MI vs RCB: ಕೃನಾಲ್‌ ಮಾರಕ ಬೌಲಿಂಗ್; ಮುಂಬೈ ಇಂಡಿಯನ್ಸ್‌ ಮಣಿಸಿ ಹೊಸ ಇತಿಹಾಸ ಸೃಷ್ಟಿಸಿದ ಆರ್‌ಸಿಬಿ

MI vs RCB, IPL 2025: ಆರ್‌ಸಿಬಿ ಪರ ಆರಂಭಿಕ ಆಟಗಾರ ವಿರಾಟ್‌ ಕೊಹ್ಲಿ ಆಕರ್ಷಕ ಅರ್ಧಶತಕ ಗಳಿಸಿದರು. 42 ಎಸೆತಗಳಲ್ಲಿ ಅವರು 8 ಬೌಂಡರಿ ಮತ್ತು 2 ಸಿಕ್ಸರ್‌ ಇದ್ದ 67 ರನ್‌ ಗಳಿಸಿದರು.

Written by - Puttaraj K Alur | Last Updated : Apr 7, 2025, 11:52 PM IST
  • ವಿರಾಟ್‌ ಕೊಹ್ಲಿ ಮತ್ತು ರಜತ್‌ ಪಾಟೀದಾರ್‌ ಭರ್ಜರಿ ಅರ್ಧಶತಕ
  • ಮುಂಬೈ ಇಂಡಿಯನ್ಸ್‌ ವಿರುದ್ಧ ಭರ್ಜರಿ ಗೆಲುಉ ಸಾಧಿಸಿದ ಆರ್‌ಸಿಬಿ
  • ಕೃನಾಲ್‌ ಮಾರಕ ಬೌಲಿಂಗ್‌ದಾಳಿಗೆ ನಲುಗಿದ ಪಾಂಡ್ಯ ಪಡೆ
MI vs RCB: ಕೃನಾಲ್‌ ಮಾರಕ ಬೌಲಿಂಗ್; ಮುಂಬೈ ಇಂಡಿಯನ್ಸ್‌ ಮಣಿಸಿ ಹೊಸ ಇತಿಹಾಸ ಸೃಷ್ಟಿಸಿದ ಆರ್‌ಸಿಬಿ

Mumbai Indians vs Royal Challengers Bengaluru: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ ಟೂರ್ನಿಯ 20ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 12 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ.

Add Zee News as a Preferred Source

ಟಾಸ್‌ ಗೆದ್ದ ಮುಂಬೈ ನಾಯಕ ಹಾರ್ದಿಕ ಪಾಂಡ್ಯ ಫೀಲ್ಡಿಂಗ್‌ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 221 ರನ್‌ ಗಳಿಸಿತು. ಬೃಹತ್‌ ಮೊತ್ತದ ಟಾರ್ಗೆಟ್‌ ಬೆನ್ನತ್ತಿದ ಮುಂಬೈ 20 ಓವರ್‌ಗಳಲ್ಲಿ 9 ವಿಕೆಟ್‌ ಕಳೆದುಕೊಂಡು 209 ರನ್‌ ಗಳಿಸಲಷ್ಟೇ ಶಕ್ತಿವಾಗಿ ಸೋಲು ಕಂಡಿತು. 

ಇದನ್ನೂ ಓದಿ: ಐಪಿಎಲ್‌ ಮಧ್ಯೆಯೇ ಫುಲ್‌ ಎಂಜಾಯ್‌... ವಿದೇಶಿ ಗರ್ಲ್​ಫ್ರೆಂಡ್ ಜೊತೆ ಬೆಡ್​​ ರೂಮ್​​ನಲ್ಲಿ ಯಶಸ್ವಿ ಜೈಸ್ವಾಲ್! ಫೋಟೋ ವೈರಲ್

ಟ್ರೆಂಟ್‌ ಬೌಲ್ಟ್‌ ಎಸೆದ ಮೊದಲ ಒವರ್‌ನ 2ನೇ ಎಸೆತದಲ್ಲಿ ಫಿಲ್ ಸಾಲ್ಟ್ ಬೌಲ್ಡ್‌ ಆಗಿದ್ದರಿಂದ ಆರ್‌ಸಿಬಿಗೆ ಆರಂಭಿಕ ಆಘಾತ ಉಂಟಾಗಿತ್ತು. ಆದರೆ ವಿರಾಟ್‌ ಕೊಹ್ಲಿ ಆಕರ್ಷಕ ಅರ್ಧಶತಕ ಗಳಿಸುವ ಮೂಲಕ ತಂಡಕ್ಕೆ ನೆರವಾದರು. 42 ಎಸೆತಗಳಲ್ಲಿ ಅವರು 8 ಬೌಂಡರಿ ಮತ್ತು 2 ಸಿಕ್ಸರ್‌ ಇದ್ದ 67 ರನ್‌ ಗಳಿಸಿದರು. ಸ್ಫೋಟಕ ಆಟವಾಡಿದ ನಾಯಕ ರಜತ್‌ ಪಾಟೀದಾರ್‌ 32 ಎಸೆತಗಳಲ್ಲಿ 5 ಬೌಂಡರಿ 4 ಸಿಕ್ಸರ್‌ ಇದ್ದ 64 ರನ್‌ ಗಳಿಸಿದರು. 

