High Court on MS Dhoni Plea: ಟೀಂ ಇಂಡಿಯಾ ಮತ್ತು ಐಪಿಎಲ್‌’ನ ಅತ್ಯಂತ ಯಶಸ್ವಿ ನಾಯಕರಲ್ಲಿ ಒಬ್ಬರಾದ ಮಹೇಂದ್ರ ಸಿಂಗ್ ಧೋನಿ (ಎಂಎಸ್ ಧೋನಿ) ಸಲ್ಲಿಸಿದ ನ್ಯಾಯಾಂಗ ನಿಂದನೆ ಅರ್ಜಿಯ ಮೇಲೆ ಮದ್ರಾಸ್ ಹೈಕೋರ್ಟ್ ಶನಿವಾರದ ತೀರ್ಪು ನೀಡಿದೆ. ನಿವೃತ್ತ ಐಪಿಎಸ್ ಅಧಿಕಾರಿ ಜಿ ಸಂಪತ್ ಕುಮಾರ್ ಅವರಿಗೆ ಹೈಕೋರ್ಟ್ 15 ದಿನಗಳ ಜೈಲು ಶಿಕ್ಷೆ ವಿಧಿಸಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: 5 ಬಾರಿ IPL ಟ್ರೋಫಿ ಗೆದ್ದರೂ ರೋಹಿತ್ ಕೈನಿಂದ ನಾಯಕತ್ವ ಕಿತ್ತುಕೊಂಡ ಮುಂಬೈ: ಇದೇ ಕಾರಣ!?


ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಸ್ ಧೋನಿ ಸಲ್ಲಿಸಿದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಐಪಿಎಸ್ ನಿವೃತ್ತ ಅಧಿಕಾರಿ ಜಿ ಸಂಪತ್ ಕುಮಾರ್ ಅವರಿಗೆ ಮದ್ರಾಸ್ ಹೈಕೋರ್ಟ್ 15 ದಿನಗಳ ಜೈಲು ಶಿಕ್ಷೆ ವಿಧಿಸಿದೆ. ಆದರೆ, ನ್ಯಾಯಮೂರ್ತಿಗಳಾದ ಎಸ್.ಎಸ್.ಸುಂದರ್ ಮತ್ತು ಸುಂದರ್ ಮೋಹನ್ ಅವರಿದ್ದ ವಿಭಾಗೀಯ ಪೀಠವು ಶಿಕ್ಷೆಯ ವಿರುದ್ಧ ಮೇಲ್ಮನವಿ ಸಲ್ಲಿಸಲು ಸಂಪತ್ ಕುಮಾರ್ ಅವರಿಗೆ ಅವಕಾಶ ನೀಡುವಂತೆ ಶಿಕ್ಷೆಯನ್ನು 30 ದಿನಗಳವರೆಗೆ ಅಮಾನತುಗೊಳಿಸಿತು.


ಇದನ್ನೂ ಓದಿ: ಡೈ, ಕಲರ್ ಎಂತದ್ದೂ ಬೇಡ… ಕಾಫಿ ಪುಡಿ ಇದ್ದರೆ 10 ನಿಮಿಷದಲ್ಲಿ ಬಿಳಿಕೂದಲನ್ನು ಬುಡದಿಂದಲೇ ಕಪ್ಪಾಗಿಸಬಹುದು!


ತಮ್ಮ ನಾಯಕತ್ವದಲ್ಲಿ ಭಾರತವನ್ನು ಏಕದಿನ ಮತ್ತು ಟಿ 20 ವಿಶ್ವಕಪ್‌ಗೆ ಮುನ್ನಡೆಸಿದ್ದ ಧೋನಿ, ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಐಪಿಎಸ್ ಅಧಿಕಾರಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದ್ದರು. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಬೆಟ್ಟಿಂಗ್‌’ನಲ್ಲಿ ತಮ್ಮ ಹೆಸರನ್ನು ಬಳಸಲಾಗಿದೆ ಎಂದು ಧೋನಿ 2014 ರಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು ಮತ್ತು 100 ಕೋಟಿ ರೂಪಾಯಿಗಳ ಪರಿಹಾರಕ್ಕೆ ಒತ್ತಾಯಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪತ್ ಕುಮಾರ್ ಸಲ್ಲಿಸಿರುವ ಪ್ರತಿ ಅಫಿಡವಿಟ್‌’ನಲ್ಲಿ ನ್ಯಾಯಾಂಗದ ವಿರುದ್ಧ ಮಾಡಿರುವ ಟೀಕೆಗಳಿಗೆ ಶಿಕ್ಷೆ ವಿಧಿಸುವಂತೆ ಮನವಿ ಮಾಡಲಾಗಿತ್ತು.


 


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