ಲಂಕಾ ವಿರುದ್ಧ ಮೊಹಮ್ಮದ್ ಸಿರಾಜ್ ಅದ್ಭುತ ಬೌಲಿಂಗ್: ಮೊದಲ ಎಸೆತದಲ್ಲೇ ವಿಕೆಟ್ ಪಡೆದು ವಿಶೇಷ ದಾಖಲೆಯ ಕ್ಲಬ್ ಸೇರ್ಪಡೆ
ಸಿರಾಜ್ ಶ್ರೀಲಂಕಾದ ಆರಂಭಿಕ ಆಟಗಾರ ಪಾತುಮ್ ನಿಸ್ಸಾಂಕಾ ವಿಕೆಟ್ ಪಡೆಯುವ ಮೂಲಕ ಲಂಕಾ ತಂಡಕ್ಕೆ ಆರಂಭಿಕ ಆಘಾತ ನೀಡಿದ್ದರು. ಇನ್ನು ಮೊದಲ ಎಸೆತದಲ್ಲೇ ವಿಕೆಟ್ ಪಡೆಯುವ ಮೂಲಕ ವಿಶೇಷ ದಾಖಲೆಯನ್ನು ಸಿರಾಜ್ ಬರೆದಿದ್ದಾರೆ.
India vs Sri Lanka Mohammed Siraj: ಶ್ರೀಲಂಕಾ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಭಾರತದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಕಿಲ್ಲರ್ ಬೌಲಿಂಗ್ ಮಾಡಿದ್ದಾರೆ. ಕೊಲಂಬೊದ ಆರ್ ಪ್ರೇಮದಾಸ ಸ್ಟೇಡಿಯಂನಲ್ಲಿಈ ಪಂದ್ಯ ನಡೆಯುತ್ತಿದ್ದು, ಕಳೆದ ಶುಕ್ರವಾರ ಇದೇ ಮೈದಾನದಲ್ಲಿ ಮೊದಲ ಏಕದಿನ ಪಂದ್ಯ ಟೈ ಆಗಿತ್ತು.
ಇದನ್ನೂ ಓದಿ: ಮುರಿದುಬಿತ್ತು ಎರಡನೇ ಎಂಗೇಜ್ಮೆಂಟ್... ಈಗ ಮೂರನೇ ಮ್ಯಾರೇಜ್ʼಗೆ ರೆಡಿ ಎಂದ ಖ್ಯಾತ ಖಳನಟ!
ಸಿರಾಜ್ ಶ್ರೀಲಂಕಾದ ಆರಂಭಿಕ ಆಟಗಾರ ಪಾತುಮ್ ನಿಸ್ಸಾಂಕಾ ವಿಕೆಟ್ ಪಡೆಯುವ ಮೂಲಕ ಲಂಕಾ ತಂಡಕ್ಕೆ ಆರಂಭಿಕ ಆಘಾತ ನೀಡಿದ್ದರು. ಇನ್ನು ಮೊದಲ ಎಸೆತದಲ್ಲೇ ವಿಕೆಟ್ ಪಡೆಯುವ ಮೂಲಕ ವಿಶೇಷ ದಾಖಲೆಯನ್ನು ಸಿರಾಜ್ ಬರೆದಿದ್ದಾರೆ.
ಶ್ರೀಲಂಕಾ ವಿರುದ್ಧದ ಏಕದಿನ ಪಂದ್ಯದ ಮೊದಲ ಎಸೆತದಲ್ಲಿ ವಿಕೆಟ್ ಪಡೆದ ಮೂರನೇ ಭಾರತೀಯ ಬೌಲರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಜಹೀರ್ ಖಾನ್ ಮತ್ತು ಪ್ರವೀಣ್ ಕುಮಾರ್ ಈ ಸಾಧನೆ ಮಾಡಿದ್ದರು. 2002ರಲ್ಲಿ ಕೊಲಂಬೊದ ಆರ್ ಪ್ರೇಮದಾಸ ಸ್ಟೇಡಿಯಂನಲ್ಲಿ ಜಹೀರ್ ಮೊದಲ ಎಸೆತದಲ್ಲಿ ಸನತ್ ಜಯಸೂರ್ಯ ಅವರನ್ನು ಔಟ್ ಮಾಡಿದ್ದರು. 2009 ರಲ್ಲಿ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಉಪುಲ್ ತರಂಗ ಅವರನ್ನು ಔಟ್ ಮಾಡಿದ್ದರು. ಇನ್ನು . ಪ್ರವೀಣ್ ಕುಮಾರ್ 2010ರಲ್ಲಿ ಈ ಸಾಧನೆ ಮಾಡಿದ್ದು, ಲಂಕಾ ಬ್ಯಾಟರ್ ತರಂಗ ಅವರನ್ನು ಔಟ್ ಮಾಡಿದ್ದರು.
ಇದನ್ನೂ ಓದಿ: ಬಾಲ ಕಲಾವಿದೆಯಾಗಿ ಮಿಂಚಿದ್ದ ಬೇಬಿ ಶಾಮಿಲಿ ಈಗ ಬಳುಕೋ ಬಳ್ಳಿ...! ಈ ದಂತದ ಗೊಂಬೆಗೆ ಈಗ ವಯಸ್ಸೆಷ್ಟು
ಈ ಪಂದ್ಯದಲ್ಲಿ ಶ್ರೀಲಂಕಾ ನಾಯಕ ಚರಿತ್ ಅಸಲಂಕಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ಲಂಕಾ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದ್ದು. ಕಮಿಂದು ಮೆಂಡಿಸ್ ಮತ್ತು ಜೆಫ್ರಿ ವಾಂಡರ್ಸೆ ಆಡುವ ಅವಕಾಶ ಪಡೆದಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.