ಪ್ರಸ್ತುತ ನಡೆಯುತ್ತಿರುವ 15ನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಇಂದು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು ಎದುರಿಸಲಿದೆ. ಮಹಾರಾಷ್ಟ್ರ ಕ್ರಿಕೆಟ್‌ ಅಸೋಸಿಯೇಶನ್‌ ಕ್ರೀಡಾಂಗಣದಲ್ಲಿ ನಡೆಯಲಿರುವ ಟೂರ್ನಿಯ 49ನೇ ಪಂದ್ಯ ಇದಾಗಿದ್ದು, ಇತ್ತಂಡಗಳಿಗೆ ಗೆಲುವು ಅವಶ್ಯಕವಾಗಿದೆ. ಪ್ಲೇ ಆಫ್‌ ಪ್ರವೇಶಿಸುವ ಆಸೆ ಜೀವಂತವಾಗಿ ಇರಿಸಿಕೊಂಡ ಎರಡೂ ತಂಡಗಳು ಗೆಲುವಿಗಾಗಿ ಹೋರಾಟ ನಡೆಸಲಿವೆ.


COMMERCIAL BREAK
SCROLL TO CONTINUE READING

ಇದನ್ನು ಓದಿ: ಟ್ವಿಟರ್ ಬಳಕೆದಾರರಿಗೆ ದೊಡ್ಡ ಹೊಡೆತ ನೀಡಿದ ಎಲೋನ್ ಮಸ್ಕ್!


ಈ ಹಿಂದೆ ನಡೆದ ಇದೇ ಆವೃತ್ತಿಯ ಪ್ರಥಮ ಪಂದ್ಯದಲ್ಲಿ ಚೆನ್ನೈ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ಸೋಲನ್ನು ಅನುಭವಿಸಿತ್ತು. ಈ ಬಾರಿಯ ಪಂದ್ಯದಲ್ಲಿ ಸೋಲಿನ ಸೇಡನ್ನು ಆರ್‌ಸಿಬಿ ತೀರಿಸಿಕೊಳ್ಳುತ್ತಾ ಎಂದು ಕಾದು ನೋಡಬೇಕಿದೆ. ಆ ಪಂದ್ಯದಲ್ಲಿ ಶಿವಂ ದುಬೆ ಮತ್ತು ರಾಬಿನ್‌ ಉತ್ತಪ್ಪ ಅದ್ಭುತ ಪ್ರದರ್ಶನ ನೀಡಿ ಚೆನ್ನೈ ಗೆಲುವಿಗೆ ಕಾರಣರಾಗಿದ್ದರು. ಇನ್ನು ಈ ಬಾರಿ ಉಭಯ ತಂಡಗಳು ಭರ್ಜರಿ ಅಭ್ಯಾಸ ನಡೆಸುತ್ತಿದ್ದು, ಹೈವೋಲ್ಟೇಜ್‌ ಪಂದ್ಯವಾಗಿ ಮಾರ್ಪಾಡಾಗಿದೆ. 


ಎಂ.ಎಸ್‌ ಧೋನಿ ನಾಯಕತ್ವದಲ್ಲಿ ಸದ್ಯ ಮುಂದುವರೆಯುತ್ತಿರುವ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವು ಟೂರ್ನಿಯಲ್ಲಿ ಒಂಬತ್ತು ಪಂದ್ಯಗಳನ್ನಾಡಿದ್ದು ಆರರಲ್ಲಿ ಸೋಲು ಕಂಡು, ಮೂರರಲ್ಲಿ ಗೆಲುವು ಸಾಧಿಸಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಒಂಬತ್ತನೇ ಸ್ಥಾನ ಪಡೆದಿದೆ.


ಇನ್ನು ಫಾಫ್‌ ಡು ಪ್ಲೆಸಿಸ್‌ ಮುಂದಾಳತ್ವದಲ್ಲಿ ನಡೆಯುತ್ತಿರುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ಟೂರ್ನಿಯ ಪ್ರಾರಂಭದಲ್ಲಿ ಉತ್ತಮ ಪ್ರದರ್ಶವನ್ನು ನೀಡುತ್ತಿತ್ತು. ಆದರೆ ಕಳೆದ ಕೆಲ ಪಂದ್ಯಗಳಲ್ಲಿ ಹೀನಾಯ ಸೋಲುಗಳನ್ನು ಕಂಡಿದೆ. ಸದ್ಯ ಆಡಿರುವ ಹತ್ತು ಪಂದ್ಯಗಳ ಪೈಕಿ ಐದರಲ್ಲಿ ಗೆಲುವು ಮತ್ತು ಐದರಲ್ಲಿ ಸೋಲು ಕಂಡಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಆರನೇ ಸ್ಥಾನ ಪಡೆದುಕೊಂಡಿದೆ. 


