MS Dhoni: ಧೋನಿ ಐಪಿಎಲ್ ನಿವೃತ್ತಿಯ ಬಗ್ಗೆ ಬಿಗ್ ಅಪ್ಡೇಟ್.. CSKಗೆ ಯಾವಾಗ ವಿದಾಯ ಹೇಳಲಿದ್ದಾರೆ ಕ್ಯಾಪ್ಟನ್ ಕೂಲ್?!
Dhoni IPL retirement: ಟೀಂ ಇಂಡಿಯಾದ ಮಾಜಿ ನಾಯಕ ಹಾಗೂ ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರ ಮಹೇಂದ್ರ ಸಿಂಗ್ ಧೋನಿ ನಿವೃತ್ತಿ ಬಗ್ಗೆ ಸುದ್ದಿಯೊಂದು ಬಂದಿದೆ.
MS Dhoni: ಟೀಂ ಇಂಡಿಯಾದ ಮಾಜಿ ನಾಯಕ ಹಾಗೂ ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರ ಮಹೇಂದ್ರ ಸಿಂಗ್ ಧೋನಿ ನಿವೃತ್ತಿ ಬಗ್ಗೆ ಸುದ್ದಿಯೊಂದು ಬಂದಿದೆ. ಕಳೆದ ಕೆಲವು ದಿನಗಳಿಂದ ಧೋನಿ ಯಾವಾಗ ಐಪಿಎಲ್‌ಗೆ ವಿದಾಯ ಹೇಳಲಿದ್ದಾರೆ ಎಂಬ ಚರ್ಚೆ ನಡೆಯುತ್ತಿದೆ. ಕಳೆದ ವರ್ಷ ಐಪಿಎಲ್ ನಂತರ ಧೋನಿ ನಿವೃತ್ತಿ ಘೋಷಿಸಲಿದ್ದಾರೆ ಎಂಬ ವರದಿಗಳು ಬಂದಿದ್ದವು. ಆದರೆ, ನಡೆಯುತ್ತಿರುವ ಐಪಿಎಲ್ 2024ರಲ್ಲೂ ಧೋನಿ ಆಡಿದ್ದರು. ಅವರು ಈ ಬಾರೀ ಸಿಎಸ್‌ಕೆ ನಾಯಕನ ಜವಾಬ್ದಾರಿಯನ್ನು ತೆಗೆದುಕೊಳ್ಳದೇ ವಿಕೆಟ್ ಕೀಪರ್ ಆಗಿ ತಂಡದಲ್ಲಿ ತಮ್ಮ ಪಾತ್ರವನ್ನು ನಿರ್ವಹಿಸಿದರು. ರುತುರಾಜ್ ಗಾಯಕ್ವಾಡ್ ನಾಯಕತ್ವದಲ್ಲಿ ಆಡಿದ CSK ತಂಡ ಪ್ಲೇಆಫ್‌ಗೆ ಅರ್ಹತೆ ಪಡೆಯುವಲ್ಲಿ ವಿಫಲವಾಯಿತು. ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಸೋತಿದ್ದು ಪ್ಲೇ ಆಫ್ ಅವಕಾಶವನ್ನು ಕಳೆದುಕೊಂಡಿತು.. ಆ ಪಂದ್ಯದ ನಂತರ ಧೋನಿ ಐಪಿಎಲ್‌ನಿಂದ ನಿವೃತ್ತಿ ಘೋಷಿಸಲಿದ್ದಾರೆ ಎಂಬ ವ್ಯಾಪಕ ಚರ್ಚೆ ನಡೆದಿದೆ..
ಆರ್‌ಸಿಬಿ ವಿರುದ್ಧದ ಪಂದ್ಯದ ನಂತರ ಧೋನಿ ನಿವೃತ್ತಿ ಘೋಷಿಸಲಿದ್ದಾರೆ ಎಂದು ಮಾಜಿ ಕ್ರಿಕೆಟಿಗರು ಭವಿಷ್ಯ ನುಡಿದಿದ್ದಾರೆ. ಆದರೆ ಧೋನಿ ಅಂತಹ ಯಾವುದೇ ನಿರ್ಧಾರವನ್ನು ಹೇಳಿಕೊಂಡಿಲ್ಲ... ಇತ್ತೀಚೆಗಷ್ಟೇ ಧೋನಿ ನಿವೃತ್ತಿಯ ಸುದ್ದಿಯೊಂದು ಹರಿದಾಡುತ್ತಿದೆ. ವರದಿಯ ಪ್ರಕಾರ, ಧೋನಿ ಅವರು ನಿವೃತ್ತಿಯಾಗುತ್ತಿರುವ ಬಗ್ಗೆ ಸಿಎಸ್‌ಕೆ ತಂಡದಲ್ಲಿ ಯಾರಿಗೂ ಹೇಳಿಲ್ಲ. ಸಿಎಸ್‌ಕೆ ಫ್ರಾಂಚೈಸಿ ಸಿಇಒ ಕಾಶಿ ವಿಶ್ವನಾಥನ್ ಅವರು ಧೋನಿ ಮುಂದಿನ ದಿನಗಳಲ್ಲಿ ಖಂಡಿತವಾಗಿಯೂ ತಮ್ಮ ಆಟವನ್ನು ಮುಂದುವರಿಸಬಹುದು ಆದರೆ, ಇದು ಧೋನಿಯ ಇಚ್ಛೆಯ ಮೇಲೆ ಅವಲಂಬಿತವಾಗಿದೆ ಎಂದು ಹೇಳಿದ್ದಾರೆ.
ಮತ್ತೊಂದೆಡೆ, ಎರಡು ತಿಂಗಳ ನಂತರ ನಿವೃತ್ತಿ ವಿಚಾರದಲ್ಲಿ ಸ್ಪಷ್ಟನೆ ನೀಡುವುದಾಗಿ ಧೋನಿ ಸಿಎಸ್‌ಕೆ ಮ್ಯಾನೇಜ್‌ಮೆಂಟ್‌ಗೆ ತಿಳಿಸಿದ್ದಾರೆ ಎಂದು ವರದಿಯಾಗಿದೆ. ಇತ್ತೀಚಿನ ಬೆಳವಣಿಗೆಗಳ ಹಿನ್ನಲೆಯಲ್ಲಿ.. ಮುಂದಿನ ಐಪಿಎಲ್ ಸೀಸನ್ ನಲ್ಲೂ ಧೋನಿ ಚೆನ್ನೈ ಜೆರ್ಸಿಯಲ್ಲಿ ಕಾಣಿಸಿಕೊಳ್ಳುತ್ತಾರಾ..? ಅಥವಾ ಅದಕ್ಕೂ ಮುನ್ನ ನಿವೃತ್ತಿ ಘೋಷಿಸುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ..
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.