RCB vs LSG: ಇಂದು ಆರ್‌ಸಿಬಿ - ಲಕ್ನೋ ಮುಖಾಮುಖಿ, ಪಿಚ್ ರಿಪೋರ್ಟ್ ಹೀಗಿದೆ
ಐಪಿಎಲ್ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡ ಆಡಿರುವ ಆರು ಪಂದ್ಯಗಳಲ್ಲಿ ನಾಲ್ಕನ್ನು ಗೆದ್ದಿದ್ದು, ಎರಡರಲ್ಲಿ ಸೋಲು ಕಂಡಿದೆ.
ಮುಂಬೈ: ಮಹಾರಾಷ್ಟ್ರದ ಡಾ.ಡಿ ವೈ ಪಾಟೀಲ್ ಕ್ರೀಡಾಂಗಣದಲ್ಲಿ ಐಪಿಎಲ್ ಆವೃತ್ತಿಯ 31 ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ನಡೆಯಲಿದೆ. ಎರಡೂ ತಂಡಗಳು ಈ ಸೀಸನ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದು, ಯಶಸ್ವಿಯಾಗಿ ಮುನ್ನುಗ್ಗುತ್ತಿವೆ.
ಇದನ್ನು ಓದಿ: ಫುಟ್ಬಾಲ್ ಆಟಗಾರ ರೊನಾಲ್ಡೊ ಮಗು ಸಾವು!
ಐಪಿಎಲ್ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡ ಆಡಿರುವ ಆರು ಪಂದ್ಯಗಳಲ್ಲಿ ನಾಲ್ಕನ್ನು ಗೆದ್ದಿದ್ದು, ಎರಡರಲ್ಲಿ ಸೋಲು ಕಂಡಿದೆ. ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸಹ ಆರು ಪಂದ್ಯಗಳನ್ನು ಆಡಿದ್ದು, ನಾಲ್ಕು ಪಂದ್ಯ ಗೆದ್ದು ಎರಡರಲ್ಲಿ ಸೋಲನ್ನು ಅನುಭವಿಸಿದೆ. ಈ ಮೂಲಕ ರನ್‌ರೇಟ್ +0.142 ಅಂಕದೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ.
ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆ.ಎಲ್ ರಾಹುಲ್ ಕಳೆದ ಪಂದ್ಯದಲ್ಲಿ ಉತ್ತಮ ಫಾರ್ಮ್‌ನಲ್ಲಿದ್ದು ಭರ್ಜರಿ ಶತಕ ಸಿಡಿಸಿದ್ದರು. ಇನ್ನೊಂದೆಡೆ ಕಳೆದ ಪಂದ್ಯದಲ್ಲಿ ಆರ್‌ಸಿಬಿ ತಂಡದ ಬೌಲಿಂಗ್ ವಿಭಾಗವು ಮಿಂಚಿದ್ದು ಇಂದು ನಡೆಯಲಿರುವ ಪಂದ್ಯದಲ್ಲಿ ಯಾವ ರೀತಿಯ ಕದನ ನಡೆಯಲಿದೆ ಎಂಬುದು ಕುತೂಹಲ ಮೂಡಿಸಿದೆ.
ಸಂಭಾವ್ಯ ಆಟಗಾರರ ಪಟ್ಟಿ:
ಲಕ್ನೋ ಸೂಪರ್ ಜೈಂಟ್ಸ್: ಕೆ.ಎಲ್ ರಾಹುಲ್ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಮನೀಶ್ ಪಾಂಡೆ, ಆಯುಷ್ ಬಡೋನಿ, ಮಾರ್ಕಸ್ ಸ್ಟೋಯ್ನಿಸ್, ದೀಪಕ್ ಹೂಡಾ, ಕೃನಾಲ್ ಪಾಂಡ್ಯ, ಜೇಸನ್ ಹೋಲ್ಡರ್, ದುಷ್ಮಂತ ಚಮೀರಾ, ಅವೇಶ್ ಖಾನ್, ರವಿ ಬಿಷ್ಣೋಯ್
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್, ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಸುಯಶ್ ಪ್ರಭುದೇಸಾಯಿ, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ವನಿಂದು ಹಸರಂಗ, ಹರ್ಷಲ್ ಪಟೇಲ್, ಮೊಹಮದ್ ಸಿರಾಗ್, ಜೋಶ್ ಹ್ಯಾಜಲ್‌ವುಡ್.
ಇದನ್ನು ಓದಿ: RR vs KKR: ಬಟ್ಲರ್ ಶತಕ, ಚಹಾಲ್ ಹ್ಯಾಟ್ರಿಕ್ ಕೈಚಳಕ, ರಾಜಸ್ಥಾನಕ್ಕೆ ಗೆಲುವಿನ ಪುಳಕ
ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ:
ಮಹಾರಾಷ್ಟ್ರದ ಡಾ. ಡಿ.ವೈ ಪಾಟೀಲ್ ಕ್ರೀಡಾಂಗಣ ಈ ಬಾರಿಯ ಟೂರ್ನಿಯಲ್ಲಿ ಬ್ಯಾಟರ್‌ಗಳಿಗೆ ಸಾಕಷ್ಟು ನೆರವು ನೀಡುತ್ತಿದೆ ಎನ್ನಬಹುದು. ಈ ಹಿನ್ನೆಲೆಯಲ್ಲಿ ಇಲ್ಲಿ ಮತ್ತೊಂದು ಹೈಸ್ಕೋರ್ ಪಂದ್ಯ ನಡೆದರೆ ಅಚ್ಚರಿಯಿಲ್ಲ. ಪಿಚ್ ಹಸಿರಿನಿಂದ ಕೂಡಿದ್ದು ವೇಗಿಗಳಿಗೆ ನೆರವು ನೀಡುವ ಸಾಧ್ಯತೆ ಹೆಚ್ಚಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.