ದಾಖಲೆ ಮೇಲೆ ಕಣ್ಣು: 
ಇನ್ನು ಉಭಯ ತಂಡಗಳ ಕೆಲ ಆಟಗಾರರು ಈ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡುವುದರ ಮೂಲಕ ವೈಯಕ್ತಿಕ ದಾಖಲೆಗಳನ್ನು ನಿರ್ಮಿಸುವ ಹಾಗೂ ಮೈಲಿಗಲ್ಲನ್ನು ನೆಡುವತ್ತ ಕಣ್ಣಿಟ್ಟಿದ್ದಾರೆ. ಟಿ-20 ಕ್ರಿಕೆಟ್‌ನಲ್ಲಿ ಇದುವರೆಗೆ ಒಟ್ಟು 199 ಕ್ಯಾಚ್‌ಗಳನ್ನು ಹಿಡಿದಿರುವ ದಿನೇಶ್ ಕಾರ್ತಿಕ್ 200 ಕ್ಯಾಚ್‌ಗಳನ್ನು ಹಿಡಿದು ದಾಖಲೆ ನಿರ್ಮಿಸಲು ಕಾಯುತ್ತಿದ್ದಾರೆ. ಇನ್ನೊಂದೆಡೆ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಆಟಗಾರ ರವೀಂದ್ರ ಜಡೇಜಾ ಐಪಿಎಲ್‌ನಲ್ಲಿ 2499ರನ್‌ಗಳನ್ನು ಬಾರಿಸಿದ್ದಾರೆ. ಈ ಪಂದ್ಯದಲ್ಲಿ ಬ್ಯಾಟಿಂಗ್‌ ಅವಕಾಶ ಲಭಿಸಿದ್ದಲ್ಲಿ 2,500 ರನ್‌ ಕಲೆ ಹಾಕಿದ ಮೈಲಿಗಲ್ಲನ್ನು ಅವರು ತಲುಪಲಿದ್ದಾರೆ. ಹೀಗೆ ಕೆಲ ಆಟಗಾರರು ತಮ್ಮ ದಾಖಲೆ ತಲುಪುವ ಕನಸನ್ನೂ ಇಟ್ಟುಕೊಂಡಿದ್ದಾರೆ ಎನ್ನಬಹುದು. 


​ಇದನ್ನು ಓದಿ: Gold-Silver: ಗ್ರಾಹಕರೇ ಗಮನಿಸಿ... ಬಂಗಾರ-ಬೆಳ್ಳಿ ಖರೀದಿದಾರರಿಗೆ ಇಲ್ಲಿದೆ ಶುಭ ಸುದ್ದಿ


ಎರಡೂ ತಂಡಗಳು ಪ್ಲೇ ಆಫ್‌ಗೆ ಪ್ರವೇಶ ಪಡೆಯಬೇಕಾದರೆ ಇನ್ನು ಮುಂದೆ ನಡೆಯುವ ಎಲ್ಲಾ ಪಂದ್ಯಗಳಲ್ಲಿ ಗೆಲುವು ಸಾಧಿಸಬೇಕಿದೆ. ಇನ್ನು ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವು ಸದ್ಯ ಕ್ಯಾಪ್ಟನ್‌ ಕೂಲ್‌ ಧೋನಿ ನಾಯಕತ್ವದಲ್ಲಿ ಸಾಗುತ್ತಿದೆ. ಸದ್ಯ ಆರ್‌ಸಿಬಿ ಮತ್ತು ಚೆನ್ನೈ ಪ್ಲೇ ಆಫ್‌ ಕನಸಿಗೆ ಈ ಪಂದ್ಯ ಉತ್ತರವಾಗಲಿದೆ. 


ಸಂಭಾವ್ಯ ಆಟಗಾರರ ಪಟ್ಟಿ:
ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್(ಕ್ಯಾ), ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್ (ವಿ.ಕೀ), ಶಹಬಾಜ್ ಅಹ್ಮದ್, ಮಹಿಪಾಲ್ ಲೊಮ್ರೋರ್, ವನಿಂದು ಹಸರಂಗಾ, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್ ಮತ್ತು ಜೋಶ್ ಹ್ಯಾಜಲ್‌ವುಡ್


ಚೆನ್ನೈ ಸೂಪರ್‌ ಕಿಂಗ್ಸ್‌: ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ರಾಬಿನ್ ಉತ್ತಪ್ಪ, ಅಂಬಟಿ ರಾಯುಡು, ಎಂಎಸ್ ಧೋನಿ (ಕ್ಯಾ& ವಿ.ಕೀ), ರವೀಂದ್ರ ಜಡೇಜಾ, ಡ್ವೇನ್ ಬ್ರಾವೋ / ಮಿಚೆಲ್ ಸ್ಯಾಂಟ್ನರ್, ಡ್ವೈನ್ ಪ್ರಿಟೋರಿಯಸ್, ಮಹೇಶ್ ತೀಕ್ಷಣ, ಸಿಮರ್ಜೀತ್ ಸಿಂಗ್, ಮುಖೇಶ್ ಚೌಧರಿ


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.