ಮುಂಬೈ: ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಇಂದು ಪಂಜಾಬ್ ಕಿಂಗ್ಸ್‍ ಮತ್ತು ಮುಂಬೈ ಇಂಡಿಯನ್ಸ್ ನಡುವೆ ಸೆಣಸಾಟ ನಡೆಯಲಿದೆ. 15ನೇ ಆವೃತ್ತಿಯ ಐಪಿಎಲ್ ಟೂರ್ನಿಯ 23ನೇ ಪಂದ್ಯದಲ್ಲಿ ಬಲಿಷ್ಠ ತಂಡಗಳು ಮುಖಾಮುಖಿಯಾಗುತ್ತಿವೆ. ಸತತ 4 ಸೋಲುಗಳ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ನಿನ್ನೆ(ಏ.12) ಆರ್‍ಸಿಬಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿ ಗೆಲುವಿನ ಖಾತೆ ತೆರೆದಿದೆ. ಅದೇ ರೀತಿ ಮುಂಬೈ ಕೂಡ ಗೆಲುವಿನ ಖಾತೆ ತೆರೆಯುತ್ತಾ ಅನ್ನೋ ಕುತೂಹಲ ಮೂಡಿದೆ.


COMMERCIAL BREAK
SCROLL TO CONTINUE READING

ಆಡಿರುವ 4 ಪಂದ್ಯಗಳಲ್ಲಿಯೂ ಸೋಲು ಕಂಡಿರುವ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್‍ಗೆ ಈ ಪಂದ್ಯ ತುಂಬಾ ಮಹತ್ವದ್ದಾಗಿದೆ. ಪಾಯಿಂಟ್ಸ್ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಮುಂಬೈಗೆ ಗೆಲುವು ಅತ್ಯವಶ್ಯವಾಗಿದೆ. ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಹೊಂದಿದ್ದರೂ ರೋಹಿತ್ ಪಡೆಗೆ ಗೆಲುವು ಸಿಗುತ್ತಿಲ್ಲ. ತಂಡದಲ್ಲಿ ಅತ್ಯುತ್ತಮ ಆಟಗಾರರು ಇದ್ದರೂ ಮುಂಬೈಗೆ ಗೆಲುವು ಮರಿಚಿಕೆಯಾಗಿದೆ. ಇದು ರೋಹಿತ್ ಶರ್ಮಾರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.


ಇದನ್ನೂ ಓದಿ: RCB Fan Poster: ಆರ್‌ಸಿಬಿ ತಂಡ ಪ್ರಶಸ್ತಿ ಗೆಲ್ಲುವವರೆಗೂ ಮದುವೆಯಾಗೋಲ್ಲ- ಮಹಿಳಾ ಅಭಿಮಾನಿಯ ಪೋಸ್ಟರ್ ವೈರಲ್


CSK vs RCB : ಉತ್ತಪ್ಪ ಸಿಕ್ಸರ್‌ ಬಿರುಗಾಳಿಗೆ ಬೆಚ್ಚಿಬಿದ್ದ ಆರ್‌ಸಿಬಿ! ದಾಖಲೆ ಬರೆದ ಬ್ಯಾಟ್ಸ್‌ಮನ್


ಮುಂಬೈ ವಿರುದ್ಧದ ಇಂದಿನ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಪಾಯಿಂಟ್ಸ್ ಟೇಬಲ್‍ನಲ್ಲಿ ತಮ್ಮ ಸ್ಥಾನವನ್ನು ಮತ್ತಷ್ಟು ಉತ್ತಮಪಡಿಸಿಕೊಳ್ಳಲು ಪಂಜಾಬ್ ರಣತಂತ್ರ ರೂಪಿಸಿ ಕಣಕ್ಕಿಳಿಯುತ್ತಿದೆ. ಮುಂಬೈ ಮತ್ತು ಪಂಜಾಬ್ ಬಲಿಷ್ಠ ತಂಡಗಳಾಗಿರುವುದರಿಂದ ಇಂದಿನ ಪಂದ್ಯವು ಬಲುರೋಚಕತೆಯಿಂದ ಕೂಡಿರಲಿದೆ. ಗೆಲುವಿಗಾಗಿ ಉಭಯ ತಂಡಗಳ ನಡುವೆ ತೀವ್ರ ಪೈಪೋಟಿ ನಡೆಯುವ ನಿರೀಕ್ಷೆ ಇದೆ. ಅಂತಿಮವಾಗಿ ವಿಜಯಲಕ್ಷ್ಮಿ ಯಾರಿಗೆ ಒಲಿಯುತ್ತಾಳೆ ಕಾದು ನೋಡಬೇಕಿದೆ.


