ಮುಂಬೈ: ಡಾ ಡಿವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿ ಕ್ರೀಡಾಂಗಣದಲ್ಲಿ ಇಂದು ಸಂಜೆ 7.30ಕ್ಕೆ ಮಾಜಿ ಚಾಂಪಿಯನ್‍ಗಳ ನಡುವೆ ಭರ್ಜರಿ ಕಾಳಗ ನಡೆಯಲಿದೆ. ಪ್ರಸಕ್ತ ಟೂರ್ನಿಯಲ್ಲಿ ಸತತ ಸೋಲುಗಳಿಂದ  ಕಂಗೆಟ್ಟಿರುವ 2 ಬಲಿಷ್ಠ ತಂಡಗಳು ಗೆಲುವಿಗಾಗಿ ಪೈಪೋಟಿ ನಡೆಸಲಿವೆ.


COMMERCIAL BREAK
SCROLL TO CONTINUE READING

ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ಮತ್ತು ರವೀಂದ್ರ ಜಡೇಜಾ ನಾಯಕತ್ವದ ಚೆನ್ನೈ  ಸೂಪರ್ ಕಿಂಗ್ಸ್ ಅಳಿವು-ಉಳಿವಿಗಾಗಿ ಫೈಟ್ ನಡೆಸಲಿವೆ. ಉಭಯ ತಂಡಗಳು ಐಪಿಎಲ್‌ ಇತಿಹಾಸದಲ್ಲಿಯೇ ಅತ್ಯಂತ ಯಶಸ್ವಿ ತಂಡಗಳಾಗಿ ಹಲವಾರು ದಾಖಲೆ ನಿರ್ಮಿಸಿವೆ. ಆದರೆ ಈ ಬಾರಿ ಯಾಕೋ ಎರಡೂ ತಂಡಗಳಿಗೆ ಅದೃಷ್ಟ ಕೈಕೊಟ್ಟಿದೆ. ಸೋಲುಗಳ ಮೇಲೆ ಸೋಲು ಕಂಡು ಮುಂಬೈ ಮತ್ತು ಚೆನ್ನೈ ಭಾರೀ ಮುಖಭಂಗ ಅನುಭವಿಸಿವೆ.


ಇದನ್ನೂ ಓದಿ: DC vs PBKS ಪಂದ್ಯಕ್ಕೆ ಕೊರೋನಾ ಕಾಟ : ದೆಹಲಿ ಆಟಗಾರನಿಗೆ ಕೋವಿಡ್ ಪಾಸಿಟಿವ್!


ಮುಂಬೈ ಮತ್ತು ಚೆನ್ನೈ ಲೀಗ್ ಹಂತದಲ್ಲಿಯೇ ಹೊರಬೀಳುವ ಆತಂಕದಲ್ಲಿವೆ. ಹೀಗಾಗಿ ಇಂದಿನ ಪಂದ್ಯ ಇತ್ತಂಡಗಳಿಗೆ ತುಂಬಾ ಮಹತ್ವದ್ದಾಗಿದೆ. ಬಲಿಷ್ಠ ತಂಡವೆನೆಸಿಕೊಂಡಿದ್ದ ಮುಂಬೈ ಕಳೆದ ಬಾರಿಯಂತೆ ಈ ಬಾರಿಯೂ ಕಳಪೆ ಪ್ರದರ್ಶನ ಮುಂದುವರಿಸಿದೆ. ಪರಿಣಾಮ ಆಡಿದ 6 ಪಂದ್ಯಗಳಲ್ಲಿ ಸೋಲು ಕಂಡಿದ್ದು, ಗೆಲುವಿನ ಖಾತೆ ತೆರೆಯುವ ವಿಶ್ವಾಸದಲ್ಲಿದೆ. ಇನ್ನು ಕಳೆದ ಬಾರಿ ಚಾಂಪಿಯನ್ ಚೆನ್ನೈ ಆಡಿದ 6 ಪಂದ್ಯಗಳಲ್ಲಿ ಕೇವಲ 1 ಗೆಲುವು ಮಾತ್ರ ಸಾಧಿಸಿದ್ದು, 5 ಸೋಲು ಕಂಡಿದೆ. ಪಾಯಿಂಟ್ಸ್ ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿ ಚೆನ್ನೈ ಇದ್ದರೆ, ಕೊನೆ ಸ್ಥಾನದಲ್ಲಿ ಮುಂಬೈ ಇದೆ.


