CSK captain MS Dhoni: ಐಪಿಎಲ್ 2025 ರ ಮಧ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ದೊಡ್ಡ ಹಿನ್ನಡೆಯನ್ನು ಅನುಭವಿಸಿದೆ. ನಾಯಕ ರುತುರಾಜ್ ಗಾಯಕ್ವಾಡ್ ಗಾಯದ ಕಾರಣದಿಂದಾಗಿ ಟೂರ್ನಿಯಿಂದ ಹೊರಗುಳಿದಿದ್ದಾರೆ. ಅವರ ಸ್ಥಾನದಲ್ಲಿ, ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮತ್ತೆ ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ. ಋತುವಿನ ಉಳಿದ ಪಂದ್ಯಗಳಿಗೆ ನಾಯಕತ್ವ ವಹಿಸಲಿದ್ದಾರೆ. ಮೊಣಕೈ ಗಾಯದಿಂದಾಗಿ ರುತುರಾಜ್ ಇನ್ನು ಮುಂದೆ ಈ ಋತುವಿನಲ್ಲಿ ಆಡುವುದಿಲ್ಲ.
ಇದನ್ನೂ ಓದಿ: ಕಿಡ್ನಿ ಕಲ್ಲು ಕರಗಿಸುವ ಶಕ್ತಿಯುತ ಹಣ್ಣು.. ವರ್ಷಕ್ಕೊಮ್ಮೆ ತಿಂದರೂ ಸಾಕು ಮೂತ್ರಪಿಂಡವನ್ನು ಸಂಪೂರ್ಣ ಸ್ವಚ್ಛಗೊಳಿಸುತ್ತೆ!
ಚೆನ್ನೈ ತಂಡವು ಶುಕ್ರವಾರ ಚೆಪಾಕ್ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಆಡಲಿದೆ. ಈ ಪಂದ್ಯವನ್ನು ತವರು ನೆಲದಲ್ಲಿ ಆಡುವ ಮೊದಲು, ತಂಡಕ್ಕೆ ಕೆಟ್ಟ ಸುದ್ದಿ ಬಂದಿದೆ. ಋತುರಾಜ್ ನಾಯಕತ್ವದಲ್ಲಿ, ತಂಡವು ಮೊದಲ ಐದು ಪಂದ್ಯಗಳಲ್ಲಿ ಕೇವಲ ಒಂದು ಗೆಲುವು ಮಾತ್ರ ಗಳಿಸಿದೆ. ನಾಲ್ಕು ಪಂದ್ಯಗಳಲ್ಲಿ ಸೋಲನ್ನು ಎದುರಿಸಿದ್ದಾರೆ. ಸದ್ಯ ತಂಡವು ಪಾಯಿಂಟ್ ಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲಿದ್ದು, ಸನ್‌ರೈಸರ್ಸ್ ಹೈದರಾಬಾದ್‌ಗಿಂತ ಮೇಲಿದೆ.
ಸಿಎಸ್‌ಕೆ ಮುಖ್ಯ ಕೋಚ್ ಸ್ಟೀಫನ್ ಫ್ಲೆಮಿಂಗ್ ಮಾಹಿತಿ ನೀಡಿದ್ದು,"ರುತುರಾಜ್ ಗಾಯಕ್ವಾಡ್ ಗುವಾಹಟಿಯಲ್ಲಿ ಗಾಯಗೊಂಡಿದ್ದಾರೆ. ಈ ಗಾಯದಿಂದ ತುಂಬಾ ನೋವು ಅನುಭವಿಸಿದ್ದರು. ನಾವು ಎಕ್ಸ್-ರೇ ಮಾಡಿಸಿದ್ದೇವೆ. ಅದರಿಂದ ಏನೂ ತಿಳಿದುಬರಲಿಲ್ಲ. ಇದಾದ ನಂತರ, MRI ಮಾಡಿಸಿದೆವು. ಅದರಲ್ಲಿ ಅವರ ಮೊಣಕೈಯ ರೇಡಿಯಲ್ ಭಾಗವೊಂದು ಮುರಿತವಾಗಿದೆ ಎಂದು ಬಹಿರಂಗಪಡಿಸಿತು. ಇದು ನಮಗೆ ಆಘಾತವನ್ನುಂಟು ಮಾಡಿತ್ತು. ದುರದೃಷ್ಟವಶಾತ್ ಅವರು ಈಗ ಪಂದ್ಯಾವಳಿಯಿಂದ ಹೊರಗುಳಿಯಲಿದ್ದಾರೆ. ನಮ್ಮಲ್ಲಿ ಎಂ.ಎಸ್. ಧೋನಿ ಇದ್ದಾರೆ, ಅವರು ಐಪಿಎಲ್‌ನ ಉಳಿದ ಪಂದ್ಯಗಳಲ್ಲಿ ನಾಯಕನ ಪಾತ್ರವನ್ನು ನಿರ್ವಹಿಸುತ್ತಾರೆ" ಎಂದಿದ್ದಾರೆ.
