Sunil Gavaskar statement about KL Rahul: ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯಲ್ಲಿ ಕೆಎಲ್ ರಾಹುಲ್ ಪ್ರದರ್ಶನವು ತುಂಬಾ ನಿರಾಶಾದಾಯಕವಾಗಿತ್ತು, ಇದೇ ಕಾರಣದಿಂದ ಅನೇಕ ಅನುಭವಿ ಕ್ರಿಕೆಟಿಗರು ಅವರನ್ನು ಟೀಕಿಸಲು ಪ್ರಾರಂಭಿಸಿದರು. ಆದರೆ ಈ ಬೆನ್ನಲ್ಲೇ ಕೆಲವು ಕ್ರಿಕೆಟಿಗರು ಕೂಡ ಅವರಿಗೆ ಬೆಂಬಲ ಸೂಚಿಸಿದರು. ಈ ನಡುವೆ ಇದೀಗ ಭಾರತದ ಮಾಜಿ ಹಿರಿಯ ಕ್ರಿಕೆಟಿಗರೊಬ್ಬರು ರಾಹುಲ್ ಬಗ್ಗೆ ದೊಡ್ಡ ಹೇಳಿಕೆ ನೀಡಿದ್ದಾರೆ. ಭರತ್’ಗಿಂತ ರಾಹುಲ್’ಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Rashmika Mandanna: ಇಂದು ಕೋಟಿ ಕೋಟಿ ಸಂಪಾದಿಸುವ ರಶ್ಮಿಕಾ ಕಿರಿಕ್ ಪಾರ್ಟಿಗೆ ಪಡೆದ ಸಂಭಾವನೆ ಗೊತ್ತಾ?


ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಭಾರತ-ಆಸ್ಟ್ರೇಲಿಯಾ ತಂಡಗಳು ಫೈನಲ್‌ಗೆ ಲಗ್ಗೆ ಇಟ್ಟಿವೆ. 2023ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯ ಈ ಎರಡು ತಂಡಗಳ ನಡುವೆ ನಡೆಯಲಿದೆ. ಇದೇ ವೇಳೆ ಭಾರತದ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ರಾಹುಲ್ ಬಗ್ಗೆ ದೊಡ್ಡ ಮಾತು ಹೇಳಿದ್ದಾರೆ. ರಾಹುಲ್ ಇಂಗ್ಲೆಂಡ್‌ನಲ್ಲಿ ಉತ್ತಮವಾಗಿ ಬ್ಯಾಟಿಂಗ್ ಮಾಡುವ ಕಾರಣ ಅವರನ್ನು ಫೈನಲ್‌ನಲ್ಲಿ ತಂಡದಲ್ಲಿ ಇರಿಸಿಕೊಳ್ಳಬೇಕು ಎಂದು ಹೇಳಿದ್ದಾರೆ. ಈ ಹಿಂದೆ ಓವಲ್ ನಲ್ಲೂ ಶತಕ ಬಾರಿಸಿದ್ದರು. ರಾಹುಲ್ 5 ಅಥವಾ 6ನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದರೆ ನಮ್ಮ ಬ್ಯಾಟಿಂಗ್ ಬಲಗೊಳ್ಳಲಿದೆ ಎಂದು ಹೇಳಿಕೆ ನೀಡಿದ್ದಾರೆ.


ಇದನ್ನೂ ಓದಿ: ಬಾಯಲ್ಲಿ ಹುಣ್ಣು ಉಂಟಾಗಲೂ ಇವೇ ಪ್ರಮುಖ ಕಾರಣಗಳು


ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಆರಂಭಿಕ ಎರಡು ಪಂದ್ಯಗಳಲ್ಲಿ ನಾಯಕ ರೋಹಿತ್ ಶರ್ಮಾ ಆರಂಭಿಕ ರಾಹುಲ್‌ಗೆ ಅವಕಾಶ ನೀಡಿದರು. ಆದರೆ ಅವರು ಆ ಪಂದ್ಯದಲ್ಲಿ ಉತ್ತಮವಾಗಿ ಏನನ್ನೂ ಮಾಡಲು ಸಾಧ್ಯವಾಗಲಿಲ್ಲ. ಈ ಬಗ್ಗೆ ಅವರ ವಿರುದ್ಧ ಪ್ರಶ್ನೆಗಳು ಏಳಲಾರಂಭಿಸಿದವು. ಬಿಸಿಸಿಐ ಕೂಡ ಉಳಿದ ಎರಡು ಟೆಸ್ಟ್ ಪಂದ್ಯಗಳ ಟೀಂ ಇಂಡಿಯಾ ತಂಡವನ್ನು ಘೋಷಿಸಿದಾಗ, ರಾಹುಲ್ ಹೆಸರಿನ ಹಿಂದೆ ಇದ್ದ ಉಪನಾಯಕ ಹುದ್ದೆಯನ್ನು ತೆಗೆದುಹಾಕಿತು. ನಂತರ ಮೂರು ಮತ್ತು ನಾಲ್ಕನೇ ಟೆಸ್ಟ್ ಪಂದ್ಯಗಳಲ್ಲಿ ರಾಹುಲ್ ಅವರನ್ನು ತಂಡದಿಂದ ಹೊರಗಿಡಲಾಗಿತ್ತು.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.