2 ವರ್ಷಗಳ ಬಳಿಕ Team Indiaಗೆ ಮರಳಿದರೂ ಮೈದಾನಕ್ಕಿಳಿಯಲು ಈ ಕ್ರಿಕೆಟಿಗನಿಗೆ ಸಿಗುತ್ತಿಲ್ಲ ಅವಕಾಶ!

Cricket News in Kannada: ಈ ಸರಣಿಯಲ್ಲಿ 4 ಆಟಗಾರರು ಪ್ಲೇಯಿಂಗ್ ಇಲೆವೆನ್’ನಲ್ಲಿ ಅವಕಾಶ ಸಿಗದೆ ವಂಚಿತರಾಗಿದ್ದಾರೆ. ಈ ಪಟ್ಟಿಯಲ್ಲಿ ವೇಗದ ಬೌಲರ್ ನವದೀಪ್ ಸೈನಿ ಸೇರಿದ್ದಾರೆ.

Written by - Bhavishya Shetty | Last Updated : Jul 22, 2023, 11:37 AM IST
    • ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಸೋಲಿನ ನಂತರ ಟೀಂ ಇಂಡಿಯಾದ ಮೊದಲ ಸರಣಿ
    • ಟೆಸ್ಟ್ ಕ್ರಿಕೆಟ್‌ಗೆ ಮರಳಿದ್ದ ಆಟಗಾರನಿಗೆ ಈ ಸರಣಿಯಲ್ಲಿ ನಾಯಕ ರೋಹಿತ್ ಅವಕಾಶ ನೀಡಲಿಲ್ಲ
    • ನವದೀಪ್ 2019 ರಲ್ಲಿ ತಮ್ಮ ಅಂತರಾಷ್ಟ್ರೀಯ ವೃತ್ತಿಜೀವನವನ್ನು ಪ್ರಾರಂಭಿಸಿದರು
2 ವರ್ಷಗಳ ಬಳಿಕ Team Indiaಗೆ ಮರಳಿದರೂ ಮೈದಾನಕ್ಕಿಳಿಯಲು ಈ ಕ್ರಿಕೆಟಿಗನಿಗೆ ಸಿಗುತ್ತಿಲ್ಲ ಅವಕಾಶ! title=
Navdeep Saini

IND vs WI, Navdeep Saini: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಟೆಸ್ಟ್ ಸರಣಿಯ ಎರಡನೇ ಮತ್ತು ಕೊನೆಯ ಪಂದ್ಯವು ಟ್ರಿನಿಡಾಡ್‌’ನ ಪೋರ್ಟ್ ಆಫ್ ಸ್ಪೇನ್‌ನಲ್ಲಿರುವ ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ನಡೆಯುತ್ತಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಸೋಲಿನ ನಂತರ ಟೀಂ ಇಂಡಿಯಾದ ಮೊದಲ ಸರಣಿ ಇದಾಗಿದೆ. ಈ ಸರಣಿಯಲ್ಲಿ ಹಲವು ಯುವ ಆಟಗಾರರೊಂದಿಗೆ ಟೀಂ ಇಂಡಿಯಾ ಎಂಟ್ರಿಕೊಟ್ಟಿದ್ದು, ಕೆಲವರಿಗೆ ಆಡುವ ಅವಕಾಶವೂ ಸಿಕ್ಕಿದೆ. ಆದರೆ 2 ವರ್ಷಗಳ ನಂತರ ಭಾರತ ಟೆಸ್ಟ್ ಕ್ರಿಕೆಟ್‌ಗೆ ಮರಳಿದ್ದ ಆಟಗಾರನಿಗೆ ಈ ಸರಣಿಯಲ್ಲಿ ನಾಯಕ ರೋಹಿತ್ ಅವಕಾಶ ನೀಡಲಿಲ್ಲ.

ಇದನ್ನೂ ಓದಿ: ಕೊಹ್ಲಿಯನ್ನ ಸಾವಿರ ಕೋಟಿ ಒಡೆಯ ಮಾಡಿದ್ದೇ ಈತ! ರೋಹಿತ್-ಸಲ್ಮಾನ್’ಗೂ ನೆಂಟ ಈ ಕೋಟ್ಯಾಧಿಪತಿ

