MI vs RCB: ಕೊಹ್ಲಿ, ಪಾಟೀದಾರ್‌ ಅರ್ಧಶತಕ; ಮುಂಬೈಗೆ 222 ರನ್‌ಗಳ ಟಾರ್ಗೆಟ್‌ ನೀಡಿದ ಆರ್‌ಸಿಬಿ

ಆರ್‌ಸಿಬಿ ಪರ ಆರಂಭಿಕ ಆಟಗಾರ ವಿರಾಟ್‌ ಕೊಹ್ಲಿ ಆಕರ್ಷಕ ಅರ್ಧಶತಕ ಗಳಿಸಿದರು. 42 ಎಸೆತಗಳಲ್ಲಿ ಅವರು 8 ಬೌಂಡರಿ ಮತ್ತು 2 ಸಿಕ್ಸರ್‌ ಇದ್ದ 67 ರನ್‌ ಗಳಿಸಿದರು.

Written by - Puttaraj K Alur | Last Updated : Apr 7, 2025, 09:36 PM IST
  • ವಿರಾಟ್‌ ಕೊಹ್ಲಿ ಮತ್ತು ರಜತ್‌ ಪಾಟೀದಾರ್‌ ಭರ್ಜರಿ ಅರ್ಧಶತಕ
  • ಕೊನೆಯಲ್ಲಿ ಸ್ಫೋಟಕ ಆಟವಾಡಿದ ಜಿತೇಶ್‌ ಶರ್ಮಾ
  • ಮುಂಬೈಗೆ 222 ರನ್‌ಗಳ ಟಾರ್ಗೆಟ್‌ ನೀಡಿದ ಆರ್‌ಸಿಬಿ
MI vs RCB: ಕೊಹ್ಲಿ, ಪಾಟೀದಾರ್‌ ಅರ್ಧಶತಕ; ಮುಂಬೈಗೆ 222 ರನ್‌ಗಳ ಟಾರ್ಗೆಟ್‌ ನೀಡಿದ ಆರ್‌ಸಿಬಿ

Mumbai Indians vs Royal Challengers Bengaluru: ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿವೆ. ಟಾಸ್‌ ಗೆದ್ದ ಮುಂಬೈ ನಾಯಕ ಹಾರ್ದಿಕ ಪಾಂಡ್ಯ ಫೀಲ್ಡಿಂಗ್‌ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 221 ರನ್‌ ಗಳಿಸಿತು. 

Add Zee News as a Preferred Source

ಆರ್‌ಸಿಬಿ ಪರ ಆರಂಭಿಕ ಆಟಗಾರ ವಿರಾಟ್‌ ಕೊಹ್ಲಿ ಆಕರ್ಷಕ ಅರ್ಧಶತಕ ಗಳಿಸಿದರು. 42 ಎಸೆತಗಳಲ್ಲಿ ಅವರು 8 ಬೌಂಡರಿ ಮತ್ತು 2 ಸಿಕ್ಸರ್‌ ಇದ್ದ 67 ರನ್‌ ಗಳಿಸಿದರು. ಸ್ಫೋಟಕ ಆಟವಾಡಿದ ನಾಯಕ ರಜತ್‌ ಪಾಟೀದಾರ್‌ 32 ಎಸೆತಗಳಲ್ಲಿ 5 ಬೌಂಡರಿ 4 ಸಿಕ್ಸರ್‌ ಇದ್ದ 64 ರನ್‌ ಗಳಿಸಿದರು. 

ಇದನ್ನೂ ಓದಿಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಯಿಂದ ಬೌಲಿಂಗ್‌ ಕಲಿತ DC ಟೀಂ ಆಟಗಾರ ವಿಪ್ರಾಜ್..! ಯಾರದು..?

ಕೊನೆಯಲ್ಲಿ ಮಿಂಚಿದ ಜಿತೇಶ್‌ ಶರ್ಮಾ ಸ್ಫೋಟಕ ಆಟವಾಡುವ ಮೂಲಕ ತಂಡದ ಮೊತ್ತವನ್ನು 200 ರನ್‌ಗಳ ಗಡಿ ದಾಟಿಸಲು ನೆರವಾದರು. 19 ಎಸೆತಗಳಲ್ಲಿ 2 ಬೌಂಡರಿ 4 ಸಿಕ್ಸರ್‌ ಇದ್ದ ಅಜೇಯ 40 ರನ್‌ ಗಳಿಸಿದರು. ಇದಲ್ಲದೆ ದೇವದತ್‌ ಪಡಿಕ್ಕಲ್‌ 22 ಎಸೆತಗಳಲ್ಲಿ 2 ಬೌಂಡರಿ ಮತ್ತು 3 ಸಿಕ್ಸರ್‌ ಇದ್ದ 37 ರನ್‌ ಗಳಿಸಿ ತಂಡಕ್ಕೆ ನೆರವಾದರು. ಮುಂಬೈ ಪರ ಟ್ರೆಂಟ್ ಬೌಲ್ಟ್ ಮತ್ತು ಹಾರ್ದಿಕ್‌ ಪಾಂಡ್ಯ ತಲಾ ಎರಡು ವಿಕೆಟ್‌ ಪಡೆದು ಮಿಂಚಿದರೆ, ವಿಘ್ನೇಶ್ ಪುತ್ತೂರು ಒಂದು ವಿಕೆಟ್‌ ಕಬಳಿಸಿದರು. 

ಎರಡೂ ತಂಡಗಳ ಸ್ಕ್ವಾಡ್‌ ಈ ರೀತಿ ಇದೆ:

ಮುಂಬೈ ಇಂಡಿಯನ್ಸ್: ವಿಲ್ ಜ್ಯಾಕ್ಸ್, ರಿಯಾನ್ ರಿಕಲ್ಟನ್ (ವಿಕೆಟ್‌ ಕೀಪರ್), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ನಮನ್ ಧೀರ್, ಮಿಚೆಲ್ ಸ್ಯಾಂಟ್ನರ್, ದೀಪಕ್ ಚಹಾರ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ, ವಿಘ್ನೇಶ್ ಪುತ್ತೂರು 

ರಾಯಯಲ್‌ ಚಾಲೆಂಜರ್ಸ್‌ ಬೆಂಗಳೂರು: ಫಿಲಿಪ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್‌ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್, ಯಶ್ ದಯಾಲ್

ಇದನ್ನೂ ಓದಿ: ಐಪಿಎಲ್‌ ಮಧ್ಯವೇ ಕ್ರಿಕೆಟ್ ಅಭಿಮಾನಿಗಳಿಗೆ ಬಿಗ್‌ಶಾಕ್..‌ ದಿಢೀರ್‌ ನಿವೃತ್ತಿ ಘೋಷಿಸಿದ ಸ್ಟಾರ್‌ ಆಟಗಾರ!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

...Read More

Trending News