ಜಿಯೋ ಮಾರ್ಟ್’ನ ಬ್ರಾಂಡ್ ಅಂಬಾಸಿಡರ್ ಮಹೇಂದ್ರ ಸಿಂಗ್ ಧೋನಿ

Mahendra Singh Dhoni: ಹಬ್ಬದ ಕ್ಯಾಂಪೇನ್ ಅನ್ನು ಜಿಯೋ ಉತ್ಸವ, ಸೆಲೆಬ್ರೇಶನ್‌ ಆಫ್‌ ಇಂಡಿಯಾ ಎಂದು ಮರುನಾಮಕರಣ ಮಾಡಿದ್ದು, 2023 ಅಕ್ಟೋಬರ್ 8ರಿಂದ ಲೈವ್ ಆಗಲಿದೆ.

Written by - Bhavishya Shetty | Last Updated : Oct 6, 2023, 04:53 PM IST
    • ರಿಲಯನ್ಸ್ ರಿಟೇಲ್‌’ನ ಜಿಯೋಮಾರ್ಟ್ ದೇಶದ ಪ್ರಮುಖ ಇ-ಮಾರ್ಕೆಟ್‌ ಪ್ಲೇಸ್‌’ಗಳಲ್ಲಿ ಒಂದು
    • ಜಿಯೋ ಉತ್ಸವ, ಸೆಲೆಬ್ರೇಶನ್‌ ಆಫ್‌ ಇಂಡಿಯಾ ಎಂದು ಮರುನಾಮಕರಣ
    • ಎಲೆಕ್ಟಾನಿಕ್ಸ್, ಫ್ಯಾಷನ್, ಬ್ಯೂಟಿ, ಮನೆ ಅಲಂಕಾರ ಸೇರಿದಂತೆ ವಿವಿಧ ವಸ್ತುಗಳು ಲಭ್ಯ
ಜಿಯೋ ಮಾರ್ಟ್’ನ ಬ್ರಾಂಡ್ ಅಂಬಾಸಿಡರ್ ಮಹೇಂದ್ರ ಸಿಂಗ್ ಧೋನಿ title=
Mahendra Singh Dhoni

Mahendra Singh Dhoni: ರಿಲಯನ್ಸ್ ರಿಟೇಲ್‌’ನ ಜಿಯೋಮಾರ್ಟ್ ದೇಶದ ಪ್ರಮುಖ ಇ-ಮಾರ್ಕೆಟ್‌ ಪ್ಲೇಸ್‌’ಗಳಲ್ಲಿ ಒಂದಾಗಿದ್ದು, ಭಾರತೀಯ ಕ್ರಿಕೆಟ್ ಐಕಾನ್ ಮಹೇಂದ್ರ ಸಿಂಗ್ ಧೋನಿ ಅವರನ್ನು ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಿಕೊಂಡಿದೆ. ಇದರ ಜೊತೆಗೆ, ತನ್ನ ಹಬ್ಬದ ಕ್ಯಾಂಪೇನ್ ಅನ್ನು ಜಿಯೋ ಉತ್ಸವ, ಸೆಲೆಬ್ರೇಶನ್‌ ಆಫ್‌ ಇಂಡಿಯಾ ಎಂದು ಮರುನಾಮಕರಣ ಮಾಡಿದ್ದು, 2023 ಅಕ್ಟೋಬರ್ 8ರಿಂದ ಲೈವ್ ಆಗಲಿದೆ.

ಇದನ್ನೂ ಓದಿ: ವಿಶ್ವಕಪ್ ಸೆಮಿಫೈನಲ್ ಪ್ರವೇಶಿಸಲಿರುವ 4 ತಂಡಗಳನ್ನು ಹೆಸರಿಸಿದ ಸಚಿನ್ ತೆಂಡೂಲ್ಕರ್

ಜಿಯೋಮಾರ್ಟ್ ಸಿಇಒ ಸಂದೀಪ್ ವರಗಂಟಿ ಮಾತನಾಡಿದ್ದು, "ನಮ್ಮ ಬ್ರಾಂಡ್ ಅಂಬಾಸಿಡರ್ ಆಗಿ ಎಂಎಸ್ ಧೋನಿ ಅತ್ಯಂತ ಉತ್ತಮವಾಗಿ ಹೊಂದಿಕೆಯಾಗುತ್ತಾರೆ. ಅವರ ವ್ಯಕ್ತಿತ್ವವು ಜಿಯೋಮಾರ್ಟ್ ನ ಹಾಗೆಯೇ ವಿಶ್ವಾಸ, ನಂಬಿಕೆ ಮತ್ತು ಖಾತರಿಯನ್ನು ಪ್ರತಿಬಿಂಬಿಸುತ್ತದೆ. ನಮ್ಮ ಪ್ರೀತಿ ಪಾತ್ರರ ಜೊತೆಗೆ ವಿಶೇಷ ಕ್ಷಣಗಳನ್ನು ಕಳೆಯುವುದಕ್ಕೆ ನಮ್ಮ ಹೊಸ ಅಭಿಯಾನವು ಅನುವು ಮಾಡುತ್ತದೆ. ಇದರಲ್ಲಿ ಶಾಪಿಂಗ್ ಎಂಬುದು ಒಂದು ಅವಿಭಾಜ್ಯ ಅಂಗ ಎಂಬುದನ್ನು ಇದು ಪ್ರತಿಬಿಂಬಿಸುತ್ತದೆ. ಮೆಟ್ರೋ ಹೊರತಾದ ಪ್ರದೇಶಗಳು ಒಟ್ಟಾರೆ ಸೇಲ್ ನಲ್ಲಿ ಸುಮಾರು 60% ಪಾಲು ಹೊಂದಿದೆ. ಇದು ದೇಶದ ರಿಟೇಲ್ ವಲಯ ವಿಕೇಂದ್ರೀಕರಣಗೊಳ್ಳುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿದೆ" ಎಂದು ಹೇಳಿದ್ದಾರೆ.

“ಪ್ರಾದೇಶಿಕ ಕಲಾಕಾರರನ್ನು ಪ್ರೋತ್ಸಾಹಿಸುವ ಕೆಲಸವನ್ನು ಜಿಯೋಮಾರ್ಟ್ ಎಂದಿಗೂ ಮಾಡುತ್ತಿದೆ. ಪ್ಲಾಟ್‌ಫಾರಂ ಪ್ರಸ್ತುತ 1000 ಕ್ಕೂ ಹೆಚ್ಚು ಕಲಾಕಾರರ ಜೊತೆಗೆ ಕೆಲಸ ಮಾಡುತ್ತಿದ್ದು, 1.5 ಲಕ್ಷ ವಿಶಿಷ್ಟ ಉತ್ಪನ್ನಗಳನ್ನು ಮಾರಾಟ ಮಾಡುತ್ತಿದೆ. ಅಷ್ಟಕ್ಕೂ, ಕ್ಯಾಂಪೇನ್ ಶೂಟಿಂಗ್‌ನ ಭಾಗವಾಗಿ, ಬಿಹಾರದ ಪ್ರಶಸ್ತಿ ಪುರಸ್ಕ್ರತ ಕಲಾವಿದೆ ಅಂಬಿಕಾ ದೇವಿಯವರ ಮಧುಬನಿ ಪೇಂಟಿಂಗ್ ಅನ್ನು ಧೋನಿಯವರಿಗೆ ವರಗಂಟಿ ಪ್ರದಾನ ಮಾಡಿದ್ದಾರೆ. ಗ್ರಾಹಕರಿಗೆ ಉತ್ತಮ ಉತ್ಪನ್ನಗಳು ಮತ್ತು ಉತ್ತಮ ಅನುಭವವನ್ನು ಒದಗಿಸುವುದಷ್ಟೇ ಅಲ್ಲ, ಸರಾಗವಾಗಿ ಉದ್ಯಮವನ್ನು ನಡೆಸಲು ಲಕ್ಷಾಂತರ ಕಲಾಕಾರರು ಮತ್ತು ಎಸ್‌ಎಂಬಿಗಳಿಗೆ ಅನುವು ಮಾಡಿಕೊಡುತ್ತಿದೆ.

