ಮುಂಬೈ : ಕೊರೋನಾ ಆತಂಕದ ಹಿನ್ನೆಲೆಯಲ್ಲಿ ಟಿ20 ವಿಶ್ವಕಪ್ʼನ್ನ ಭಾರತದಿಂದ ಯುಎಇಗೆ ಸ್ಥಳಾಂತರಿಸಬೇಕಾಗಬಹುದು ಎಂದು ಬಿಸಿಸಿಐ ಕಾರ್ಯದರ್ಶಿ ಜೇ ಶಾ ಹೇಳಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಬಿಸಿಸಿಐ ಕಾರ್ಯದರ್ಶಿ ಜೇ ಶಾ(Jay Shah), ಇನ್ನು ನಾವು ಪರಿಸ್ಥಿತಿಯನ್ನ ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಆಟಗಾರರ ಆರೋಗ್ಯ ಮತ್ತು ಸುರಕ್ಷತೆ ಪ್ರಮುಖವಾಗಿದೆ. ಹಾಗಾಗಿ ನಾವು ಶೀಘ್ರದಲ್ಲೇ ಅಂತಿಮ ನಿರ್ಣಾಯ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.
ಇದನ್ನೂ ಓದಿ : "ವಿರಾಟ್ ಕೊಹ್ಲಿಯಲ್ಲಿ ರಿಕ್ಕಿ ಪಾಂಟಿಂಗ್ ಮತ್ತು ವಿವಿಯನ್ ರಿಚರ್ಡ್ಸ್ ಇಬ್ಬರೂ ಇದ್ದಾರೆ"
ಪಂದ್ಯಾವಳಿಯ ಸೂಪರ್ 12 ಹಂತವು ಯುಎಇ(United Arab Emirates) ದುಬೈ, ಅಬುಧಾಬಿ ಮತ್ತು ಶಾರ್ಜಾದ ಮೂರು ಸ್ಥಳಗಳಲ್ಲಿ ನಡೆಯಲಿದೆ ಮತ್ತು ರೌಂಡ್ 1 ಯುಎಇ ಮತ್ತು ಒಮನ್ʼನ ವೇದಿಕೆಗಳಲ್ಲಿ ಒಂದರಿಂದ ಸಹ-ಆತಿಥ್ಯ ವಹಿಸಲಿದೆ ಎಂದು ವರದಿ ಉಲ್ಲೇಖಿಸಿದೆ.
ಇದನ್ನೂ ಓದಿ : IPL ಮುಗಿಯುತ್ತಿದ್ದಂತೆ ಆರಂಭವಾಗಲಿದೆ T20 World Cup: ಎರಡೂ ಪಂದ್ಯಾವಳಿಗಳ ವೇಳಾಪಟ್ಟಿ
ಮೇ ತಿಂಗಳಲ್ಲಿ ಅಮಾನತುಗೊಂಡಿದ್ದ ಐಪಿಎಲ್(IPL)ʼನ ಉಳಿದ ಭಾಗವು ಯುಎಇಯಲ್ಲಿ ಸೆಪ್ಟೆಂಬರ್ 19ರಿಂದ ಪುನರಾರಂಭವಾಗಲಿದ್ದು, ಐಪಿಎಲ್ ಫೈನಲ್ ಮುಗಿದ ಕೆಲವೇ ದಿನಗಳಲ್ಲಿ ಟಿ20 ವಿಶ್ವಕಪ್ ಪ್ರಾರಂಭವಾಗಲಿದೆ ಎಂದು ವರದಿ ಹೇಳಿದೆ.
ಇದನ್ನೂ ಓದಿ : T20 World Cup: ಈ ದಿನಾಂಕದಂದು ಪ್ರಾರಂಭವಾಗಲಿದೆ ಟಿ 20 ವಿಶ್ವಕಪ್
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.