ವಿರಾಟ್‌ ದಾಖಲೆ ಮುರಿದ ಕನ್ನಡಿಗ ಕೆ.ಎಲ್‌ ರಾಹುಲ್‌


ಇನ್ನು ಚೆನ್ನೈಗೂ ಗೆಲುವು ಅನಿವಾರ್ಯವಾಗಿದೆ. ಈ ಪಂದ್ಯವನ್ನೂ ಕಳೆದುಕೊಂಡರೆ ಚೆನ್ನೈಗೆ ಪ್ಲೇ-ಆಫ್‌ ಹಾದಿ ಮತ್ತಷ್ಟು ಕಠಿಣವಾಗಲಿದೆ. ಐಪಿಎಲ್‌ನ ಬದ್ದ ಎದುರಾಳಿಗಳಾದ ಮುಂಬೈ-ಚೆನ್ನೈ ಇದುವರೆಗೂ ಒಟ್ಟು 32 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಮುಂಬೈ 19 ಪಂದ್ಯಗಳಲ್ಲಿ ಗೆಲುವು ದಾಖಲಿಸಿದ್ದರೆ, ಚೆನ್ನೈ 13 ಪಂದ್ಯಗಳಲ್ಲಿ ಗೆಲುವಿನ ನಗೆ ಬೀರಿದೆ.


ಎರಡೂ ತಂಡಗಳ ಸ್ಕ್ವಾಡ್ ಈ ರೀತಿ ಇದೆ:


ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಡೆವಾಲ್ಡ್ ಬ್ರೆವಿಸ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಕೀರನ್ ಪೊಲಾರ್ಡ್, ಫ್ಯಾಬಿಯನ್ ಅಲೆನ್, ಜಯದೇವ್ ಉನದ್ಕತ್, ಮುರುಗನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಟೈಮಲ್ ಮಿಲ್ಸ್, ಬೇಸಿಲ್ ಥಂಪಿ, ಅನ್‌ಮೋಲ್‌ಪ್ರೀತ್‌ ಸಿಂಗ್‌, ಸಂಜಯ್ ಯಾದವ್, ರಿಲೆ ಮೆರೆಡಿತ್, ಟಿಮ್ ಡೇವಿಡ್, ಡೇನಿಯಲ್ ಸಾಮ್ಸ್, ರಮಣದೀಪ್ ಸಿಂಗ್, ಮಯಾಂಕ್ ಮಾರ್ಕಂಡೆ, ಆರ್ಯನ್ ಜುಯಲ್, ಅರ್ಜುನ್ ತೆಂಡೂಲ್ಕರ್, ಹೃತಿಕ್ ಶೋಕೀನ್, ರಾಹುಲ್ ಬುದ್ಧಿ, ಅರ್ಷದ್ ಖಾನ್


ಚೆನ್ನೈ ಸೂಪರ್ ಕಿಂಗ್ಸ್: ರವೀಂದ್ರ ಜಡೇಜಾ (ನಾಯಕ), ಎಂ.ಎಸ್.ಧೋನಿ (ವಿಕೆಟ್ ಕೀಪರ್), ಋತುರಾಜ್ ಗಾಯಕ್‌ವಾಡ್, ರಾಬಿನ್ ಉತ್ತಪ್ಪ, ಮೊಯೀನ್ ಅಲಿ, ಅಂಬಟಿ ರಾಯುಡು, ಶಿವಂ ದುಬೆ, ಡ್ವೇನ್ ಬ್ರಾವೋ, ಕ್ರಿಸ್ ಜೋರ್ಡಾನ್, ಮಹೇಶ್ ತೀಕ್ಷಣ, ಮುಖೇಶ್ ಚೌಧರಿ, ಡ್ವೈನ್ ಪ್ರಿಟೋರಿಯಸ್, ತುಷಾರ್ ದೇಶಪಾಂಡೆ, ಹರಿ ನಿಶಾಂತ್, ಎನ್.ಜಗದೀಸನ್, ಡೆವೊನ್ ಕಾನ್ವೇ, ಮಿಚೆಲ್ ಸ್ಯಾಂಟ್ನರ್, ಸುಭ್ರಾಂಶು ಸೇನಾಪತಿ, ಪ್ರಶಾಂತ್ ಸೋಲಂಕಿ, ಕೆ.ಎಂ.ಆಸಿಫ್, ಸಿಮರ್ಜೀತ್ ಸಿಂಗ್, ರಾಜವರ್ಧನ್ ಹಂಗರ್ಗೇಕರ್, ಭಗತ್ ವರ್ಮಾ, ಮತೀಶ ಪತಿರಾನ


ಐಪಿಎಲ್‌ ಪಂದ್ಯ: 33


ಮುಂಬೈ ಇಂಡಿಯನ್ಸ್ vs ಚೆನ್ನೈ ಸೂಪರ್ ಕಿಂಗ್ಸ್


ದಿನಾಂಕ: ಏಪ್ರಿಲ್ 21, ಗುರುವಾರ


ಸ್ಥಳ: ಡಾ ಡಿವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿ ಕ್ರೀಡಾಂಗಣ


ಸಮಯ: ಸಂಜೆ 7.30ಕ್ಕೆ


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.