ಮಹೇಂದ್ರ ಸಿಂಗ್ ಧೋನಿ ಈ ಬಗ್ಗೆ ಮಾತನಾಡಿದ್ದು, "ಜಿಯೋಮಾರ್ಟ್ ನ ಮೌಲ್ಯ ಮತ್ತು ಗುರುತಿಗೂ ನನಗೂ ಹೊಂದಿಕೆಯಾಗುತ್ತದೆ. ದೇಶೀಯ ಇ-ಕಾಮರ್ಸ್ ಬ್ರಾಂಡ್ ಆಗಿರುವ ಇದು ಭಾರತದಲ್ಲಿ ಡಿಜಿಟಲ್ ರಿಟೇಲ್ ಕ್ರಾಂತಿಯನ್ನು ಉಂಟುಮಾಡುವ ಉದ್ದೇಶವನ್ನು ಹೊಂದಿದೆ. ಜಿಯೋಮಾರ್ಟ್ ಜೊತೆಗೆ ಗುರುತಿಸಿಕೊಳ್ಳಲು ಮತ್ತು ಲಕ್ಷಾಂತರ ಭಾರತೀಯರ ಶಾಪಿಂಗ್ ಪಯಣದ ಭಾಗವಾಗುವುದಕ್ಕೆ ನನಗೆ ಹೆಮ್ಮೆಯಾಗುತ್ತಿದೆ" ಎಂದರು.

ಜಿಯೋಮಾರ್ಟ್’ನ ವಿಭಿನ್ನ ವಿಭಾಗೀಯ ಪರಿಣಿತಿ, ಹಬ್ಬದ ಉತ್ಸಾಹ ಮತ್ತು ಅದ್ಭುತ ಶಾಪಿಂಗ್ ಡೀಲ್‌’ಗಳು ಮತ್ತು ರಿಯಾಯಿತಿಗಳನ್ನು ಹೈಲೈಟ್ ಮಾಡುವಂತೆ ಫಿಲಂ ಅನ್ನು ರೂಪಿಸಲಾಗಿದೆ.

ಇದನ್ನೂ ಓದಿ: ವಿಶ್ವಕಪ್‌: PET ಬಾಟಲಿನಿಂದ ತಯಾರಿಸಿದ ರಾಷ್ಟ್ರೀಯ ಧ್ವಜಗಳನ್ನು ಪರಿಚಯಿಸಿದ Coca Cola India

ಕಳೆದ ವರ್ಷ ಜಿಯೋಮಾರ್ಟ್ ವಿವಿಧ ವಿಭಾಗಗಳಲ್ಲಿ ಲಭ್ಯವಿರುವ ಉತ್ಪನ್ನಗಳನ್ನು ಪ್ರಚಾರ ಮಾಡುವ ವಿಧಾನವನ್ನು ಅಳವಡಿಸಿಕೊಂಡಿತ್ತು. ಎಲೆಕ್ಟಾನಿಕ್ಸ್, ಫ್ಯಾಷನ್, ಬ್ಯೂಟಿ, ಮನೆ ಅಲಂಕಾರ ಸೇರಿದಂತೆ ವಿವಿಧ ವಿಭಾಗಗಳಲ್ಲಿ ರಿಲಯನ್ಸ್ ಮಾಲೀಕತ್ವದ ಬ್ರಾಂಡ್‌’ಗಳನ್ನು ಜಿಯೋಮಾರ್ಟ್ ಸೇರಿಸಿಕೊಂಡಿದೆ. ಇದರಲ್ಲಿ ಅರ್ಬನ್ ಲ್ಯಾಡರ್, ರಿಲಯನ್ಸ್ ಟ್ರೆಂಡ್ಸ್, ರಿಲಯನ್ಸ್ ಜ್ಯೂವೆಲ್ಸ್, ಹ್ಯಾಮ್ಲೇಸ್ ಸೇರಿದಂತೆ ಇತರೆ ಇವೆ. ಭಾರತದ ಅತಿದೊಡ್ಡ ದೇಶೀಯ ಇ-ಮಾರ್ಕೆಟ್‌’ಪ್ಲೇಸ್ ಆಗುವ ಜಿಯೋಮಾರ್ಟ್’ನ ಧ್ಯೇಯಕ್ಕೆ ಅನುಗುಣವಾಗಿ ಈ ತ್ವರಿತ ವಿಸ್ತರಣೆ ನಡೆಯುತ್ತಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News