ಪುಣೆ: ಇಲ್ಲಿನ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಶನಿವಾರ ರಾತ್ರಿ ನಡೆದ ಐಪಿಎಲ್ ಟೂರ್ನಿಯ 53ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ 75 ರನ್‍ ಗಳ ಭರ್ಜರಿ ಗೆಲುವು ಸಾಧಿಸಿದೆ.


COMMERCIAL BREAK
SCROLL TO CONTINUE READING

ಟಾಸ್ ಗೆದ್ದ ಕೋಲ್ಕತ್ತಾ ಫೀಲ್ಡಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 176 ರನ್ ಗಳ ಸವಾಲಿನ ಮೊತ್ತ ಪೇರಿಸಿತು. ಗೆಲುವಿನ ಗುರಿ ಬೆನ್ನತ್ತಿದ ಕೋಲ್ಕತ್ತಾ ಲಕ್ನೋ ಬೌಲಿಂಗ್ ದಾಳಿಗೆ ಸಿಲುಕಿ ಸೋಲೊಪ್ಪಿಕೊಂಡಿತು. ಕೇವಲ 14.3 ಓವರ್ ಗಳಲ್ಲಿ ಸರ್ವಪತನ ಕಂಡ ಶ್ರೇಯಸ್ ಅಯ್ಯರ್ ಪಡೆ 101 ರನ್ ಗಳಿಸಲಷ್ಟೇ ಶಕ್ತವಾಯಿತು.


ಇದನ್ನೂ ಓದಿ: Mi vs GT : ಆಘಾತಕಾರಿ ನಿರ್ಧಾರ ತೆಗೆದುಕೊಂಡ ರೋಹಿತ್ ಶರ್ಮಾ!


ಬೃಹತ್ ಮೊತ್ತ ಪೇರಿಸಿದ ಲಕ್ನೋ


ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಲಕ್ನೋಗೆ ಆರಂಭಿಕ ಆಘಾತ ಉಂಟಾಯಿತು. ನಾಯಕ ಕೆ.ಎಲ್.ರಾಹುಲ್ ಸೊನ್ನೆ ಸುತ್ತುವ ಮೂಲಕ ನಿರಾಸೆ ಮೂಡಿಸಿದರು. ಆರಂಭಿಕ ಆಟಗಾರ ಕ್ವಿಂಟನ್ ಡಿಕಾಕ್(50) ಭರ್ಜರಿ ಅರ್ಧಶತಕ ಭಾರಿಸಿದರು. ದೀಪಕ್ ಹೂಡಾ(41), ಮಾರ್ಕಸ್ ಸ್ಟೊಯಿನಿಸ್(28), ಕೃನಾಲ್ ಪಾಂಡ್ಯ(25), ಆಯುಷ್ ಬದೋನಿ(ಅಜೇಯ 15) ಮತ್ತು ಜೆಸನ್ ಹೋಲ್ಡರ್(13) ರನ್ ಗಳಿಸಿದರು. ಕೋಲ್ಕತ್ತಾ ಪರ ಆಂಡ್ರೂ ರಸೆಲ್ 2 ವಿಕೆಟ್ ಪಡೆದರೆ, ಟಿಮ್ ಸೌಥಿ, ಶಿವಂ ಮಾವಿ, ಸುನಿಲ್ ನರೈನ್ ತಲಾ ಒಂದೊಂದು ವಿಕೆಟ್ ಕಬಳಿಸಿದರು.


ಲಕ್ನೋ ಮಾರಕ ಬೌಲಿಂಗ್ ದಾಳಿ


Sehwag On Warner : ಡೇವಿಡ್ ವಾರ್ನರ್ ಹಾಡಿ ಹೊಗಳಿದ ವೀರೇಂದ್ರ ಸೆಹ್ವಾಗ್


ಈ ಗೆಲುವಿನ ಮೂಲಕ ಕನ್ನಡಿಗ ಕೆ.ಎಲ್.ರಾಹುಲ್ ನೇತೃತ್ವದ ಲಕ್ನೋ ತಂಡವು 16 ಅಂಕಗಳನ್ನು ಕಲೆ ಹಾಕುವಮೂಲಕ ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿತು. ಹೀನಾಯ ಸೋಲು ಕಂಡ ಕೋಲ್ಕತ್ತಾ 8ನೇ ಸ್ಥಾನಕ್ಕೆ ಕುಸಿದಿದ್ದು, ಪ್ಲೇ ಆಫ್ ಹಾದಿಯನ್ನು ಮತ್ತಷ್ಟು ಕಠಿಣವಾಗಿಸಿಕೊಂಡಿದೆ.


Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...