ನವದೆಹಲಿ: ಭಾರತದ ದೇಶೀಯ ಕ್ರಿಕೆಟ್ ಟೂರ್ನಮೆಂಟ್ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಟಿ-20ಯಲ್ಲಿ ಕೆಲವು ಯುವ ಮತ್ತು ಅನುಭವಿ ಆಟಗಾರರು ಅದ್ಭುತ ಪ್ರದರ್ಶನ ತೋರುತ್ತಿದ್ದಾರೆ. ಈ ಪೈಕಿ 20 ವರ್ಷದ ಮುಂಬೈ ಬ್ಯಾಟ್ಸ್‌ಮನ್ ಕೂಡ ಸೇರಿದ್ದಾರೆ. ಈ ಬ್ಯಾಟ್ಸ್‌ಮನ್‌ನ ಬಲದಿಂದ ಮುಂಬೈ ಗುರುವಾರ ನಡೆದ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಟಿ-20 ಟೂರ್ನಿಯಲ್ಲಿ ಮಧ್ಯಪ್ರದೇಶವನ್ನು 8 ವಿಕೆಟ್‌ಗಳಿಂದ ಸೋಲಿಸಿತು. ವಿಶೇಷವೆಂದರೆ ಪ್ರಥಮ ದರ್ಜೆ ಕ್ರಿಕೆಟ್ ವೃತ್ತಿಜೀವನದಲ್ಲಿ ಈ ಬ್ಯಾಟ್ಸ್‌ಮನ್‌ನ ಸರಾಸರಿಯು ಅನೇಕ ಅನುಭವಿಗಳಿಗಿಂತಲೂ ಹೆಚ್ಚಾಗಿದೆ.


COMMERCIAL BREAK
SCROLL TO CONTINUE READING

Uder-19 ವಿಶ್ವಕಪ್‌ನಲ್ಲಿ ಫೈನಲ್‌ ಸಾಧನೆ


ಯಶಸ್ವಿ ಜೈಸ್ವಾಲ್… ನೀವು ಈ ಹೆಸರು ಕೇಳಿರಬೇಕು. ಇವರ ನಾಯಕತ್ವದಲ್ಲಿ ಭಾರತ ತಂಡ ಅಂಡರ್-19 ವಿಶ್ವಕಪ್‌ನಲ್ಲಿ ಫೈನಲ್ ತಲುಪಿತ್ತು. 2020ರಲ್ಲಿ ಇವರ ನಾಯಕತ್ವದಲ್ಲಿ ಭಾರತ ಅಂಡರ್-19 ವಿಶ್ವಕಪ್ ಆಡಿತ್ತು. ತಂಡ ಪ್ರಶಸ್ತಿ ಗೆಲ್ಲಲು ಸಾಧ್ಯವಾಗದಿದ್ದರೂ ಯಶಸ್ವಿ ಅದ್ಭುತವಾಗಿ ಆಟವಾಡಿ ಸರಣಿ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾಗಿದ್ದರು. ಇದೀಗ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಟೂರ್ನಿಯಲ್ಲಿ ಮುಂಬೈ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.


ಇದನ್ನೂ ಓದಿ: T20 World Cup : ಟಿ20 ವಿಶ್ವಕಪ್‌ ಟೀಂ ಇಂಡಿಯಾದಿಂದ ಬೌಲರ್ ದೀಪಕ್ ಚಹಾರ್ ಔಟ್!


