FIFA World Cup 2022: ವಿಶ್ವಕಪ್ ಫೈನಲ್ ಪಂದ್ಯದ ಬಳಿಕ ಲಿಯೋನೆಲ್ ಮೆಸ್ಸಿ ನಿವೃತ್ತಿ..!

ಪುಟ್ಬಾಲ್ ವಿಶ್ವಕಪ್ ಟೂರ್ನಿಯಲ್ಲಿ ಅರ್ಜೆಂಟಿನಾ ತಂಡವು ಭರ್ಜರಿ ಪ್ರದರ್ಶನದಿಂದಾಗಿ ಈಗ ಫೈನಲ್ ತಲುಪಿದ್ದು, ಈ ಸಂದರ್ಭದಲ್ಲಿ ಅರ್ಜೆಂಟಿನಾದ ಸ್ಟಾರ್ ಆಟಗಾರ ಲಿಯೋನೆಲ್ ಮೆಸ್ಸಿ ಫೈನಲ್ ಪಂದ್ಯವೇ ತಮಗೆ ಕೊನೆಯ ಅಂತರಾಷ್ಟ್ರೀಯ ಪಂದ್ಯವಾಗಲಿದೆ ಎಂದು ಹೇಳಿದ್ದಾರೆ.

Last Updated : Dec 14, 2022, 05:03 PM IST
  • ಟೂರ್ನಿಯಲ್ಲಿ ಇದುವರೆಗೆ ಐದು ಗೋಲುಗಳನ್ನು ಗಳಿಸಿರುವ ಮೆಸ್ಸಿ, ವಿಶ್ವ ಕಪ್‌ಗಳಲ್ಲಿ ಅರ್ಜೆಂಟೀನಾದ ಪ್ರಮುಖ ಗೋಲ್‌ಸ್ಕೋರರ್ ಆಗಿದ್ದಾರೆ,
  • ಪಟ್ಟಿಯಲ್ಲಿ ಗೇಬ್ರಿಯಲ್ ಬಟಿಸ್ಟುಟಾ (10) ಅವರನ್ನು ಹಿಂದಿಕ್ಕಿದ್ದಾರೆ.
  • 35ರ ಹರೆಯದ ಮೆಸ್ಸಿ ಅವರು ಇಲ್ಲಿಯವರೆಗೆ 11 ವಿಶ್ವಕಪ್ ಗೋಲುಗಳನ್ನು ಹೊಂದಿದ್ದಾರೆ.
FIFA World Cup 2022: ವಿಶ್ವಕಪ್ ಫೈನಲ್ ಪಂದ್ಯದ ಬಳಿಕ ಲಿಯೋನೆಲ್ ಮೆಸ್ಸಿ ನಿವೃತ್ತಿ..!  title=

ನವದೆಹಲಿ: ಪುಟ್ಬಾಲ್ ವಿಶ್ವಕಪ್ ಟೂರ್ನಿಯಲ್ಲಿ ಅರ್ಜೆಂಟಿನಾ ತಂಡವು ಭರ್ಜರಿ ಪ್ರದರ್ಶನದಿಂದಾಗಿ ಈಗ ಫೈನಲ್ ತಲುಪಿದ್ದು, ಈ ಸಂದರ್ಭದಲ್ಲಿ ಅರ್ಜೆಂಟಿನಾದ ಸ್ಟಾರ್ ಆಟಗಾರ ಲಿಯೋನೆಲ್ ಮೆಸ್ಸಿ ಫೈನಲ್ ಪಂದ್ಯವೇ ತಮಗೆ ಕೊನೆಯ ಅಂತರಾಷ್ಟ್ರೀಯ ಪಂದ್ಯವಾಗಲಿದೆ ಎಂದು ಹೇಳಿದ್ದಾರೆ.

ಕ್ರೊಯೇಶಿಯಾ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಅರ್ಜೆಂಟಿನಾ ಗೆಲ್ಲುವ ಮೂಲಕ ಈಗ ಫೈನಲ್ ತಲುಪಿದೆ. ಈ ಸಂದರ್ಭದಲ್ಲಿ ಒಂದು ವೇಳೆ ಅರ್ಜೆಂಟಿನಾ ಕಪ್ ಗೆದ್ದಲ್ಲಿ ಹೊಸ ದಾಖಲೆಯನ್ನು ನಿರ್ಮಿಸಲಿದೆ.ಈ ಹಿನ್ನಲೆಯಲ್ಲಿ ಈಗ ತಮ್ಮ ದೇಶಕ್ಕೆ ಕಪ್ ಗೆಲ್ಲುವ ಮೂಲಕ ಅಂತರಾಷ್ಟ್ರೀಯ ಪುಟ್ಬಾಲ್ ಗೆ ವಿದಾಯ ಹೇಳುವುದು ಮೆಸ್ಸಿಯವರ ಕನಸಾಗಿದೆ.

ಇದನ್ನೂ ಓದಿ: India vs Bangladesh 1st Test: ಟೆಸ್ಟ್ ಕ್ರಿಕೆಟ್ ನಲ್ಲಿ ಹೊಸ ದಾಖಲೆ ನಿರ್ಮಿಸಿದ ಪಂತ್

ಟೂರ್ನಿಯಲ್ಲಿ ಇದುವರೆಗೆ ಐದು ಗೋಲುಗಳನ್ನು ಗಳಿಸಿರುವ ಮೆಸ್ಸಿ, ವಿಶ್ವ ಕಪ್‌ಗಳಲ್ಲಿ ಅರ್ಜೆಂಟೀನಾದ ಪ್ರಮುಖ ಗೋಲ್‌ಸ್ಕೋರರ್ ಆಗಿದ್ದಾರೆ, ಪಟ್ಟಿಯಲ್ಲಿ ಗೇಬ್ರಿಯಲ್ ಬಟಿಸ್ಟುಟಾ (10) ಅವರನ್ನು ಹಿಂದಿಕ್ಕಿದ್ದಾರೆ. 35ರ ಹರೆಯದ ಅವರು ಇಲ್ಲಿಯವರೆಗೆ 11 ವಿಶ್ವಕಪ್ ಗೋಲುಗಳನ್ನು ಹೊಂದಿದ್ದಾರೆ.  

ಈಗ ನಿವೃತ್ತಿ ನಿರ್ಧಾರದ ಕುರಿತಾಗಿ ಪ್ರತಿಕ್ರಿಯಿಸಿರುವ ಮೆಸ್ಸಿ "ನನ್ನ ಕೊನೆಯ ಪಂದ್ಯವನ್ನು ಫೈನಲ್‌ನಲ್ಲಿ ಆಡುವ ಮೂಲಕ ನನ್ನ ವಿಶ್ವಕಪ್ ಪ್ರಯಾಣವನ್ನು ಪೂರ್ಣಗೊಳಿಸಲು ನನಗೆ ತುಂಬಾ ಸಂತೋಷವಾಗಿದೆ" ಎಂದು ಮೆಸ್ಸಿ ಅರ್ಜೆಂಟೀನಾದ ಮಾಧ್ಯಮ ಔಟ್‌ಲೆಟ್ ಡಿಯಾರಿಯೊ ಡಿಪೋರ್ಟಿವೊ ಓಲೆಗೆ ತಿಳಿಸಿದ್ದಾರೆ.

ಇದನ್ನೂ ಓದಿ: KL Rahul : ಔಟಾಗಿದ್ದಕ್ಕೆ ಕೋಪಗೊಂಡ ಕೆಎಲ್ ರಾಹುಲ್ ಮಾಡಿದ್ದು ಹೀಗೆ : Video ಸಖತ್ ವೈರಲ್

ಇದು ಮುಂದೆ ಸಾಧ್ಯವಾಗಲು ಹಲವಾರು ವರ್ಷಗಳು ಬೇಕಾಗಬಹುದು,ಆದ್ದರಿಂದ ವೃತ್ತಿ ಜೀವನವನ್ನು ಈ ರೀತಿ ಕೊನೆಗೊಳಿಸಲು ಇದೊಂದು ಅತ್ಯುತ್ತಮ ಘಳಿಗೆಯಾಗಿದೆ” ಎಂದು ಅವರು ಹೇಳಿದ್ದಾರೆ.

ಎರಡು ಬಾರಿಯ ಚಾಂಪಿಯನ್ ಆಗಿರುವ ಅರ್ಜೆಂಟಿನಾ ತಂಡವು ಈಗ ಭಾನುವಾರ ಲುಸೇಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಫೈನಲ್‌ನಲ್ಲಿ ಮೊರಾಕೊ ಅಥವಾ ಹೋಲ್ಡರ್ಸ್ ಫ್ರಾನ್ಸ್ ವಿರುದ್ಧ ಸೆಣಸಲಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News