KL Rahul: ರಾಹುಲ್ ಇನ್ಮುಂದೆ ವಿಕೆಟ್ ಕೀಪರ್! ರೋಹಿತ್ ಇಟ್ಟ ಹೆಜ್ಜೆ ಟೀಂ ಇಂಡಿಯಾಗೆ ಸಹಕಾರಿಯೇ?

KL Rahul Become Wicket Keeper: ಕೆ ಎಲ್ ರಾಹುಲ್ ಅವರನ್ನು ವಿಕೆಟ್ ಕೀಪರ್ ಮಾಡುವ ಮೂಲಕ ರೋಹಿತ್ ಪ್ರಬಲ ಹೆಜ್ಜೆಯಿಟ್ಟಿದ್ದಾರೆ. ಈ ಮೂಲಕ ಇದು ಟೀಂ ಇಂಡಿಯಾದಲ್ಲಿ ಪ್ರಮುಖ ಬದಲಾವಣೆ ಎನ್ನಬಹುದು. ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯಲ್ಲಿ ಕೆಎಲ್ ರಾಹುಲ್ ಟೀಂ ಇಂಡಿಯಾದ 5 ನೇ ಕ್ರಮಾಂಕದ ಬ್ಯಾಟ್ಸ್‌ಮನ್ ಪಾತ್ರವನ್ನು ನಿರ್ವಹಿಸಲಿದ್ದಾರೆ.

Written by - Bhavishya Shetty | Last Updated : Dec 4, 2022, 04:10 PM IST
    • ವಿಕೆಟ್ ಕೀಪರ್- ಬ್ಯಾಟ್ಸ್‌ಮನ್ ಆಗಿ ಕೆಎಲ್ ರಾಹುಲ್ ಅವರಿಗೆ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ
    • ಬಾಂಗ್ಲಾದೇಶ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ವಿಕೆಟ್ ಕೀಪರ್- ಬ್ಯಾಟ್ಸ್‌ಮನ್ ಆದ ರಾಹುಲ್
    • ಸಂಪೂರ್ಣ ಏಕದಿನ ಸರಣಿಯಲ್ಲಿ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ
KL Rahul: ರಾಹುಲ್ ಇನ್ಮುಂದೆ ವಿಕೆಟ್ ಕೀಪರ್! ರೋಹಿತ್ ಇಟ್ಟ ಹೆಜ್ಜೆ ಟೀಂ ಇಂಡಿಯಾಗೆ ಸಹಕಾರಿಯೇ? title=
KL Rahul

KL Rahul Become Wicket Keeper: ಬಾಂಗ್ಲಾದೇಶ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರು ವಿಕೆಟ್ ಕೀಪರ್- ಬ್ಯಾಟ್ಸ್‌ಮನ್ ಆಗಿ ಕೆಎಲ್ ರಾಹುಲ್ ಅವರಿಗೆ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ನೀಡಿದರು. ಬಾಂಗ್ಲಾದೇಶ ವಿರುದ್ಧದ ಈ ಮೂರು ಪಂದ್ಯಗಳ ಏಕದಿನ ಸರಣಿಯಿಂದ ರಿಷಬ್ ಪಂತ್ ಅವರನ್ನು ಹೊರಗಿಡಲಾಗಿದೆ. ಹೀಗಾಗಿ ಕೆಎಲ್ ರಾಹುಲ್ ಈಗ ಈ ಸಂಪೂರ್ಣ ಏಕದಿನ ಸರಣಿಯಲ್ಲಿ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ: Babar Azam Record: ವಿರಾಟ್-ರೋಹಿತ್ ಜೊತೆಯಾಗಿ ಮಾಡಲಾಗದ್ದನ್ನು ಮಾಡಿ ಮತ್ತೊಂದು ದಾಖಲೆ ಬರೆದ ಬಾಬರ್ ಅಜಮ್!

ಕೆ ಎಲ್ ರಾಹುಲ್ ಅವರನ್ನು ವಿಕೆಟ್ ಕೀಪರ್ ಮಾಡುವ ಮೂಲಕ ರೋಹಿತ್ ಪ್ರಬಲ ಹೆಜ್ಜೆಯಿಟ್ಟಿದ್ದಾರೆ. ಈ ಮೂಲಕ ಇದು ಟೀಂ ಇಂಡಿಯಾದಲ್ಲಿ ಪ್ರಮುಖ ಬದಲಾವಣೆ ಎನ್ನಬಹುದು. ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯಲ್ಲಿ ಕೆಎಲ್ ರಾಹುಲ್ ಟೀಂ ಇಂಡಿಯಾದ 5 ನೇ ಕ್ರಮಾಂಕದ ಬ್ಯಾಟ್ಸ್‌ಮನ್ ಪಾತ್ರವನ್ನು ನಿರ್ವಹಿಸಲಿದ್ದಾರೆ. ಕೆಎಲ್ ರಾಹುಲ್ ಅವರನ್ನು ವಿಕೆಟ್ ಕೀಪರ್ ಮತ್ತು ನಂಬರ್ 5 ಬ್ಯಾಟ್ಸ್‌ಮನ್ ಆಗಿ ಮಾಡುವ ಮೂಲಕ ಟೀಮ್ ಇಂಡಿಯಾ ಹೊಸ ಹೆಜ್ಜೆಯನ್ನಿಟ್ಟಿದೆ.  

ಮುಂದಿನ ವರ್ಷ ಭಾರತದಲ್ಲಿ ನಡೆಯಲಿರುವ 2023 ರ ವಿಶ್ವಕಪ್ ಅನ್ನು ಗಮನದಲ್ಲಿಟ್ಟುಕೊಂಡು, ಕೆಎಲ್ ರಾಹುಲ್ ಅವರನ್ನು ವಿಕೆಟ್ ಕೀಪರ್ ಆಗಿ ಮಾಡುವುದು ನಾಯಕ ರೋಹಿತ್ ಶರ್ಮಾ ಅವರ ಉದ್ದೇಶ ಎಂದು ಅಂದಾಜಿಸಲಾಗಿದೆ

“ರಾಹುಲ್ ವಿಕೆಟ್ ಕೀಪರ್ ಆಗಿರುವುದು ಸರಿಯಾದ ನಿರ್ಧಾರ”

2019-2020ರ ಆರಂಭದಲ್ಲಿ, ಕೆಎಲ್ ರಾಹುಲ್ ಅವರಿಗೆ ವಿಕೆಟ್ ಕೀಪಿಂಗ್ ಜೊತೆಗೆ 5 ನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡುವ ಜವಾಬ್ದಾರಿಯನ್ನು ನೀಡಲಾಯಿತು. ಅದರಲ್ಲಿ ಅವರು ಅಸಾಧಾರಣವಾಗಿ ಉತ್ತಮ ಪ್ರದರ್ಶನ ನೀಡಿದ್ದರು. ಕೆಎಲ್ ರಾಹುಲ್ ಬ್ಯಾಟಿಂಗ್ ಮತ್ತು ವಿಕೆಟ್ ಕೀಪಿಂಗ್ ಎರಡರಲ್ಲೂ ಭರ್ಜರಿಯಾಗಿ ಮಿಂಚಿದ್ದರು. ಆ ಬಳಿಕ ಅವರು ಆರಂಭಿಕ ಆಟಗಾರರನ್ನಾಗಿ ಆಯ್ಕೆ ಮಾಡಲಾಗಿತ್ತು. ಆ ಬಳಿಕ ಆರಂಭದಲ್ಲಿ ಉತ್ತಮವಾಗಿ ಪ್ರದರ್ಶನ ನೀಡುತ್ತಿದ್ದ ರಾಹುಲ್ ಕ್ರಮೇಣ ಕಳಪೆ ಫಾರ್ಮ್ ನಲ್ಲಿ ಹೋರಾಡುವಂತಾಯಿತು, ಈ ಹಿನ್ನೆಲೆಯಲ್ಲಿ ಇದೀಗ ಅವರಿಗೆ 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮತ್ತು ವಿಕೆಟ್ ಕೀಪರ್ ನ್ನಾಗಿ ಮಾಡಿರುವುದು ಸರಿಯಾದ ನಿರ್ಧಾರ ಎಂದು ನೆಟ್ಟಿಗರು ಹೇಳುತ್ತಿದ್ದಾರೆ.

ಇದನ್ನೂ ಓದಿ: Paige Spiranac: ಮೈದಾನದಲ್ಲಿಯೇ ಬಟ್ಟೆ ಬಿಚ್ಚಿ ರೊನಾಲ್ಡೋ ಗೆಲುವನ್ನು ಸಂಭ್ರಮಿಸಿದ ಆಟಗಾರ್ತಿ!!

ಟೀಂ ಇಂಡಿಯಾಗೆ ಅದ್ಭುತ ಲಾಭ:

ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಆಗಿ ಕೆಎಲ್ ರಾಹುಲ್ ಅವರನ್ನು ಪ್ಲೇಯಿಂಗ್ ಇಲೆವೆನ್‌ನಲ್ಲಿ ಸೇರಿಸುವ ಮೂಲಕ ಟೀಮ್ ಇಂಡಿಯಾ ಸಾಕಷ್ಟು ಸಮತೋಲನವನ್ನು ಕಾಪಾಡಿಕೊಳ್ಳಲಿದೆ. ಕೆಎಲ್ ರಾಹುಲ್ ಆಡುವುದರೊಂದಿಗೆ, ಭಾರತೀಯ ತಂಡದ ಮ್ಯಾನೇಜ್‌ಮೆಂಟ್ ಹೆಚ್ಚುವರಿ ಬ್ಯಾಟ್ಸ್‌ಮನ್, ಬೌಲರ್ ಮತ್ತು ಆಲ್‌ರೌಂಡರ್ ಅನ್ನು ಪ್ಲೇಯಿಂಗ್ ಹನ್ನೊಂದರಲ್ಲಿ ಸೇರಿಸಿಕೊಳ್ಳಬಹುದು. ಭಾರತೀಯ ತಂಡದ ಆಡಳಿತವು ರಿಷಬ್ ಪಂತ್‌ಗೆ ಆಗಾಗ್ಗೆ ಅವಕಾಶಗಳನ್ನು ನೀಡಿದೆ. ಆದರೆ ಅವರು ಅತ್ಯಂತ ಕಳಪೆ ಪ್ರದರ್ಶನ ನೀಡುವ ಮೂಲಕ ಅದನ್ನು ಕಳೆದುಕೊಳ್ಳುತ್ತಿದ್ದಾರೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News