)
Most hundreds in a career: ಕ್ರಿಕೆಟ್ ದೇವರು, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತಿಹೆಚ್ಚು ಶತಕಗಳನ್ನ ಗಳಿಸಿದ ಬ್ಯಾಟ್ಸ್ಮನ್. ಅವರ ಹೆಸರಿನಲ್ಲಿ 100 ಶತಕಗಳಿವೆ ಎಂದು ನಿಮಗೆ ಈಗಾಗಲೇ ತಿಳಿದಿರುತ್ತದೆ. ಆದರೆ ಟಾಪ್ 5ರಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾದ ಇತರ ಬ್ಯಾಟ್ಸ್ಮನ್ಗಳು ಯಾರು? ಇದರ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ ನೋಡಿ...
ಸಚಿನ್ ತೆಂಡೂಲ್ಕರ್ ಏಕದಿನ, ಟೆಸ್ಟ್ ಮತ್ತು ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಒಟ್ಟಾರೆ ಅತಿಹೆಚ್ಚು ಶತಕಗಳನ್ನು ಗಳಿಸಿದ ಬ್ಯಾಟ್ಸ್ಮನ್. ತಮ್ಮ ವೃತ್ತಿಜೀವನದಲ್ಲಿ ತೆಂಡೂಲ್ಕರ್ 664 ಪಂದ್ಯಗಳನ್ನ ಆಡಿದ್ದು, 100 ಶತಕಗಳನ್ನ ಗಳಿಸಿದ್ದಾರೆ. ಸಚಿನ್ 1989ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದರು ಮತ್ತು 2013ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿದರು.
ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತಿಹೆಚ್ಚು ಶತಕ ಗಳಿಸಿದ ಬ್ಯಾಟ್ಸ್ಮನ್ಗಳ ಪೈಕಿ ರನ್ ಮಷಿನ್ ಖ್ಯಾತಿಯ ವಿರಾಟ್ ಕೊಹ್ಲಿ ಅವರು ಸಚಿನ್ ತೆಂಡೂಲ್ಕರ್ ನಂತರ ಎರಡನೇ ಸ್ಥಾನದಲ್ಲಿದ್ದಾರೆ. ಕೊಹ್ಲಿ 553 ಅಂತಾರಾಷ್ಟ್ರೀಯ ಪಂದ್ಯಗಳನ್ನ ಆಡಿದ್ದು, 82 ಶತಕಗಳನ್ನ ಗಳಿಸಿದ್ದಾರೆ. ಕೊಹ್ಲಿ 2008ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದರು. ಇದೀಗ ಅವರು ಏಕದಿನ ಪಂದ್ಯಗಳನ್ನ ಮಾತ್ರ ಆಡುತ್ತಾರೆ. ಅವರು ಟೆಸ್ಟ್ ಮತ್ತು ಟಿ-20 ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿದ್ದಾರೆ.
ನಂತರದ ಸ್ಥಾನದಲ್ಲಿ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಬರುತ್ತಾರೆ. ಅವರು 560 ಅಂತಾರಾಷ್ಟ್ರೀಯ ಪಂದ್ಯಗಳನ್ನ ಆಡಿದ್ದು, 71 ಶತಕಗಳನ್ನ ಗಳಿಸಿದ್ದಾರೆ. ಅವರು 1995ರಲ್ಲಿ ತಮ್ಮ ಅಂತಾರಾಷ್ಟ್ರೀಯ ವೃತ್ತಿಜೀವನವನ್ನ ಪ್ರಾರಂಭಿಸಿದರು ಮತ್ತು 2012ರಲ್ಲಿ ನಿವೃತ್ತಿ ಘೋಷಿಸಿದರು. ಅವರು ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.
ಈ ಪಟ್ಟಿಯಲ್ಲಿ ಶ್ರೀಲಂಕಾದ ಮಾಜಿ ಕ್ಯಾಪ್ಟನ್ ಕುಮಾರ್ ಸಂಗಕ್ಕಾರ ಅವರ ಹೆಸರು ನಾಲ್ಕನೇ ಸ್ಥಾನದಲ್ಲಿದೆ. ಸಂಗಕ್ಕಾರ ತಮ್ಮ ವೃತ್ತಿಜೀವನದಲ್ಲಿ 594 ಅಂತಾರಾಷ್ಟ್ರೀಯ ಪಂದ್ಯಗಳನ್ನ ಆಡಿದ್ದು, 63 ಶತಕಗಳನ್ನ ಗಳಿಸಿದ್ದಾರೆ. ಸಂಗಕ್ಕಾರ 2000ರಲ್ಲಿ ತಮ್ಮ ಕ್ರಿಕೆಟ್ ವೃತ್ತಿಜೀವನವನ್ನ ಪ್ರಾರಂಭಿಸಿದರು ಮತ್ತು 2015ರವರೆಗೆ ಆಡಿದರು.
ದಕ್ಷಿಣ ಆಫ್ರಿಕಾದ ಶ್ರೇಷ್ಠ ಆಟಗಾರರಲ್ಲಿ ಒಬ್ಬರಾದ ಜಾಕ್ವೆಸ್ ಕಾಲಿಸ್ ಈ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ದಾರೆ. ಕಾಲಿಸ್ 519 ಪಂದ್ಯಗಳನ್ನ ಆಡಿದ್ದು, 63 ಅಂತಾರಾಷ್ಟ್ರೀಯ ಶತಕಗಳನ್ನ ಗಳಿಸಿದ್ದಾರೆ. 1995ರಲ್ಲಿ ತಮ್ಮ ವೃತ್ತಿಜೀವನವನ್ನ ಪ್ರಾರಂಭಿಸಿದ ಕಾಲಿಸ್, 2014ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತರಾದರು.