India vs SA T20I series: ಕೆ.ಎಲ್.ರಾಹುಲ್, ಕುಲದೀಪ್ ಯಾದವ್ ಸರಣಿಯಿಂದ ಔಟ್

ಈಗ ಟೀಮ್ ಇಂಡಿಯಾದ ನಾಯಕ ಕೆ.ಎಲ್.ರಾಹುಲ್ ಹಾಗೂ ಕುಲದೀಪ್ ದೀಪ್ ಯಾದವ್ ಅವರು ಗಾಯಗೊಂಡಿರುವ ಕಾರಣ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ ಟಿ 20 ಐ ಸರಣಿಯಿಂದ ಹೊರಗುಳಿದಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.

Written by - Zee Kannada News Desk | Last Updated : Jun 8, 2022, 07:09 PM IST
  • ಗುರುವಾರದಂದು ನಡೆಯಲಿರುವ ಸರಣಿ-ಆರಂಭಿಕ ಪಂದ್ಯದಲ್ಲಿ ಇಶಾನ್ ಕಿಶನ್ ಜೊತೆಗೆ ರುತುರಾಜ್ ಗಾಯಕ್ವಾಡ್ ಬ್ಯಾಟಿಂಗ್ ಆರಂಭಿಸಲಿದ್ದಾರೆ ಎಂದು ತಿಳಿದುಬಂದಿದೆ.
 India vs SA T20I series: ಕೆ.ಎಲ್.ರಾಹುಲ್, ಕುಲದೀಪ್ ಯಾದವ್ ಸರಣಿಯಿಂದ ಔಟ್  title=
Photo Courtsey: Twitter

ನವದೆಹಲಿ: ಈಗ ಟೀಮ್ ಇಂಡಿಯಾದ ನಾಯಕ ಕೆ.ಎಲ್.ರಾಹುಲ್ ಹಾಗೂ ಕುಲದೀಪ್ ದೀಪ್ ಯಾದವ್ ಅವರು ಗಾಯಗೊಂಡಿರುವ ಕಾರಣ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ ಟಿ 20 ಐ ಸರಣಿಯಿಂದ ಹೊರಗುಳಿದಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.ಕೆ.ಎಲ್ ರಾಹುಲ್ ಅವರು ಬಲ ತೊಡೆ ಸಂದು ನೋವಿನಿಂದ ಬಳಲುತ್ತಿದ್ದರೆ, ಕುಲದೀಪ್ ಯಾದವ್ ಅವರು ನಿನ್ನೆ ಸಂಜೆ ನೆಟ್ಸ್‌ನಲ್ಲಿ ಬ್ಯಾಟಿಂಗ್ ಮಾಡುವಾಗ ಬಲಗೈಗೆ ಪೆಟ್ಟಾಗಿತ್ತು, ಹಾಗಾಗಿ ಈಗ ಅವರು ಟಿ20 ಐ ಸರಣಿಯಿಂದ ಹೊರಗುಳಿಯಲಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.

ಇದನ್ನೂ ಓದಿ: Megha Shetty: ಪ್ಯಾನ್​ ಇಂಡಿಯಾ ಸಿನಿಮಾದಲ್ಲಿ ಮೇಘಾ ಶೆಟ್ಟಿ!

ಅಖಿಲ ಭಾರತ ಹಿರಿಯ ಆಯ್ಕೆ ಸಮಿತಿಯು ವಿಕೆಟ್ ಕೀಪರ್ ರಿಷಬ್ ಪಂತ್ ಅವರನ್ನು ನಾಯಕನಾಗಿ ಮತ್ತು ಹಾರ್ದಿಕ್ ಪಾಂಡ್ಯ ಅವರನ್ನು ದಕ್ಷಿಣ ಆಫ್ರಿಕಾ ವಿರುದ್ಧದ ಸ್ವದೇಶಿ ಸರಣಿಗೆ ಉಪನಾಯಕರನ್ನಾಗಿ ನೇಮಿಸಿದೆ.ಆಯ್ಕೆ ಸಮಿತಿಯು ಕೆ.ಎಲ್ ರಾಹುಲ್ ಮತ್ತು ಕುಲದೀಪ್ ಯಾದವ್ ಅವರ ಬದಲಿ ಆಟಗಾರರನ್ನು ಹೆಸರಿಸಿಲ್ಲ.ಇಬ್ಬರೂ ಕ್ರಿಕೆಟಿಗರನ್ನು ಈಗ ಎನ್‌ಸಿಎನಲ್ಲಿ ಮೌಲ್ಯಮಾಪನ ಮಾಡಿ ಅವರ ಚಿಕಿತ್ಸೆ ವಿಚಾರದಲ್ಲಿ ಅಂತಿಮ ನಿರ್ಧಾರವನ್ನು ಕೈಗೊಳ್ಳಲಿದೆ ಎನ್ನಲಾಗಿದೆ.

ಇದನ್ನೂ ಓದಿ: Samantha: ನಟಿ ಸಮಂತಾ ಫಿಟ್ನೆಸ್‌ ಸಿಕ್ರೇಟ್‌ ಇಲ್ಲಿದೆ ನೋಡಿ.. ನೀವೂ ಒಮ್ಮೆ ಟ್ರೈ ಮಾಡಿ

ಗುರುವಾರದಂದು ನಡೆಯಲಿರುವ ಸರಣಿ-ಆರಂಭಿಕ ಪಂದ್ಯದಲ್ಲಿ ಇಶಾನ್ ಕಿಶನ್ ಜೊತೆಗೆ ರುತುರಾಜ್ ಗಾಯಕ್ವಾಡ್ ಬ್ಯಾಟಿಂಗ್ ಆರಂಭಿಸಲಿದ್ದಾರೆ ಎಂದು ತಿಳಿದುಬಂದಿದೆ.

ಭಾರತದ ಟಿ 20 ತಂಡ: ರಿಷಬ್ ಪಂತ್ (ನಾಯಕ)(ವಿಕೆಟ್ ಕೀಪರ್ ), ಹಾರ್ದಿಕ್ ಪಾಂಡ್ಯ (ಉಪನಾಯಕ), ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್ ), ವೆಂಕಟೇಶ್ ಅಯ್ಯರ್, ಯುಜ್ವೇಂದ್ರ ಚಾಹಲ್, ಅಕ್ಸರ್ ಪಟೇಲ್, ರವಿ ಬಿಶ್ನೋ ಪಟೇಲ್ , ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಶ್ದೀಪ್ ಸಿಂಗ್, ಉಮ್ರಾನ್ ಮಲಿಕ್. ತ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News