ಎರಡೂ ತಂಡಗಳ ಸ್ಕ್ವಾಡ್ ಈ ರೀತಿ ಇದೆ:


ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಅನ್ಮೋಲ್‌ಪ್ರೀತ್ ಸಿಂಗ್, ತಿಲಕ್ ವರ್ಮಾ, ಕೀರನ್ ಪೊಲಾರ್ಡ್, ಟಿಮ್ ಡೇವಿಡ್, ಡೇನಿಯಲ್ ಸಾಮ್ಸ್, ಮುರುಗನ್ ಅಶ್ವಿನ್, ಜಸ್‌ಪ್ರೀತ್ ಬುಮ್ರಾ, ಟೈಮಲ್ ಮಿಲ್ಸ್, ಬಾಸಿಲ್ ಥಂಪಿ, ಸೂರ್ಯಕುಮಾರ್ ಯಾದವ್, ಜಯದೇವ್ ಉನದ್ಕತ್, ಫ್ಯಾಬಿಯನ್ ಅಲೆನ್, ಸಂಜಯ್ ಯಾದವ್, ರಿಲೆ ಮೆರೆಡಿತ್, ರಮಣದೀಪ್ ಸಿಂಗ್, ಮಯಾಂಕ್ ಮಾರ್ಕಂಡೆ, ಆರ್ಯನ್ ಜುಯಲ್, ಅರ್ಜುನ್ ತೆಂಡೂಲ್ಕರ್, ಹೃತಿಕ್ ಶೋಕೀನ್, ರಾಹುಲ್ ಬುದ್ಧಿ, ಅರ್ಷದ್ ಖಾನ್, ಡೆವಾಲ್ಡ್ ಬ್ರೆವಿಸ್


ಪಂಜಾಬ್ ಕಿಂಗ್ಸ್: ಮಯಾಂಕ್ ಅಗರ್ವಾಲ್ (ನಾಯಕ), ಭಾನುಕಾ ರಾಜಪಕ್ಸೆ (ವಿಕೆಟ್ ಕೀಪರ್), ಶಿಖರ್ ಧವನ್, ಲಿಯಾಮ್ ಲಿವಿಂಗ್‌ಸ್ಟೋನ್, ಶಾರುಖ್ ಖಾನ್, ಓಡನ್ ಸ್ಮಿತ್, ರಾಜ್ ಬಾವಾ, ಅರ್ಷ್‌ದೀಪ್ ಸಿಂಗ್, ಹರ್‌ಪ್ರೀತ್ ಬ್ರಾರ್, ಕಗಿಸೊ ರಬಾಡ, ರಾಹುಲ್ ಚಾಹರ್, ಬೆನ್ನಿ ಹೋವೆಲ್, ಸಂದೀಪ್ ಶರ್ಮಾ, ರಿಷಿ ಧವನ್, ಬಲ್ತೇಜ್ ಸಿಂಗ್, ರಿಟಿಕ್ ಚಟರ್ಜಿ, ಜಿತೇಶ್ ಶರ್ಮಾ, ಪ್ರೇರಕ್ ಮಂಕಡ್, ಇಶಾನ್ ಪೊರೆಲ್, ಅಥರ್ವ ಟೈಡೆ, ಜಾನಿ ಬೈರ್‌ಸ್ಟೋವ್, ಪ್ರಭುಸಿಮ್ರಾನ್ ಸಿಂಗ್, ವೈಭವ್ ಅರೋರಾ, ಅಂಶ್ ಪಟೇಲ್


ಐಪಿಎಲ್‌ ಪಂದ್ಯ: 23


ಮುಂಬೈ ಇಂಡಿಯನ್ಸ್ vs ಪಂಜಾಬ್ ಕಿಂಗ್ಸ್


ದಿನಾಂಕ: ಏಪ್ರಿಲ್ 13, ಬುಧವಾರ


ಸ್ಥಳ: ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ


ಸಮಯ: ಸಂಜೆ 7.30ಕ್ಕೆ


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.