Shubman Gill and Virat Kohli: ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿದ್ದು, 3 ಟಿ20, 3 ಏಕದಿನ ಮತ್ತು 2 ಟೆಸ್ಟ್ ಪಂದ್ಯಗಳ ಸರಣಿಯನ್ನು ಆಡಬೇಕಿದೆ. ಎಲ್ಲಾ ಮೂರು ಸ್ವರೂಪಗಳಲ್ಲಿ ವಿಭಿನ್ನ ನಾಯಕರಿದ್ದಾರೆ. ಟೀಂ ಇಂಡಿಯಾದ ಯುವ ಆರಂಭಿಕ ಬ್ಯಾಟ್ಸ್‌ಮನ್ ಶುಭ್ಮನ್ ಗಿಲ್ ದಕ್ಷಿಣ ಆಫ್ರಿಕಾ ಪ್ರವಾಸಕ್ಕಾಗಿ ಟಿ20 ಮತ್ತು ಟೆಸ್ಟ್ ತಂಡದ ಭಾಗವಾಗಿದ್ದಾರೆ.


COMMERCIAL BREAK
SCROLL TO CONTINUE READING

ಡಿಸೆಂಬರ್ 10 ರಂದು ನಡೆಯಲಿರುವ ಮೊದಲ ಟಿ20 ಪಂದ್ಯದೊಂದಿಗೆ ತಮ್ಮ ಪ್ರವಾಸವನ್ನು ಪ್ರಾರಂಭಿಸಲಿದ್ದಾರೆ. ಇನ್ನೊಂದೆಡೆ ವಿರಾಟ್ ಕೊಹ್ಲಿ ನೇರವಾಗಿ ಟೆಸ್ಟ್ ಸರಣಿಯಲ್ಲಿ ಆಡಲಿದ್ದಾರೆ. ಹೀಗಿರುವಾಗ ಕೊಹ್ಲಿಯ ಈ ವಿಶೇಷ ದಾಖಲೆಯನ್ನು ಮುರಿಯುವ ಅವಕಾಶ ಶುಭ್‌ಮನ್‌’ಗೆ ಇದೆ.


ಇದನ್ನೂ ಓದಿ: ಡಿವೋರ್ಸ್ ಸುದ್ದಿ ಬೆನ್ನಲ್ಲೇ ಸೊಸೆಯನ್ನೇ ಅನ್’ಫಾಲೋ ಮಾಡಿದ ಅಮಿತಾಬ್!


2023 ರಲ್ಲಿ, ಪ್ರತಿ ಫಾರ್ಮ್ಯಾಟ್‌’ನಲ್ಲಿ ಅತಿ ಹೆಚ್ಚು ಶತಕಗಳನ್ನು ಗಳಿಸಿದ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಆಗಿದ್ದು, ಅವರು 8 ಶತಕ ಸಿಡಿಸಿದ್ದಾರೆ. ಈ ದಾಖಲೆಯನ್ನು ಮುರಿಯಲು ಶುಭಮನ್ ಗಿಲ್ ಅವರಿಗೆ ಉತ್ತಮ ಅವಕಾಶವಿದ್ದು, 2023ರಲ್ಲಿ ಶುಭಮನ್ 7 ಶತಕಗಳನ್ನು ಬಾರಿಸಿದ್ದಾರೆ. ಮುಂಬರುವ ಟಿ20 ಪಂದ್ಯಗಳಲ್ಲಿ 2 ಶತಕ ಸಿಡಿಸಿದರೆ ಅತಿ ಹೆಚ್ಚು ಶತಕ ಸಿಡಿಸಿದ ಬ್ಯಾಟ್ಸ್ ಮನ್ ಎನಿಸಿಕೊಳ್ಳಲಿದ್ದಾರೆ.