ಮಾರ್ಚ್ 30 ರಂದು ಗುವಾಹಟಿಯಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧದ ಸಿಎಸ್‌ಕೆ ಪಂದ್ಯದ ಸಮಯದಲ್ಲಿ ಗಾಯಕ್ವಾಡ್ ಗಾಯಗೊಂಡಿದ್ದರು. ಆ ಪಂದ್ಯದಲ್ಲಿ ಸಿಎಸ್‌ಕೆ ಸೋತಿತ್ತು. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ವೇಗಿ ತುಷಾರ್ ದೇಶಪಾಂಡೆ ಅವರ ಚೆಂಡಿನಿಂದ ರುತುರಾಜ್ ಗಾಯಗೊಂಡಿದ್ದರು. ಇದರ ಹೊರತಾಗಿಯೂ, ಬ್ಯಾಟಿಂಗ್ ಮಾಡಿ 63 ರನ್ ಗಳಿಸಿದ್ದರು. ಧೈರ್ಯ ತೋರಿಸಿದ ರುತುರಾಜ್ ಇನ್ನೂ ಎರಡು ಪಂದ್ಯಗಳಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ: ಸುದೀಪ್ ಜೊತೆಗಿನ ಮನಸ್ತಾಪದ ಬಗ್ಗೆ ಮಾತನಾಡಿದ ನಟ ಶಿವರಾಜ್ ಕುಮಾರ್
43 ವರ್ಷದ ಧೋನಿ 2008 ರಿಂದ 2024 ರವರೆಗೆ ಚೆನ್ನೈ ತಂಡದ ನಾಯಕತ್ವ ವಹಿಸಿದ್ದರು. ಇದಾದ ನಂತರ ಗಾಯಕ್ವಾಡ್ ಅವರಿಗೆ ನಾಯಕತ್ವವನ್ನು ಹಸ್ತಾಂತರಿಸಿದರು. ಧೋನಿ 2022 ರಲ್ಲಿ ರವೀಂದ್ರ ಜಡೇಜಾ ಅವರಿಗೆ ನಾಯಕತ್ವವನ್ನು ಹಸ್ತಾಂತರಿಸಿದ್ದರು. ಆದರೆ ತಂಡದ ಕಳಪೆ ಫಲಿತಾಂಶದ ನಂತರ, ಋತುವಿನ ಮಧ್ಯದಲ್ಲಿ ಅವರು ನಾಯಕತ್ವವನ್ನು ಮರಳಿ ಪಡೆದರು. ಧೋನಿ ನಾಯಕತ್ವದಲ್ಲಿ, ಚೆನ್ನೈ ತಂಡವು 2010, 2011, 2018, 2021 ಮತ್ತು 2023 ರಲ್ಲಿ ಐದು ಐಪಿಎಲ್ ಪ್ರಶಸ್ತಿಗಳು ಮತ್ತು ಎರಡು ಚಾಂಪಿಯನ್ಸ್ ಲೀಗ್ ಟ್ರೋಫಿಗಳನ್ನು ಗೆದ್ದಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ









