96 ರನ್...ಪುರುಷರಿಂದಲೂ ಸಾಧ್ಯವಾಗದ ದಾಖಲೆ ಬರೆದ ಈ ಮಹಿಳಾ ಆಟಗಾರ್ತಿ!


ಅಹಮದಾಬಾದ್‌’ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಸರಣಿಯ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಮೂರು ದಿನಗಳ ಆಟ ಪೂರ್ಣಗೊಂಡಿದೆ. ಮೂರನೇ ದಿನದಾಟದ ಅಂತ್ಯಕ್ಕೆ ಭಾರತ 3 ವಿಕೆಟ್‌ಗೆ 289 ರನ್ ಗಳಿಸಿದೆ. ಸದ್ಯ ಆಸ್ಟ್ರೇಲಿಯ ಮೊದಲ ಇನಿಂಗ್ಸ್‌ನಲ್ಲಿ 191 ರನ್‌ಗಳ ಮುನ್ನಡೆ ಸಾಧಿಸಿದೆ. ಪಂದ್ಯದ ಮುಕ್ತಾಯದ ವೇಳೆಗೆ ಮಾಜಿ ನಾಯಕ ವಿರಾಟ್ ಕೊಹ್ಲಿ 59 ರನ್ ಮತ್ತು ಆಲ್ ರೌಂಡರ್ ರವೀಂದ್ರ ಜಡೇಜಾ 16 ರನ್ ಗಳಿಸಿ ಕ್ರೀಸ್‌ನಲ್ಲಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.