MI vs SRH, IPL 2022: ಮುಂಬೈಗೆ ನಿರಾಸೆ, ಹೈದರಾಬಾದ್ಗೆ ರೋಚಕ ಗೆಲುವು
ಐಪಿಎಲ್ ಟೂರ್ನಿಯ 65ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸನ್‍ರೈಸರ್ಸ್ ಹೈದರಾಬಾದ್ ರೋಚಕ ಗೆಲುವು ಸಾಧಿಸಿತು.
ಮುಂಬೈ: ಇಲ್ಲಿನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಟೂರ್ನಿಯ 65ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸನ್‍ರೈಸರ್ಸ್ ಹೈದರಾಬಾದ್ ರೋಚಕ ಗೆಲುವು ಸಾಧಿಸಿತು. ಗೆಲುವಿಗಾಗಿ ಕೊನೆ ಓವರ್ ವರೆಗೂ ಹೋರಾಟ ನಡೆಸಿದ ಮುಂಬೈ ಕೇವಲ 3 ರನ್ ಗಳಿಂದ ಸೋಲು ಕಾಣುವ ಮೂಲಕ ನಿರಾಸೆ ಅನುಭವಿಸಿತು.
ಟಾಸ್ ಗೆದ್ದ ಮುಂಬೈ ಫೀಲ್ಡಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 193 ರನ್ ಗಳ ಬೃಹತ್ ಮೊತ್ತ ಗಳಿಸಿತು. ಗೆಲುವಿನ ಗುರಿ ಬೆನ್ನತ್ತಿದ ಮುಂಬೈ ಕೊನೆ ಓವರ್ ವರೆಗೂ ಹೋರಾಟ ನಡೆಸಿದರು ಪ್ರಯೋಜನವಾಗಲಿಲ್ಲ. 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡ ರೋಹಿತ್ ಶರ್ಮಾ ಪಡೆ 190 ರನ್ ಗಳಿಸಲಷ್ಟೇ ಶಕ್ತವಾಯಿತು.
ಇದನ್ನೂ ಓದಿ: IPL 2022 : ರೋಹಿತ್-ವಿರಾಟ್ ಕಳಪೆ ಫಾರ್ಮ್ ಬಗ್ಗೆ ಗಂಗೂಲಿ ಹೇಳಿದ್ದು ಹೀಗೆ!
ಬೃಹತ್ ಮೊತ್ತ ಪೇರಿಸಿದ ಹೈದರಾಬಾದ್
IPL 2022 : ರಾಜಸ್ಥಾನ ಟಾಪ್ 2 ಸ್ಥಾನಕ್ಕೆ ಬರಲು ಈ ಆಟಗಾರರು ಕಾರಣ : ಕ್ಯಾಪ್ಟನ್ ಸ್ಯಾಮ್ಸನ್
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.