ಕೊನೆಯಲ್ಲಿ ಮಿಂಚಿದ ಜಿತೇಶ್‌ ಶರ್ಮಾ ಸ್ಫೋಟಕ ಆಟವಾಡುವ ಮೂಲಕ ತಂಡದ ಮೊತ್ತವನ್ನು 200 ರನ್‌ಗಳ ಗಡಿ ದಾಟಿಸಲು ನೆರವಾದರು. 19 ಎಸೆತಗಳಲ್ಲಿ 2 ಬೌಂಡರಿ 4 ಸಿಕ್ಸರ್‌ ಇದ್ದ ಅಜೇಯ 40 ರನ್‌ ಗಳಿಸಿದರು. ಇದಲ್ಲದೆ ದೇವದತ್‌ ಪಡಿಕ್ಕಲ್‌ 22 ಎಸೆತಗಳಲ್ಲಿ 2 ಬೌಂಡರಿ ಮತ್ತು 3 ಸಿಕ್ಸರ್‌ ಇದ್ದ 37 ರನ್‌ ಗಳಿಸಿ ತಂಡಕ್ಕೆ ನೆರವಾದರು. ಮುಂಬೈ ಪರ ಟ್ರೆಂಟ್ ಬೌಲ್ಟ್ ಮತ್ತು ಹಾರ್ದಿಕ್‌ ಪಾಂಡ್ಯ ತಲಾ ಎರಡು ವಿಕೆಟ್‌ ಪಡೆದು ಮಿಂಚಿದರೆ, ವಿಘ್ನೇಶ್ ಪುತ್ತೂರು ಒಂದು ವಿಕೆಟ್‌ ಕಬಳಿಸಿದರು. 

ಇದನ್ನೂ ಓದಿ: Explainer: RCB ತಂಡವು 18 ವರ್ಷದಲ್ಲಿ ಐಪಿಎಲ್ ಕಪ್ ಗೆಲ್ಲದೇ ಇರುವುದಕ್ಕೆ 3 ಕಾರಣಗಳು..!

ಕೃನಾಲ್‌ ಮಾರಕ ಬೌಲಿಂಗ್‌!!

ಮುಂಬೈ ಪರ ತಿಲಕ್‌ ವರ್ಮಾ (56) ಆಕರ್ಷಕ ಅರ್ಧಶತಕ ಸಿಡಿಸಿದರು. ನಾಯಕ ಹಾರ್ದಿಕ್‌ ಪಾಂಡ್ಯ (42) ರನ್‌ ಗಳಿಸಿದರು. ಇನ್ನುಳಿದಂತೆ ಸೂರ್ಯಕುಮಾರ್‌ ಯಾದವ್‌ (28), ವಿಲ್‌ ಜಾಕ್ಸ್‌ (22), ರೋಹಿತ್‌ ಶರ್ಮಾ (17), ರಯಾನ್ ರಿಕೆಲ್ಟನ್ (17) ಮತ್ತು ನಮನ್ ಧೀರ್ (11) ರನ್‌ ಗಳಿಸಿದರು. ಆರ್‌ಸಿಬಿ ಪರ ಬೌಲಿಂಗ್‌ನಲ್ಲಿ ಮಿಂಚಿದ ಕೃನಾಲ್‌ ಪಾಂಡ್ಯ (45ಕ್ಕೆ 4) ಕೊನೆಯ ಓವರ್‌ನಲ್ಲಿ ಮೂರು ವಿಕೆಟ್‌ಗಳನ್ನು ಪಡೆಯುವ ಮೂಲಕ ತಂಡಕ್ಕೆ ಅಮೋಘ ಗೆಲುವು ತಂದುಕೊಟ್ಟರು. ಯಶ್‌ ದಯಾಳ್‌ ಮತ್ತು ಜೋಶ್ ಹ್ಯಾಜಲ್‌ವುಡ್ ತಲಾ 2 ವಿಕೆಟ್‌ ಪಡೆದರೆ, ಭುವನೇಶ್ವರ್‌ ಕುಮಾರ್‌ 1 ವಿಕೆಟ್‌ ಕಬಳಿಸಿದರು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

...Read More

Trending News