IPL 2024, CSK vs RCB:  ಟಿ20 ಕ್ರಿಕೆಟ್‌ನಲ್ಲಿ ಇತಿಹಾಸವನ್ನು ಸೃಷ್ಟಿಸುವ ಹೊಸ್ತಿಲಲ್ಲಿದ್ದಾರೆ ವಿರಾಟ್ ಕೊಹ್ಲಿ. IPL 2024ರ ಸೀಸನ್ ಇಂದಿನಿಂದ ಪ್ರಾರಂಭವಾಗಲಿದೆ. IPL 2024 ರ ಆರಂಭಿಕ ಪಂದ್ಯವು ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ನಡುವೆ ಚೆನ್ನೈನ MA ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿದೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಈ ಪಂದ್ಯದಲ್ಲಿ, ಆರ್‌ಸಿಬಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಇಲ್ಲಿಯವರೆಗೆ ಯಾವುದೇ ಭಾರತೀಯ ಬ್ಯಾಟ್ಸ್‌ಮನ್ ರಚಿಸಲು ಸಾಧ್ಯವಾಗದ ಅದ್ಭುತ ದಾಖಲೆಯನ್ನು ಬರೆಯುವ ಸಾಧ್ಯತೆ ಇದೆ. 


COMMERCIAL BREAK
SCROLL TO CONTINUE READING

 ಇತಿಹಾಸ ಬರೆಯಲಿದ್ದಾರೆ ಕೊಹ್ಲಿ : 
ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧದ ಇಂದಿನ ಐಪಿಎಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ 6 ರನ್ ಗಳಿಸಿದರೆ, ಟಿ20 ಕ್ರಿಕೆಟ್‌ನಲ್ಲಿ 12,000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಆಗಲಿದ್ದಾರೆ.ಇಲ್ಲಿಯವರೆಗೆ ಯಾವುದೇ ಭಾರತೀಯ ಬ್ಯಾಟ್ಸ್‌ಮನ್ ಈ ಶ್ರೇಷ್ಠ ದಾಖಲೆಯನ್ನು ಮಾಡಲು ಸಾಧ್ಯವಾಗಿಲ್ಲ. ವಿರಾಟ್ ಕೊಹ್ಲಿ ಈ ಸಾಧನೆ ಮಾಡಿದರೆ ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಬಹುದೊಡ್ಡ ಸಾಧನೆ ಮಾಡಿದ ಕೀರ್ತಿಗೆ ಪಾತ್ರರಾಗುತ್ತಾರೆ. 


ಇದನ್ನೂ ಓದಿ : CSK vs RCB: ಧೋನಿ ಚೆನ್ನೈ ಸೂಪರ್ ಕಿಂಗ್ಸ್ ಕ್ಯಾಪ್ಟನ್ಸಿ ಕೈಬಿಟ್ಟಿದ್ದೇಕೆ? ಅಸಲಿ ಕಾರಣ ಇದು!!


ದಿಗ್ಗಜ್ಜರ ಸಾಲಿಗೆ ಸೇರಲಿದ್ದಾರೆ ವಿರಾಟ್ ಕೊಹ್ಲಿ : 
ವಿರಾಟ್ ಕೊಹ್ಲಿ ಇದುವರೆಗೆ 376 ಟಿ20 ಪಂದ್ಯಗಳಲ್ಲಿ 41.21 ಸರಾಸರಿಯಲ್ಲಿ 11994 ರನ್ ಗಳಿಸಿದ್ದಾರೆ. 6 ರನ್ ಗಳಿಸಿದರೆ ವಿರಾಟ್ ಕೊಹ್ಲಿ T20 ಕ್ರಿಕೆಟ್‌ನಲ್ಲಿ 12000 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಮತ್ತು ವಿಶ್ವದ ಆರನೇ ಬ್ಯಾಟ್ಸ್‌ಮನ್ ಆಗಿ ಹೊರಹೊಮ್ಮುತ್ತಾರೆ. ಒಟ್ಟಾರೆ ಟಿ20 ಕ್ರಿಕೆಟ್‌ನಲ್ಲಿ ಇಲ್ಲಿಯವರೆಗೆ ಕ್ರಿಸ್ ಗೇಲ್, ಶೋಯೆಬ್ ಮಲಿಕ್, ಕೀರಾನ್ ಪೊಲಾರ್ಡ್, ಅಲೆಕ್ಸ್ ಹೇಲ್ಸ್ ಮತ್ತು ಡೇವಿಡ್ ವಾರ್ನರ್ ಮಾತ್ರ 12000 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದ್ದಾರೆ. 


ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರು :
1. ಕ್ರಿಸ್ ಗೇಲ್ (ವೆಸ್ಟ್ ಇಂಡೀಸ್) - 463 ಪಂದ್ಯಗಳಲ್ಲಿ 14562 ರನ್
2. ಶೋಯೆಬ್ ಮಲಿಕ್ (ಪಾಕಿಸ್ತಾನ) - 542 ಪಂದ್ಯಗಳಲ್ಲಿ 13360 ರನ್
3. ಕೀರಾನ್ ಪೊಲಾರ್ಡ್ (ವೆಸ್ಟ್ ಇಂಡೀಸ್) - 660 ಪಂದ್ಯಗಳಲ್ಲಿ 12900 ರನ್
4. ಅಲೆಕ್ಸ್ ಹೇಲ್ಸ್ (ಇಂಗ್ಲೆಂಡ್) - 449 ಪಂದ್ಯಗಳಲ್ಲಿ 12319 ರನ್
5. ಡೇವಿಡ್ ವಾರ್ನರ್ (ಆಸ್ಟ್ರೇಲಿಯಾ) - 370 ಪಂದ್ಯಗಳಲ್ಲಿ 12065 ರನ್
6. ವಿರಾಟ್ ಕೊಹ್ಲಿ (ಭಾರತ) - 376 ಪಂದ್ಯಗಳಲ್ಲಿ 11994 ರನ್


CSK ವಿರುದ್ಧ ಅತಿ ಹೆಚ್ಚು ರನ್ ಗಳಿಸಿದ ದಾಖಲೆ ಬರೆಯುವ ಅವಕಾಶ :
ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಇನ್ನೂ 73 ರನ್ ಗಳಿಸಿದರೆ, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಹೊಂದಿದ್ದಾರೆ. ವಿರಾಟ್ ಕೊಹ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 31 ಐಪಿಎಲ್ ಪಂದ್ಯಗಳಲ್ಲಿ 985 ರನ್ ಗಳಿಸಿದ್ದಾರೆ. ಪ್ರಸ್ತುತ, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆ ಪಂಜಾಬ್ ಕಿಂಗ್ಸ್ ನಾಯಕ ಶಿಖರ್ ಧವನ್ ಹೆಸರಿನಲ್ಲಿದೆ. ಶಿಖರ್ ಧವನ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 29 ಐಪಿಎಲ್ ಪಂದ್ಯಗಳಲ್ಲಿ 1057 ರನ್ ಗಳಿಸಿದ್ದಾರೆ. ಶಿಖರ್ ಧವನ್ ದಾಖಲೆ ಮುರಿಯಲು ವಿರಾಟ್ ಕೊಹ್ಲಿಗೆ ಕೇವಲ 73 ರನ್ ಗಳ ಅಗತ್ಯವಿದೆ. ವಿರಾಟ್ ಕೊಹ್ಲಿ 15 ರನ್ ಗಳಿಸಿದ ತಕ್ಷಣ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಐಪಿಎಲ್ 1000 ರನ್ ಪೂರೈಸಲಿದ್ದಾರೆ.


ಇದನ್ನೂ ಓದಿ : CSK New Captain ರುತುರಾಜ್ ಗಾಯಕ್ವಾಡ್ ಪತ್ನಿ ಯಾರು ಗೊತ್ತಾ? ಪತಿಯಂತೆ ಈಕೆಯೂ ಭಾರತೀಯ ಕ್ರಿಕೆಟರ್


CSK ವಿರುದ್ಧ ಐಪಿಎಲ್‌ನಲ್ಲಿ ಗರಿಷ್ಠ ರನ್‌ಗಳು : 
1. ಶಿಖರ್ ಧವನ್ (ಭಾರತ) - 1057 ರನ್
2. ವಿರಾಟ್ ಕೊಹ್ಲಿ (ಭಾರತ) - 985 ರನ್
3. ರೋಹಿತ್ ಶರ್ಮಾ (ಭಾರತ) - 791 ರನ್
4. ದಿನೇಶ್ ಕಾರ್ತಿಕ್ (ಭಾರತ) - 675 ರನ್
5. ಡೇವಿಡ್ ವಾರ್ನರ್ (ಆಸ್ಟ್ರೇಲಿಯಾ) - 644 ರನ್



https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