ಆದರೆ, ಕೊಹ್ಲಿ ಇನ್ನೂ 2023ರಲ್ಲಿ ಟೆಸ್ಟ್ ಪಂದ್ಯ ಆಡಿಲ್ಲ. ಈ ಪಂದ್ಯದಲ್ಲಿ ಅವರು ಶತಕ ಗಳಿಸಿದರೆ, ಈ ಅಂಕಿ ಅಂಶವು 8 ಕ್ಕಿಂತ ಹೆಚ್ಚಾಗಲಿದೆ. ಟೆಸ್ಟ್ ಸರಣಿಯಲ್ಲಿ ಶುಭ್ಮನ್ ಕೂಡ ತಂಡದ ಭಾಗವಾಗಿದ್ದಾರೆ.


2023ರಲ್ಲಿ ಅತಿ ಹೆಚ್ಚು ಶತಕಗಳನ್ನು ಗಳಿಸಿದ ಬ್ಯಾಟ್ಸ್‌’ಮನ್‌


  • ವಿರಾಟ್ ಕೊಹ್ಲಿ - 8

  • ಶುಭ್ಮನ್ ಗಿಲ್ - 7

  • ಡೇರಿಲ್ ಮಿಚೆಲ್ - 6

  • ಕ್ವಿಂಟನ್ ಡಿ ಕಾಕ್ - 5

  • ಡೆವೊನ್ ಕಾನ್ವೇ - 5

  • ನಜ್ಮುಲ್ ಹುಸೇನ್ ಶಾಂಟೋ - 5

  • ಟೆಂಬ ಬವುಮಾ - ೪

  • ಫಖರ್ ಜಮಾನ್ - 4

  • ಡೇವಿಡ್ ಮಲನ್ - 4

  • ಐಡೆನ್ ಮಾರ್ಕ್ರಾಮ್ - 4


ಕ್ಯಾಲೆಂಡರ್ ವರ್ಷದಲ್ಲಿ ಅತಿ ಹೆಚ್ಚು ಶತಕಗಳನ್ನು ಗಳಿಸಿದ ಬ್ಯಾಟ್ಸ್‌ಮನ್‌


ಒಂದು ಕ್ಯಾಲೆಂಡರ್ ವರ್ಷದಲ್ಲಿ 12 ಶತಕಗಳೊಂದಿಗೆ ಅತಿ ಹೆಚ್ಚು ಶತಕಗಳನ್ನು ಗಳಿಸಿದ ಬ್ಯಾಟ್ಸ್‌ಮನ್‌ಗಳ ಪೈಕಿ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದಾರೆ. 1998ರಲ್ಲಿ ಅವರು ಈ ಸಾಧನೆ ಮಾಡಿದ್ದರು. ಇದಾದ ಬಳಿಕ 2018ರಲ್ಲಿ ವಿರಾಟ್ ಕೊಹ್ಲಿ 11 ಶತಕ ಸಿಡಿಸಿದ್ದರು. ಈ ಪಟ್ಟಿಯಲ್ಲಿ ರಿಕಿ ಪಾಂಟಿಂಗ್ 11 ಶತಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ನಾಲ್ಕನೇ ಹೆಸರು ಮತ್ತೊಮ್ಮೆ ವಿರಾಟ್ ಕೊಹ್ಲಿ ಅವರ ಹೆಸರಿದೆ. ಅವರು 2003 ರಲ್ಲಿ ಕೂಡ 11 ಶತಕಗಳನ್ನು ಗಳಿಸಿದ್ದರು. ದಕ್ಷಿಣ ಆಫ್ರಿಕಾದ ಆರಂಭಿಕ ಬ್ಯಾಟ್ಸ್‌ಮನ್ ಹಸೀಮ್ ಆಮ್ಲಾ 10 ಶತಕಗಳೊಂದಿಗೆ ಈ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದಾರೆ.


ಇದನ್ನೂ ಓದಿ: ಅವಿ-ಪವಿ ಬೆನ್ನಲ್ಲೇ ಬಿಗ್ ಬಾಸ್ ಮನೆಗೆ ಮತ್ತೊಂದು ವೈಲ್ಡ್ ಕಾರ್ಡ್ ಎಂಟ್ರಿ! ಈತ ಭಾರತೀಯನೇ ಅಲ್ಲ…


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