ಲೆಜೆಂಡ್ಸ್ ಲೀಗ್ ಕ್ರಿಕೆಟ್: ಮತ್ತೆ ಮೈದಾನಕ್ಕಿಳಿಯಲಿದ್ದಾರೆ ನಿಮ್ಮ ನೆಚ್ಚಿನ ಈ ಆಟಗಾರ!

ಪಾರ್ಥಿವ್ ಪಟೇಲ್ ಕ್ರಿಕೆಟ್‌ಗೆ ಎರಡು ವರ್ಷಗಳ ಮೊದಲು ಅಂದರೆ 2020 ರಲ್ಲಿ ನಿವೃತ್ತಿ ಘೋಷಿಸಿದ್ದರು. ಇನ್ನು ಆಟದ ವಿಚಾರವಾಗಿ ನೋಡುವುದಾದರೆ, ಪಾರ್ಥಿವ್ ಅವರ ವಿಕೆಟ್ ಕೀಪಿಂಗ್ ಕೌಶಲ್ಯ ಅದ್ಭುತವಾಗಿದೆ. 2002 ರಲ್ಲಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್‌ ಪಂದ್ಯ ಆಡುವ ಮೂಲಕ ಭಾರತ ತಂಡಕ್ಕೆ ಪಾದಾರ್ಪಣೆ ಮಾಡಿದರು. 

Written by - Bhavishya Shetty | Last Updated : Jul 16, 2022, 10:58 AM IST
  • ಮತ್ತೆ ಕ್ರಿಕೆಟ್ ಮೈದಾನಕ್ಕೆ ಮರಳಲು ಮನಸ್ಸು ಮಾಡಿದ ಪಾರ್ಥಿವ್ ಪಟೇಲ್
  • ಭಾರತದ ಸ್ಟಾರ್ ವಿಕೆಟ್‌ ಕೀಪರ್ ಪಾರ್ಥಿವ್ ಪಟೇಲ್
  • ಈ ಲೀಗ್‌ನಲ್ಲಿ ಮೋಡಿ ಮಾಡಲಿದ್ದಾರೆ ಎಂದು ಖಚಿತವಾಗಿದೆ
ಲೆಜೆಂಡ್ಸ್ ಲೀಗ್ ಕ್ರಿಕೆಟ್: ಮತ್ತೆ ಮೈದಾನಕ್ಕಿಳಿಯಲಿದ್ದಾರೆ ನಿಮ್ಮ ನೆಚ್ಚಿನ ಈ ಆಟಗಾರ!  title=
Parthiv Patel

ಭಾರತದ ಸ್ಟಾರ್ ವಿಕೆಟ್‌ ಕೀಪರ್ ಪಾರ್ಥಿವ್ ಪಟೇಲ್ 2020ರಲ್ಲಿ ನಿವೃತ್ತಿ ಘೋಷಿಸಿದ್ದರು. ಇದೀಗ ಮತ್ತೆ ಕ್ರಿಕೆಟ್ ಮೈದಾನಕ್ಕೆ ಮರಳಲು ಮನಸ್ಸು ಮಾಡಿದ್ದಾರೆ. ಲೆಜೆಂಡರಿ ಲೆಜೆಂಡ್ಸ್ ಲೀಗ್ ಕ್ರಿಕೆಟ್‌ನಲ್ಲಿ ಅವರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ. ಪಾರ್ಥಿವ್ ಪಟೇಲ್ ಮಾತ್ರವಲ್ಲದೆ, ಸ್ಪಿನ್ನರ್ ಪ್ರಗ್ಯಾನ್ ಓಜಾ, ಆಲ್ ರೌಂಡರ್ ರಿತಿಂದರ್ ಸೋಧಿ ಮತ್ತು ಬಂಗಾಳದ ಮಾಜಿ ವೇಗದ ಬೌಲರ್ ಅಶೋಕ್ ದಿಂಡಾ ಕೂಡ ಈ ಲೀಗ್‌ನಲ್ಲಿ ಮೋಡಿ ಮಾಡಲಿದ್ದಾರೆ ಎಂದು ಖಚಿತವಾಗಿದೆ. 

ಪಾರ್ಥಿವ್ ಪಟೇಲ್ ಕ್ರಿಕೆಟ್‌ಗೆ ಎರಡು ವರ್ಷಗಳ ಮೊದಲು ಅಂದರೆ 2020 ರಲ್ಲಿ ನಿವೃತ್ತಿ ಘೋಷಿಸಿದ್ದರು. ಇನ್ನು ಆಟದ ವಿಚಾರವಾಗಿ ನೋಡುವುದಾದರೆ, ಪಾರ್ಥಿವ್ ಅವರ ವಿಕೆಟ್ ಕೀಪಿಂಗ್ ಕೌಶಲ್ಯ ಅದ್ಭುತವಾಗಿದೆ. 2002 ರಲ್ಲಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್‌ ಪಂದ್ಯ ಆಡುವ ಮೂಲಕ ಭಾರತ ತಂಡಕ್ಕೆ ಪಾದಾರ್ಪಣೆ ಮಾಡಿದರು. ಆ ಸಮಯದಲ್ಲಿ ಅವರಿಗೆ ಕೇವಲ 17 ವರ್ಷ ವಯಸ್ಸಾಗಿತ್ತು. ಅವರು ಟೆಸ್ಟ್‌ಗೆ ಪಾದಾರ್ಪಣೆ ಮಾಡಿದ ಅತ್ಯಂತ ಕಿರಿಯ ವಿಕೆಟ್‌ಕೀಪರ್, ಬ್ಯಾಟ್ಸ್‌ಮನ್ ಎನಿಸಿಕೊಂಡರು.

ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ: ದ್ರೌಪದಿ ಮುರ್ಮು ಅವರಿಗೆ ಜೆಡಿಎಸ್‌ ಬೆಂಬಲ

ಪಾರ್ಥಿವ್ ಪಟೇಲ್ 25 ಟೆಸ್ಟ್ ಮತ್ತು 38 ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. ಪಾರ್ಥಿವ್ ಟೆಸ್ಟ್‌ನಲ್ಲಿ 934 ರನ್ ಗಳಿಸಿದ್ದರೆ, ಏಕದಿನದಲ್ಲಿ 736 ರನ್ ಬಾರಿಸಿದ್ದಾರೆ. ಪಾರ್ಥಿವ್ ಎರಡು ಟಿ20 ಅಂತರಾಷ್ಟ್ರೀಯ ಪಂದ್ಯಗಳಲ್ಲೂ ಭಾಗವಹಿಸಿದ್ದರು. ಟೆಸ್ಟ್‌ನಲ್ಲಿ ಅವರು 62 ಕ್ಯಾಚ್‌ಗಳನ್ನು ಪಡೆದುಕೊಂಡಿದ್ದು, 10 ಸ್ಟಂಪ್‌ಗಳನ್ನು ಮಾಡಿದ್ದಾರೆ. ಇನ್ನು ಪಾರ್ಥಿವ್ ಅವರು ಚೆನ್ನೈ ಸೂಪರ್ ಕಿಂಗ್ಸ್ (CSK), ಸನ್‌ರೈಸರ್ಸ್ ಹೈದರಾಬಾದ್ (SRH) ಮತ್ತು ಮುಂಬೈ ಇಂಡಿಯನ್ಸ್ ಸೇರಿದಂತೆ IPL ನಲ್ಲಿ ಹಲವಾರು ತಂಡಗಳಿಗಾಗಿ ಆಡಿದ್ದಾರೆ. ಈಗ ಅವರು ಲೆಜೆಂಡ್ಸ್ ಕ್ರಿಕೆಟ್ ಲೀಗ್ (ಎಲ್ಎಲ್‌ಸಿ) ನಲ್ಲಿ ಪುನರಾಗಮನ ಮಾಡಲಿದ್ದಾರೆ.

ಎರಡನೇ ಆವೃತ್ತಿಯ ಲೆಜೆಂಡ್ಸ್ ಲೀಗ್ ಕ್ರಿಕೆಟ್ ಸೆಪ್ಟೆಂಬರ್ 20ರಿಂದ ಪ್ರಾರಂಭವಾಗಲಿದೆ. ಕ್ರಿಕೆಟ್‌ ಲೋಕದ ದಿಗ್ಗಜರೆಲ್ಲರೂ ಒಂದೇ ಮೈದಾನದಲ್ಲಿ ಆಟವಾಡುವುದನ್ನು ನೋಡಲು ಕ್ರಿಕೆಟ್‌ ಪ್ರೇಮಿಗಳು ಕಾತುರದಿಂದ ಕಾಯುತ್ತಿದ್ದಾರೆ. ಮೊದಲ ಆವೃತ್ತಿಯಲ್ಲಿ ಉತ್ತಮ ಯಶಸ್ಸು ಪಡೆದ ಲೆಜೆಂಡ್ಸ್ ಲೀಗ್ ಕ್ರಿಕೆಟ್ ಇದೀಗ ಮತ್ತೆ ಬರುತ್ತಿದೆ. 

ಇದನ್ನೂ ಓದಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್..

ಕಳೆದ ಲೆಜೆಂಡ್ಸ್ ಲೀಗ್ ಕ್ರಿಕೆಟ್ ಆವೃತ್ತಿಯಲ್ಲಿ ಭಾರತ, ಪಾಕಿಸ್ತಾನ, ಆಸ್ಟ್ರೇಲಿಯಾ ಇಂಗ್ಲೆಂಡ್, ಶ್ರೀಲಂಕಾ, ದಕ್ಷಿಣ ಆಫ್ರಿಕಾದ ಮಾಜಿ ಆಟಗಾರರು ಭಾಗವಹಿಸಿದ್ದರು. 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News