ಮುಂಬೈಗೆ ಗೆಲುವು


ರಾಜ್‌ಕೋಟ್‌ನಲ್ಲಿ ನಡೆದ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಟಿ-20 ಪಂದ್ಯದಲ್ಲಿ ಮಧ್ಯಪ್ರದೇಶ ವಿರುದ್ಧ ಯಶಸ್ವಿ ಜೈಸ್ವಾಲ್ ಮುಂಬೈ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು. ಮಧ್ಯಪ್ರದೇಶ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ಗೆ 181 ರನ್‍ಗಳ ಬೃಹತ್ ಮೊತ್ತ ಪೇರಿಸಿತ್ತು.  ಬಳಿಕ ಮುಂಬೈ 17 ಓವರ್‌ಗಳಲ್ಲಿ 2 ವಿಕೆಟ್‌ ಕಳೆದುಕೊಂಡು ಗುರಿ ತಲುಪಿತ್ತು. ಈ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ 44 ಎಸೆತಗಳಲ್ಲಿ 5 ಬೌಂಡರಿ ಹಾಗೂ 4 ಸಿಕ್ಸರ್‌ಗಳ ನೆರವಿನಿಂದ ಅಜೇಯ 66 ರನ್ ಗಳಿಸಿದರು. ತುಷಾರ್ ದೇಶಪಾಂಡೆ 4 ಓವರ್ ಗಳಲ್ಲಿ 26 ರನ್ ನೀಡಿ 3 ವಿಕೆಟ್ ಪಡೆದರು. ಮಧ್ಯಪ್ರದೇಶ ಪರ ರಜತ್ ಪಾಟಿದಾರ್ 67 ಮತ್ತು ವೆಂಕಟೇಶ್ ಅಯ್ಯರ್ 57 ರನ್ ಕೊಡುಗೆ ನೀಡಿದರು.


ಶತಕಗಳು ಹೆಚ್ಚು, ಅರ್ಧ ಶತಕ ಕಡಿಮೆ


ಉತ್ತರಪ್ರದೇಶದಲ್ಲಿ ಜನಿಸಿದ ಯಶಸ್ವಿ ಜೈಸ್ವಾಲ್ ದೇಶೀಯ ಕ್ರಿಕೆಟ್‌ನಲ್ಲಿ ಮುಂಬೈ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಇದುವರೆಗೆ ಪ್ರಥಮ ದರ್ಜೆ ಕ್ರಿಕೆಟ್ ನಲ್ಲಿ 7 ಪಂದ್ಯಗಳನ್ನು ಆಡಿದ್ದು, ಒಟ್ಟು 1015 ರನ್ ಗಳಿಸಿದ್ದಾರೆ. ಈ ಪೈಕಿ ಅವರು 265 ರನ್‌ಗಳ ಅತ್ಯುತ್ತಮ ಇನ್ನಿಂಗ್ಸ್‌ ಸಹ ಆಡಿದ್ದಾರೆ. ಯಶಸ್ವಿ 5 ಶತಕಗಳು ಮತ್ತು 1 ಅರ್ಧ ಶತಕ ಗಳಿಸಿದ್ದಾರೆ. ವಿಶೇಷವೆಂದರೆ ಅವರ ಸರಾಸರಿ 84ಕ್ಕಿಂತಲೂ ಹೆಚ್ಚಿದೆ. ಅವರು ಇನ್ನೂ ತಮ್ಮ ವೃತ್ತಿಜೀವನದ ಆರಂಭಿಕ ಹಂತದಲ್ಲಿದ್ದರೂ, ಸರಾಸರಿಯಲ್ಲಿವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಅವರಂತಹ ಅನೇಕ ದಿಗ್ಗಜರಿಗಿಂತಲೂ ಮುಂದಿದ್ದಾರೆ.


ಇದನ್ನೂ ಓದಿ: Pro Kabaddi 9 : ರೋಚಕ ಪಂದ್ಯದಲ್ಲಿ ಯೋಧಸ್ ವಿರುದ್ಧ ಗೆದ್ದು ಬೀಗಿದ ದಬಾಂಗ್‌ ಡೆಲ್ಲಿ


ಚಿಕ್ಕ ವಯಸ್ಸಿನಲ್ಲಿಯೇ ಇಂತಹ ಅದ್ಭುತ ಸಾಧನೆ ಮಾಡಿದ್ದರೂ, ಅತ್ಯುತ್ತಮವಾಗಿ ಆಡುತ್ತಿದ್ದರೂ ಟೀಂ ಇಂಡಿಯಾದಲ್ಲಿ ಯಶಸ್ವಿ ಜೈಸ್ವಾಲ್‍ಗೆ ಸರಿಯಾದ ಅವಕಾಶಗಳು ಸಿಗುತ್ತಿಲ್ಲ. ಹೀಗಾಗಿ ಈ ಆಟಗಾರ ತಂಡದಲ್ಲಿ ಆಡಲು ಅವಕಾಶಕ್ಕಾಗಿ ಹಾತೊರೆಯುತ್ತಿದ್ದಾನೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.