ನವದೆಹಲಿ: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ವಿರಾಟ್ ಕೊಹ್ಲಿ ಈಗ ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ತಮ್ಮ ಕ್ವಾರಂಟೈನ್ ಡೈರಿ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ತಾವು ನೆಟ್ ಫ್ಲಿಕ್ಸ್ ಸೀರಿಸ್ ನೋಡುತ್ತಿರುವುದನ್ನು ಅವರು ಟ್ವೀಟ್ ಮಾಡಿದ್ದಾರೆ.


COMMERCIAL BREAK
SCROLL TO CONTINUE READING

ಇದಕ್ಕೆ ಈಗ ಪ್ರತಿಕ್ರಿಯಿಸಿರುವ ನೆಟ್ ಫ್ಲಿಕ್ಸ್ ಇಂಡಿಯಾ ವಿರಾಟ್ ಕೊಹ್ಲಿವೊಂದಿಗೆ ಫೋಟೋ ತೆಗೆದುಕೊಳ್ಳುವ ಕನಸು ಈಗ ನನಸಾಗಿದೆ ಎಂದು ಟ್ವೀಟ್ ಮಾಡಿದೆ. ಭಾರತದ ಮುಂಬರುವ ಕ್ರಿಕೆಟ್ ಪ್ರವಾಸಕ್ಕಾಗಿ ಪ್ರಸ್ತುತ ಆಸ್ಟ್ರೇಲಿಯಾದಲ್ಲಿದ್ದ ವಿರಾಟ್ ಕೊಹ್ಲಿ, ಸೆಲ್ಫಿ ಹಂಚಿಕೊಂಡಿದ್ದಾರೆ.


ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ ದಂಪತಿಯನ್ನು ಫಾಲೋ ಮಾಡಿದ INSTAGRAM


ಭಾರತ ಕ್ರಿಕೆಟ್ ತಂಡದ ಕೋಚ್ ಹುದ್ದೆಯಿಂದ ಕೆಳಗಿಳಿದ ಬಗ್ಗೆ ಅನಿಲ್ ಕುಂಬ್ಳೆ ಹೇಳಿದ್ದೇನು...?

ಇನ್ನೊಂದು ಸಂಗತಿ ಎಂದರೆ ವಿರಾಟ್ ಕೊಹ್ಲಿಗೆ ಬಿಸಿಸಿಐ ಪಿತೃತ್ವ ರಜೆ ನೀಡಿದ್ದರಿಂದಾಗಿ ಅವರು ಟೆಸ್ಟ್ ಪಂದ್ಯಗಳನ್ನು ತಪ್ಪಿಸಿಕೊಳ್ಳಲಿದ್ದಾರೆ.ಪತ್ನಿ ಜನವರಿ ತಿಂಗಳಲ್ಲಿ ಮಗುವಿನ ನಿರೀಕ್ಷೆಯಲ್ಲಿರುವುದರಿಂದಾಗಿ ಅವರು ರಜೆ ಮೇಲೆ ತೆರಳಲಿದ್ದಾರೆ.