ಈ ಸರಣಿಯಲ್ಲಿ 4 ಆಟಗಾರರು ಪ್ಲೇಯಿಂಗ್ ಇಲೆವೆನ್’ನಲ್ಲಿ ಅವಕಾಶ ಸಿಗದೆ ವಂಚಿತರಾಗಿದ್ದಾರೆ. ಈ ಪಟ್ಟಿಯಲ್ಲಿ ವೇಗದ ಬೌಲರ್ ನವದೀಪ್ ಸೈನಿ ಸೇರಿದ್ದಾರೆ. ಗಾಯದ ಸಮಸ್ಯೆಯಿಂದಾಗಿ ಮತ್ತು ತಂಡದಿಂದ ಹೊರಗುಳಿದಿದ್ದ ನವದೀಪ್ ಸೈನಿ ಅವರ ವೃತ್ತಿಜೀವನವು ವಿರಾಮವನ್ನು ಪಡೆದುಕೊಂಡಿತ್ತು. 2 ವರ್ಷಗಳ ನಂತರ ತಂಡಕ್ಕೆ ಮರಳಿದ್ದಾರೆ. ಆದರೆ ಸರಣಿಯ ಎರಡೂ ಪಂದ್ಯಗಳಲ್ಲಿ ಪ್ಲೇಯಿಂಗ್ 11ರಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದಾರೆ. ಈ ಸರಣಿಯ ಎರಡನೇ ಪಂದ್ಯದಲ್ಲಿ ಸೈನಿ ಆಡಬಹುದು ಎಂದು ನಿರೀಕ್ಷಿಸಲಾಗಿತ್ತು, ಆದರೆ ರೋಹಿತ್ ಮುಖೇಶ್ ಕುಮಾರ್ ಅವರನ್ನು ಮೂರನೇ ವೇಗಿಯನ್ನಾಗಿ ಸೇರಿಸಲು ನಿರ್ಧರಿಸಿದರು.

ನವದೀಪ್ 2019 ರಲ್ಲಿ ತಮ್ಮ ಅಂತರಾಷ್ಟ್ರೀಯ ವೃತ್ತಿಜೀವನವನ್ನು ಪ್ರಾರಂಭಿಸಿದರು. ಅಂತರಾಷ್ಟ್ರೀಯ ಕ್ರಿಕೆಟ್ ಜೀವನದಲ್ಲಿ ಭಾರತಕ್ಕಾಗಿ 2 ಟೆಸ್ಟ್ ಪಂದ್ಯಗಳು, 8 ODIಗಳು ಮತ್ತು 11 T20 ಪಂದ್ಯಗಳನ್ನು ಆಡಿದ್ದಾರೆ. ಟೆಸ್ಟ್‌ನಲ್ಲಿ 4, ಏಕದಿನದಲ್ಲಿ 6 ಮತ್ತು ಟಿ20ಯಲ್ಲಿ 13 ವಿಕೆಟ್‌ಗಳನ್ನು ಪಡೆದಿದ್ದಾರೆ. 2 ವರ್ಷಗಳ ಹಿಂದೆ ಶ್ರೀಲಂಕಾ ವಿರುದ್ಧ ಟೀಮ್ ಇಂಡಿಯಾ ಪರ ತಮ್ಮ ಕೊನೆಯ ಪಂದ್ಯವನ್ನು ಆಡಿದ್ದರು. 2019 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ತಮ್ಮ ಮೊದಲ ಅಂತಾರಾಷ್ಟ್ರೀಯ T20 ಪಂದ್ಯವನ್ನು ಆಡಿದ್ದರು. ಡಿಸೆಂಬರ್ 2019 ರಲ್ಲಿ, ಅವರು ಅಂತರರಾಷ್ಟ್ರೀಯ ODI ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರು ಮತ್ತು 2021 ರಲ್ಲಿ ಆಸ್ಟ್ರೇಲಿಯಾ ಪ್ರವಾಸದಲ್ಲಿ, ಟೆಸ್ಟ್ ಪಂದ್ಯವನ್ನು ಆಡುವ ಅವಕಾಶವನ್ನು ಪಡೆದರು.

ಇದನ್ನೂ ಓದಿ: Team Indiaದ ಈ ಆಟಗಾರನ 13 ವರ್ಷಗಳ ಸುದೀರ್ಘ ವೃತ್ತಿಜೀವನ ಅಂತ್ಯ!

ಪ್ಲೇಯಿಂಗ್ 11 ರಲ್ಲಿ ಸ್ಥಾನ ಪಡೆದ ಬೌಲರ್‌ಗಳು:

ಪೋರ್ಟ್ ಆಫ್ ಸ್ಪೇನ್‌ನ ಕ್ವೀನ್ಸ್ ಪಾರ್ಕ್ ಓವಲ್‌ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ವೇಗದ ಬೌಲರ್‌ ಗಳಾಗಿ ಮುಖೇಶ್ ಕುಮಾರ್, ಜಯದೇವ್ ಉನದ್ಕತ್ ಮತ್ತು ಮೊಹಮ್ಮದ್ ಸಿರಾಜ್ ಅವರನ್ನು ಪ್ಲೇಯಿಂಗ್ 11 ರಲ್ಲಿ ಸೇರಿಸಲಾಗಿದೆ. ರವೀಂದ್ರ ಜಡೇಜಾ ಮತ್ತು ರವಿಚಂದ್ರನ್ ಅಶ್ವಿನ್ ಸ್ಪಿನ್ನರ್‌ಗಳಾಗಿ ಸ್ಥಾನ ಪಡೆದಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News