ಕಾನ್ಪುರ : ಕಾನ್ಪುರದ ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಮೊದಲ ಟೆಸ್ಟ್ (India Vs New Zealand) ಪಂದ್ಯ ನಡೆಯುತ್ತಿದೆ. ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಅಜಿಂಕ್ಯ ರಹಾನೆ (Ajinkya Rahane) ತಂಡದ ಸಾರಥ್ಯ ವಹಿಸಿದ್ದಾರೆ. ಇದೀಗ ಈ ಪಂದ್ಯದಲ್ಲಿ ಅಜಿಂಕ್ಯ ರಹಾನೆ ನಿರ್ಧಾರದ ಬಗ್ಗೆ ಪ್ರಶ್ನೆಗಳು ಎದ್ದಿವೆ. ಅತ್ಯುತ್ತಮ ಫಾರ್ಮ್‌ನಲ್ಲಿರುವ ವೇಗದ ಬೌಲರ್ ಮೊಹಮ್ಮದ್ ಸಿರಾಜ್ (Mohammad Siraj) ಅವರನ್ನು XI ನಿಂದ ಕೈಬಿಟ್ಟಿರುವುದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.
ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಆಕ್ರೋಶ :
ಇಂಗ್ಲೆಂಡ್ ಪ್ರವಾಸದಲ್ಲಿ ಅದ್ಭುತ ಪ್ರದರ್ಶನ ನೀಡಿದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ (Mohammad Siraj) ಅವರನ್ನು ಪಂದ್ಯದಿಂದ ಕೈ ಬಿಡಲಾಗಿದೆ. ಸಿರಾಜ್ ಬದಲು ಫಾರ್ಮ್‌ನಲ್ಲಿಲ್ಲದ ಇಶಾಂತ್ ಶರ್ಮಾ ಅವರನ್ನು ಪ್ಲೇಯಿಂಗ್ XI ನಲ್ಲಿ ಸೇರಿಸಲಾಗಿದೆ. ಇಶಾಂತ್ ಶರ್ಮಾ (Ishant Sharma) ಕೆಲವು ಸಮಯದಿಂದ ಅತ್ಯಂತ ಕಳಪೆ ಪ್ರದರ್ಶನ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮೊಹಮ್ಮದ್ ಸಿರಾಜ್ ಅವರನ್ನು ಪ್ಲೇಯಿಂಗ್ XI ನಿಂದ ಹೊರಗಿಟ್ಟಿರುವುದು ಅಭಿಮಾನಿಗಳನ್ನು ಕೆರಳಿಸಿದೆ. ಅಭಿಮಾನಿಗಳನ್ನು ಸಾಮಾಜಿಕ ಜಾಲತಾಣಗಳ (Social Media) ಮೂಲಕ ತಮ್ಮ ಆಕ್ರೋಶ ಹೊರಹಾಕುತ್ತಿದ್ದಾರೆ.
ಇದನ್ನೂ ಓದಿ : IPL 2022: ಐಪಿಎಲ್ 2022ಕ್ಕಾಗಿ ಈ 4 ಆಟಗಾರರನ್ನು ಉಳಿಸಿಕೊಳ್ಳಲಿದೆ ಸಿಎಸ್‌ಕೆ, ಧೋನಿ ಬಗ್ಗೆ ಬಿಗ್ ನ್ಯೂಸ್
Why siraj not there
— Raghuraminturi (@raghuraminturi) November 25, 2021
Siraj should have been instead of ishant sharma Ishant time is over he was not in rytham in recent test matches he has played
— utsav (@Utsav138098214) November 25, 2021
ಉತ್ತಮ ಪ್ರದರ್ಶನದ ನಂತರವೂ ಸಿರಾಜ್ ಡ್ರಾಪ್ :
ಭಾರತದ ಪರ ಮೊಹಮ್ಮದ್ ಸಿರಾಜ್ ಇದುವರೆಗೆ 9 ಟೆಸ್ಟ್ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿ 30 ವಿಕೆಟ್ ಪಡೆದಿದ್ದಾರೆ. ಟೀಂ ಇಂಡಿಯಾದಿಂದ (Team India) ಮೊಹಮ್ಮದ್ ಸಿರಾಜ್ ಅವರನ್ನು ಹಠಾತ್ ಡ್ರಾಪ್ ಮಾಡಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕುತ್ತಿದೆ. ಈ ದೃಷ್ಟಿಯಿಂದ ಕ್ರಿಕೆಟ್ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ.
ಟೀಂ ಇಂಡಿಯಾದಲ್ಲಿ ಯುವ ಆಟಗಾರರಿಗೆ ಅವಕಾಶ:
ಟಾಸ್ ಗೆದ್ದ ಅಜಿಂಕ್ಯ ರಹಾನೆ (Ajinkya Rahane) ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂದಿದ್ದಾರೆ. ವಿರಾಟ್ ಕೊಹ್ಲಿ (Virat Kohli), ರೋಹಿತ್ ಶರ್ಮಾ, ರಿಷಬ್ ಪಂತ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ ಮತ್ತು ಗಾಯಗೊಂಡಿರುವ ಕೆಎಲ್ ರಾಹುಲ್ ಇಲ್ಲದೆ ಭಾರತ ತಂಡವು ಮೈದಾನ ಪ್ರವೇಶಿಸಿದೆ.
ಇದನ್ನೂ ಓದಿ : WATCH: ಮೊದಲ ಟೆಸ್ಟ್ ಗೂ ಮೊದಲು ಬೌಲರ್ ಆದ ರಾಹುಲ್ ದ್ರಾವಿಡ್ ..!
ಮೊದಲ ಟೆಸ್ಟ್‌ಗಾಗಿ ಭಾರತದ ಪ್ಲೇಯಿಂಗ್ XI
ಶುಭಮನ್ ಗಿಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ (C), ಶ್ರೇಯಸ್ ಅಯ್ಯರ್, ವೃದ್ಧಿಮಾನ್ ಸಹಾ (WK), ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್, ಇಶಾಂತ್ ಶರ್ಮಾ, ಉಮೇಶ್ ಯಾದವ್.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.