India vs England : ಕೊನೆಯ ಟೆಸ್ಟ್ ಪಂದ್ಯ ಆಡಲು ಭಾರತ ತಂಡ ಇಂಗ್ಲೆಂಡ್‌ಗೆ ತೆರಳಿದೆ. ಈ ಪ್ರವಾಸದಲ್ಲಿ ಟೀಂ ಇಂಡಿಯಾ ಒಂದು ಟೆಸ್ಟ್, 3 ಟಿ20 ಮತ್ತು ಏಕದಿನ ಪಂದ್ಯಗಳನ್ನು ಆಡಬೇಕಿದೆ, ಆದರೆ ಪ್ರವಾಸದ ಆರಂಭಕ್ಕೂ ಮುನ್ನ ಭಾರತ ತಂಡಕ್ಕೆ ಭಾರಿ ಹಿನ್ನಡೆ ಅನುಭವಿಸಿದೆ. ಟೀಂ ಇಂಡಿಯಾದ ಸ್ಟಾರ್ ಆಟಗಾರನೂಬ್ಬ ಟೀಂನಿಂದ ಔಟ್ ಆಗಿದ್ದಾರೆ.


COMMERCIAL BREAK
SCROLL TO CONTINUE READING

ಟೀಂ ಇಂಡಿಯಾದಿಂದ ಈ ಆಟಗಾರ ಔಟ್


ಗಾಯದ ಸಮಸ್ಯೆಯಿಂದಾಗಿ ಮಾಜಿ ಕ್ಯಾಪ್ಟನ್ ಕೆಎಲ್ ರಾಹುಲ್ ಇಂಗ್ಲೆಂಡ್ ಪ್ರವಾಸದಿಂದ ಹೊರಗುಳಿದಿದ್ದಾರೆ. ರಾಹುಲ್ ಈಗ ವಿದೇಶದಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ. ಕ್ರಿಕ್‌ಬಜ್ ಪ್ರಕಾರ, ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಗುರುವಾರ (ಜೂನ್ 16) "ಮಂಡಳಿಯು ಅವರ ಫಿಟ್‌ನೆಸ್ ಕುರಿತು ಕಾಳಜಿ ವಹಿಸುತ್ತಿದೆ ಮತ್ತು ಅವರು ಶೀಘ್ರದಲ್ಲೇ ಜರ್ಮನಿಗೆ ಚಿಕಿತ್ಸೆ ಪಡೆಯಲು ಹೋಗುತ್ತಾರೆ" ಎಂದು ಹೇಳಿದರು. 


ಇದನ್ನೂ ಓದಿ : Triple Century: ಏಕದಿನ ಕ್ರಿಕೆಟ್‌ನಲ್ಲಿ ಮೊದಲ ಟ್ರಿಪಲ್ ಸೆಂಚುರಿ ಬಾರಿಸಿದ ಆಟಗಾರ ಯಾರು ಗೊತ್ತಾ?


ಈ ತಿಂಗಳ ಅಂತ್ಯ ಅಥವಾ ಜುಲೈ ಆರಂಭದಲ್ಲಿ ರಾಹುಲ್ ಜರ್ಮನಿಗೆ ಭೇಟಿ ನೀಡುವ ಸಾಧ್ಯತೆ ಇದೆ. ಹೀಗಾಗಿ, ಅವರು ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಡಲು ಸಾಧ್ಯವಾಗುತ್ತಿಲ್ಲ.


ಭಾರತ ತಂಡಕ್ಕೆ ಭಾರಿ ಹೊಡೆತ


ಇಂಗ್ಲೆಂಡ್ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಿಂದ ಕೆಎಲ್ ರಾಹುಲ್ ಹೊರಗುಳಿದಿರುವುದರಿಂದ ಭಾರತ ತಂಡ ಭಾರೀ ಹಿನ್ನಡೆ ಅನುಭವಿಸಿದೆ. ರೋಹಿತ್ ಶರ್ಮಾ ಜೊತೆ ಓಪನಿಂಗ್ ಆಡುವ ಮುಳ್ಕ ರಾಹುಲ್ ಟೀಂ ಇಂಡಿಯಾಗೆ ಹಲವು ಪಂದ್ಯಗಳನ್ನು ಗೆದ್ದುಕೊಟ್ಟಿದ್ದಾರೆ. ರಾಹುಲ್ ಅನುಭವ, ಇದು ಟೀಂ ಇಂಡಿಯಾಕ್ಕೆ ಉಪಯುಕ್ತವಾಗುತ್ತಿತ್ತು. ಕೆಎಲ್ ರಾಹುಲ್ ಭಾರತ ತಂಡದ ಪರ 43 ಟೆಸ್ಟ್ ಪಂದ್ಯಗಳಲ್ಲಿ 2547 ರನ್ ಗಳಿಸಿದ್ದಾರೆ.


ಹಲವು ಪಂದ್ಯಗಳನ್ನು ಆಡಲಿದೆ ಭಾರತ ತಂಡ 


ಇಂಗ್ಲೆಂಡ್ ಪ್ರವಾಸದಲ್ಲಿ ಭಾರತ ತಂಡ ಒಂದು ಟೆಸ್ಟ್, ಮೂರು ODI ಮತ್ತು ಮೂರು ಟಿ20 ಪಂದ್ಯಗಳನ್ನು ಆಡಲಿದೆ. ಐದು ಟೆಸ್ಟ್‌ಗಳ ಸರಣಿಯಲ್ಲಿ ಟೀಂ ಇಂಡಿಯಾ 2-1 ಮುನ್ನಡೆ ಸಾಧಿಸಿದೆ. ಕೊರೋನಾ ಕಾರಣದಿಂದಾಗಿ, ಈಗ ಕೊನೆಯ ಟೆಸ್ಟ್ ಮಾಡಲಾಗುತ್ತಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಇಂಗ್ಲೆಂಡ್‌ಗೆ ತೆರಳಿದೆ. ಭಾರತವು ಅನೇಕ ಮ್ಯಾಚ್ ವಿನ್ನರ್ ಆಟಗಾರರನ್ನು ಹೊಂದಿದೆ. ಇಶಾಂತ್ ಶರ್ಮಾ ಮತ್ತು ವೃದ್ಧಿಮಾನ್ ಸಾಹಾಗೆ ಟೆಸ್ಟ್ ಪಂದ್ಯದಿಂದ ವಿಶ್ರಾಂತಿ ನೀಡಲಾಗಿದೆ.


ಇದನ್ನೂ ಓದಿ : Ireland T20I : ಭಾರತ ಕ್ರಿಕೆಟ್ ತಂಡಕ್ಕೆ ಹಾರ್ದಿಕ್ ಪಾಂಡ್ಯ ಸಾರಥ್ಯ


ಭಾರತದ ಟೆಸ್ಟ್ ತಂಡ:


ರೋಹಿತ್ ಶರ್ಮಾ (ಕ್ಯಾ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಚೇತೇಶ್ವರ ಪೂಜಾರ, ರಿಷಭ್ ಪಂತ್ (WK), ಕೆಎಸ್ ಭರತ್ (WK), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ , ಉಮೇಶ್ ಯಾದವ್ ಮತ್ತು ಪ್ರಸಿದ್ಧ ಕೃಷ್ಣ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.