Suryakumar Yadav Record: ಕೆಲ ಸಮಯದಿಂದ ಸೂರ್ಯಕುಮಾರ್ ಯಾದವ್ ಅತ್ಯುತ್ತಮ ಫಾರ್ಮ್ ನಲ್ಲಿ ಓಡುತ್ತಿದ್ದಾರೆ. ಟೀಂ ಇಂಡಿಯಾ ಪರ ಹಲವು ಪಂದ್ಯಗಳನ್ನು ಸ್ವಂತ ಬಲದಿಂದ ಗೆದ್ದಿದ್ದಾರೆ. 2022ರಲ್ಲಿ, ಅವರು T20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದಾರೆ. ಅವರು ಯಾವುದೇ ಬೌಲಿಂಗ್ ದಾಳಿಯನ್ನು ಹರಿದು ಹಾಕುವ ಸಾಮರ್ಥ್ಯ ಹೊಂದಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ, ಸೂರ್ಯಕುಮಾರ್ ಯಾದವ್ ದೊಡ್ಡ ದಾಖಲೆಯನ್ನು ಮಾಡಿದ್ದು, ಅನುಭವಿ ಮಹೇಂದ್ರ ಸಿಂಗ್ ಧೋನಿ ಮತ್ತು ಸುರೇಶ್ ರೈನಾ ಅವರನ್ನು ಹಿಂದಿಕ್ಕಿದ್ದಾರೆ.



ಮೊದಲ ಟಿ20 ಪಂದ್ಯದಲ್ಲಿ ದಾಖಲೆ:


ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡದ ಗೆಲುವಿಗೆ ನ್ಯೂಜಿಲೆಂಡ್ 177 ರನ್ ಟಾರ್ಗೆಟ್ ನೀಡಿತ್ತು. ಟೀಂ ಇಂಡಿಯಾದ ಆರಂಭ ತುಂಬಾ ಕೆಟ್ಟದಾಗಿತ್ತು. ಆರಂಭಿಕ ಇಶಾನ್ ಕಿಶನ್ ಮತ್ತು ಶುಭಮನ್ ಗಿಲ್ ಬೇಗನೆ ಔಟಾದರು. ಇದಾದ ಬಳಿಕ ನಾಯಕ ಹಾರ್ದಿಕ್ ಪಾಂಡ್ಯ ಅವರೊಂದಿಗೆ ಸೂರ್ಯಕುಮಾರ್ ಯಾದವ್ ಜೊತೆಯಾಟವಾಡಿದರು. ಸೂರ್ಯ 34 ಎಸೆತಗಳಲ್ಲಿ 47 ರನ್ ಗಳಿಸಿ, ಅರ್ಧಶತಕ ವಂಚಿತರಾಗಿ ಟೀಂ ಇಂಡಿಯಾ ಗೆಲ್ಲಲು ಸಾಧ್ಯವಾಗಲಿಲ್ಲ.


ಬಿರುಸಿನ ಇನ್ನಿಂಗ್ಸ್‌ನ ಆಧಾರದ ಮೇಲೆ ಟಿ20 ಇಂಟರ್‌ನ್ಯಾಶನಲ್‌ಗಳಲ್ಲಿ ಅತಿ ಹೆಚ್ಚು ರನ್ ಗಳಿಸುವ ವಿಷಯದಲ್ಲಿ ಅವರು ಈ ಇಬ್ಬರು ಬ್ಯಾಟ್ಸ್‌ಮನ್‌ಗಳಾದ ಮಹೇಂದ್ರ ಸಿಂಗ್ ಧೋನಿ ಮತ್ತು ಸುರೇಶ್ ರೈನಾ ಅವರನ್ನು ಹಿಂದಿಕ್ಕಿದ್ದಾರೆ.


ಅಂತರಾಷ್ಟ್ರೀಯ ಟಿ20ಯಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ


  • ವಿರಾಟ್ ಕೊಹ್ಲಿ - 4008 ರನ್

  • ರೋಹಿತ್ ಶರ್ಮಾ - 3853 ರನ್

  • ಕೆಎಲ್ ರಾಹುಲ್ - 2265

  • ಶಿಖರ್ ಧವನ್ - 1759

  • ಸೂರ್ಯಕುಮಾರ್ ಯಾದವ್ - 1625 ರನ್

  • ಎಂಎಸ್ ಧೋನಿ - 1617 ರನ್

  • ಸುರೇಶ್ ರೈನಾ - 1605 ರನ್



ಸದ್ಯಕ್ಕೆ ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್‌ನಲ್ಲಿ ಹೊಸ ಕಥೆಯನ್ನು ಬರೆದಿದ್ದಾರೆ. ಟೀಂ ಇಂಡಿಯಾದ ಬ್ಯಾಟಿಂಗ್ ಕ್ರಮಾಂಕದಲ್ಲಿ ಪ್ರಮುಖ ಕೊಂಡಿಯಾಗಿದ್ದಾರೆ. ನಾಲ್ಕನೇ ಕ್ರಮಾಂಕದಲ್ಲಿ ಭಾರತದ ಅತ್ಯಂತ ವಿಶ್ವಾಸಾರ್ಹ ಬ್ಯಾಟ್ಸ್‌ಮನ್ ಆಗಿರುವ ಸೂರ್ಯಕುಮಾರ್ ಯಾದವ್, ಭಾರತದ ಪರ 46 ಪಂದ್ಯಗಳ 44 ಇನ್ನಿಂಗ್ಸ್‌ಗಳಲ್ಲಿ ಒಟ್ಟು 1625 ರನ್ ಗಳಿಸಿದ್ದಾರೆ. ಇದರಲ್ಲಿ ಮೂರು ಶತಕಗಳು ಸೇರಿವೆ.

https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.