Ruturaj Gaikwad Captain: ಜಿಂಬಾಬ್ವೆ ಪ್ರವಾಸದ ವೇಳೆ ಅದ್ಭುತ ಪ್ರದರ್ಶನ ನೀಡಿದ ಧೋನಿಯಂತೇ ಈತನೂ ಧೀಮಂತ ಆಟಗಾರ ಎನಿಸಿಕೊಂಡಿದ್ದ ರುತುರಾಜ್ ಗಾಯಕ್ವಾಡ್ ಇತ್ತೀಚೆಗೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯದೆ ಕಂಗಾಲಾಗಿದ್ದರು.
ಶ್ರೀಲಂಕಾ ಪ್ರವಾಸಕ್ಕೆ ಟೀಂ ಇಂಡಿಯಾವನ್ನು ಘೋಷಿಸಲಾಗಿದ್ದು, ಹೊಸ ಕೋಚ್ ಗೌತಮ್ ಗಂಭೀರ್ ಬಗ್ಗೆ ದೊಡ್ಡ ಪ್ರಶ್ನೆ ಉದ್ಭವಿಸಿತ್ತು. ಆದರೆ, ಈ ಪ್ರಶ್ನೆಗೆ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ್ದರು. ಆದರೆ ಇದೀಗ ಗಾಯಕ್ವಾಡ್ ಅವರ ಅದೃಷ್ಟ ದಿಢೀರ್ ಖುಲಾಯಿಸಿದೆ. ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆ ಅವರನ್ನು 2024-25ರ ರಣಜಿ ಟ್ರೋಫಿಗೆ ತಂಡದ ನಾಯಕರನ್ನಾಗಿ ಆಯ್ಕೆ ಮಾಡಿದೆ.
ಇದನ್ನೂ ಓದಿ: "ದರ್ಶನ್ ಬಿಡುಗಡೆಯಾಗಿ ನಮ್ಮ ಮನೆಗೆ ಬಂದ್ರೆ...."- ಮೃತ ರೇಣುಕಾಸ್ವಾಮಿ ತಂದೆಯ ಅಚ್ಚರಿಯ ಹೇಳಿಕೆ ವೈರಲ್
ಜಿಂಬಾಬ್ವೆ ವಿರುದ್ಧ ರುತುರಾಜ್ ಗಾಯಕ್ವಾಡ್ ಅದ್ಭುತ ಬ್ಯಾಟಿಂಗ್ ಮಾಡಿದ್ದರು. ನಂತರ ಅವರು ಶ್ರೀಲಂಕಾ ಪ್ರವಾಸದಲ್ಲಿ ಟೀಮ್ ಇಂಡಿಯಾದ ಭಾಗವಾಗುವುದು ಖಚಿತ ಎಂದು ನಿರೀಕ್ಷಿಸಲಾಗಿತ್ತು. ಆದರೆ ಅವರಿಗೆ ಅವಕಾಶ ಸಿಗಲಿಲ್ಲ. ಜಿಂಬಾಬ್ವೆ ಪ್ರವಾಸದಲ್ಲಿ ಗಾಯಕ್‌ವಾಡ್ 7, 77 ಮತ್ತು 49 ರನ್‌ಗಳ ಇನ್ನಿಂಗ್ಸ್‌ಗಳನ್ನು ಆಡಿದ್ದರು.
ಇದೀಗ ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆ ಅವರಿಗೆ ಗುಡ್ ನ್ಯೂಸ್ ನೀಡಿದ್ದು, ತಂಡದ ನಾಯಕನನ್ನಾಗಿ ಆಯ್ಕೆ ಮಾಡಿದೆ. ಅವರ ನಾಯಕತ್ವದಲ್ಲಿ ತಂಡವು ಉತ್ತಮವಾಗಿ ಕಾರ್ಯನಿರ್ವಹಿಸಿದರೆ, ಖಂಡಿತವಾಗಿಯೂ ಅಂತರರಾಷ್ಟ್ರೀಯ ವೃತ್ತಿಜೀವನದ ಮೇಲೆ ಆಳವಾದ ಪರಿಣಾಮ ಬೀರುತ್ತದೆ.
ಇದನ್ನೂ ಓದಿ: ಭಾರತೀಯ ಬ್ಯಾಂಕ್ ಖಾತೆಗಳಿಲ್ಲದೆ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಯುಪಿಐ ಬಳಕೆ ಸಾಧ್ಯ! ಹೇಗೆ ಗೊತ್ತಾ?
ಕೆಲ ದಿನಗಳ ಹಿಂದೆ ಕೇದಾರ್ ಜಾಧವ್ ನಿವೃತ್ತಿ ಘೋಷಿಸಿದ್ದರು. ಅಂದಿನಿಂದ ಮಹಾರಾಷ್ಟ್ರ ತಂಡ ಉತ್ತಮ ನಾಯಕನ ನಿರೀಕ್ಷೆಯಲ್ಲಿತ್ತು. ಇದೀಗ ರುತುರಾಜ್ ಐಪಿಎಲ್ ಮತ್ತು ಭಾರತ ತಂಡದ ನಾಯಕರೂ ಆಗಿದ್ದಾರೆ. ಅವರ ಅನುಭವವನ್ನು ಪರಿಗಣಿಸಿ, ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ರಣಜಿ ಟ್ರೋಫಿ ಋತುವಿಗೆ ಅವರನ್ನು ನಾಯಕರನ್ನಾಗಿ ಆಯ್ಕೆ ಮಾಡಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews