ನವದೆಹಲಿ: ಸೆಪ್ಟೆಂಬರ್ 23ರಿಂದ ಅಕ್ಟೋಬರ್ 8ರವರೆಗೆ ಚೀನಾದ ಹ್ಯಾಂಗ್‍ಝೌನಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸುವ 15 ಸದಸ್ಯರ ತಂಡವನ್ನು ಮುನ್ನಡೆಸಲಿರುವ ಟೀಂ ಇಂಡಿಯಾದ ನಾಯಕರಾಗಿ ಅಗ್ರ ಕ್ರಮಾಂಕದ ಬ್ಯಾಟ್ಸ್‍ಮನ್ ಋತುರಾಜ್ ಗಾಯಕ್ವಾಡ್ ಶುಕ್ರವಾರ ಆಯ್ಕೆಯಾಗಿದ್ದಾರೆ.


COMMERCIAL BREAK
SCROLL TO CONTINUE READING

ಭಾರತ ತಂಡದ ನಾಯಕತ್ವ ವಹಿಸಿಕೊಳ್ಳುತ್ತಿರುವ 26 ವರ್ಷದ ಪ್ರತಿಭಾನ್ವಿತ ಆಟಗಾರ ಋತುರಾಜ್ ಗಾಯಕ್ವಾಡ್, ಚಿನ್ನದ ಪದಕವನ್ನು ಗೆಲ್ಲುವ ಮೂಲಕ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಭಾರತದ ರಾಷ್ಟ್ರಗೀತೆಯನ್ನು ನುಡಿಸುವುದು ತನ್ನ ಕನಸು ಎಂದು ಹೇಳಿದ್ದಾರೆ.


ಬಿಸಿಸಿಐ ತನ್ನ ಟ್ವಿಟರ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದು, ಇದರಲ್ಲಿ ಮಾತನಾಡಿರುವ ಋತುರಾಜ್ ಗಾಯಕ್ವಾಡ್, ‘ದೇಶಕ್ಕಾಗಿ ಚಿನ್ನದ ಪದಕ ಗೆಲ್ಲುವುದು, ವೇದಿಕೆಯ ಮೇಲೆ ನಿಂತು ದೇಶಕ್ಕಾಗಿ ರಾಷ್ಟ್ರಗೀತೆ ಹಾಡುವುದು ನನ್ನ ಕನಸು’ ಎಂದು ಹೇಳಿದ್ದಾರೆ. 


ಇದನ್ನೂ ಓದಿ: ಮೊದಲ ಟೆಸ್ಟ್’ನಲ್ಲಿ ಗೆದ್ದರೂ Team India ಪ್ಲೇಯಿಂಗ್ 11ನಲ್ಲಿ ಆಗಲಿದೆ ಬದಲಾವಣೆ: ಇವರು ಇನ್… ಅವರು ಔಟ್!


ಪ್ರಸ್ತುತ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಟೆಸ್ಟ್ ತಂಡದ ಭಾಗವಾಗಿರುವ ಋತುರಾಜ್, ಭಾರತದ ವೈಟ್-ಬಾಲ್ ಸೆಟ್‌ಅಪ್‌ನ ಭಾಗವಾಗಿದ್ದಾರೆ ಮತ್ತು 1 ಏಕದಿನ ಮತ್ತು ಟಿ-20 ಪಂದ್ಯಗಳನ್ನು ಆಡಿದ್ದಾರೆ. ‘ಭಾರತಕ್ಕಾಗಿ ಆಡುವುದು ಹೆಮ್ಮೆಯ ವಿಷಯ. ಇಂತಹ ವಿಶೇಷ ಸಂದರ್ಭದಲ್ಲಿ  ತಂಡವನ್ನು ಮುನ್ನಡೆಸುವುದು ನನಗೆ, ವೈಯಕ್ತಿಕವಾಗಿ ಮತ್ತು ನನ್ನೊಂದಿಗಿರುವ ತಂಡದ ಎಲ್ಲಾ ಸದಸ್ಯರಿಗೆ ಉತ್ತಮ ಅವಕಾಶ’ವೆಂದು ಅವರು ಹೇಳಿದ್ದಾರೆ.  


ರಿಂಕು ಸಿಂಗ್, ಜಿತೇಶ್ ಶರ್ಮಾರಂತಹ ಪ್ರತಿಭೆಗಳಿಗೂ ಸ್ಥಾನ ನೀಡಲಾಗಿದೆ. ಮೊದಲ ಬಾರಿಗೆ ಏಷ್ಯನ್ ಗೇಮ್ಸ್‌ನಲ್ಲಿ ಕ್ರಿಕೆಟ್ ಆಡಲಾಗುತ್ತಿದೆ. ಭಾರತ ಪುರುಷರ ಜೊತೆಗೆ ಮಹಿಳಾ ತಂಡವನ್ನು ಪ್ರಕಟಿಸಲಾಗಿದೆ.


ಇದನ್ನೂ ಓದಿ: “ಒಂದು ವರ್ಷದಿಂದ ಭಾರತ ತಂಡ ಈ ಆಟಗಾರನನ್ನು ಮಿಸ್ ಮಾಡಿಕೊಳ್ಳುತ್ತಿದೆ”: Team India ಕೋಚ್ ಹೇಳಿಕೆ  


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.