Wrestlers Protest: ಕುಸ್ತಿ ಪ್ರತಿಭಟನೆಗೆ ಹೊಸ ತಿರುವು, ಪೊಲೀಸ್ ರಕ್ಷಣೆಯಲ್ಲಿ ಬ್ರಿಜ್ ಭೂಷಣ್ ಮನೆ ತಲುಪಿದ ಮಹಿಳಾ ಕುಸ್ತಿಪಟು
Wrestlers Protest: ಕುಸ್ತಿಪಟುಗಳ ಮುಷ್ಕರದಲ್ಲಿ ತೊಡಗಿರುವ ಮಹಿಳಾ ಕುಸ್ತಿಪಟುವೊಬ್ಬರು WFI ನಿರ್ಗಮಿತ ಅಧ್ಯಕ್ಷ ಬ್ರಿಜ್ಭೂಷಣ್ ಶರಣ್ ಸಿಂಗ್ ಮನೆಗೆ ತಲುಪಿದ್ದಾರೆ. ಈ ಮಹಿಳಾ ಕುಸ್ತಿಪಟು ಪೊಲೀಸ್ ಭದ್ರತೆಯಲ್ಲಿ ಅವರ ಮನೆಗೆ ತಲುಪಿದ್ದಾರೆ ಎನ್ನಲಾಗಿದೆ.
Wrestlers Protest: ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣದ ತನಿಖೆಯಲ್ಲಿ ಹೊಸ ಟ್ವಿಸ್ಟ್ ಕಂಡುಬಂದಿದೆ. ಜಂತರ್ ಮಂತರ್ ನಲ್ಲಿ ನಡೆದ ಧರಣಿಯಲ್ಲಿ ಪಾಲ್ಗೊಂಡಿದ್ದ ಮಹಿಳಾ ಕುಸ್ತಿಪಟುವೊಬ್ಬರು ಪೊಲೀಸ ಭದ್ರತೆಯ ನಡುವೆ ಆರೋಪಿ ಬ್ರಿಜ್ ಭೂಷಣ್ ಸಿಂಗ್ ಮನೆಗೆ ತಲುಪಿದ್ದಾರೆ. ಕುಸ್ತಿಪಟುಗಳ ಈ ಕುಸ್ತಿ ಕಾಳಗದಲ್ಲಿ ಮಹಿಳಾ ಕುಸ್ತಿ ಪಟುವೊಬ್ಬರು ಈ ರೀತಿ ಬ್ರಿಜ್ ಭೂಷಣ್ ಸಿಂಗ್ ಮನೆ ತಲುಪಿರುವುದು ಹಲವು ಪ್ರಶ್ನೆಗಳನ್ನು ಹುಟ್ಟು ಹಾಕುತ್ತಿದೆ. ಹೀಗಿರುವಾಗ ಮಹಿಳಾ ಕುಸ್ತಿಪಟು ಬ್ರಿಜ್ ಭೂಷಣ್ ಸಿಂಗ್ ಮನೆಗೆ ಈ ರೀತಿ ಬಂದಿರುವುದು ರಾಜಿ ಯತ್ನವೇ ಎಂಬ ಊಹಾಪೋಹಗಳು ವ್ಯಕ್ತವಾಗುತ್ತಿವೆ. ಇದರೊಂದಿಗೆ ಅಪ್ರಾಪ್ತ ಮಹಿಳಾ ಕುಸ್ತಿಪಟುವಿನ ಹೇಳಿಕೆ ಬದಲಿಸಿದ್ದಕ್ಕೂ ಏನಾದರೂ ಸಂಬಂಧವಿದೆಯೇ ಎಂಬ ಪ್ರಶ್ನೆಯೂ ಮೂಡಿದೆ.
ಮತ್ತೊಂದೆಡೆ, ಬ್ರಿಜ್ ಭೂಷಣ್ ವಿರುದ್ಧ ಆರೋಪ ಮಾಡಿರುವ ಅಂತರಾಷ್ಟ್ರೀಯ ರೆಫರಿ ಜಗಬೀರ್ "ಡಬ್ಲ್ಯುಎಫ್‌ಐ ಮುಖ್ಯಸ್ಥರು ಮತ್ತು ಅವರ ಸಹಚರರು ಕುಡಿದು ಮಕ್ಕಳೊಂದಿಗೆ ಅನುಚಿತವಾಗಿ ವರ್ತಿಸಿದ್ದರು" ಎಂದಿದ್ದಾರೆ. "ನಾವೆಲ್ಲರೂ 2013 ರಲ್ಲಿ ಥಾಯ್ಲೆಂಡ್‌ಗೆ ಹೋಗಿದ್ದೆವು, ನಂತರ ಅಧ್ಯಕ್ಷರು ಯಾವ ರೀತಿ ಮಹಿಳಾ ಕುಸ್ತಿಪಟುವಿನ ಹಿಂದೆ ನಿಂತಿದ್ದರು ಎಂಬುದನ್ನೂ ನೋಡಿದ್ದೇವೆ" ಎಂದು ಅವರು ಹೇಳಿದ್ದಾರೆ.
ಇತ್ತೀಚೆಗೆ, 17 ವರ್ಷದ ಅಪ್ರಾಪ್ತ ಕುಸ್ತಿಪಟು ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹಿಂಪಡೆದಿದ್ದಾರೆ. ಅಪ್ರಾಪ್ತ ಕುಸ್ತಿಪಟುವಿನ ತಂದೆ ಕೂಡ ಇದನ್ನು ಖಚಿತಪಡಿಸಿದ್ದಾರೆ.
ಕ್ರೀಡಾ ಸಚಿವರೊಂದಿಗೆ ಕುಸ್ತಿಪಟುಗಳ ಸಭೆ
ಇತ್ತೀಚೆಗೆ ಕುಸ್ತಿಪಟುಗಳಾದ ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರನ್ನು ಭೇಟಿ ಮಾಡಿದ್ದರು. ಈ ವೇಳೆ ಮಹಿಳಾ ಡಬ್ಲ್ಯುಎಫ್‌ಐ ಮುಖ್ಯಸ್ಥರ ನೇಮಕ ಮತ್ತು ಅವರ ವಿರುದ್ಧದ ಪೊಲೀಸ್ ಎಫ್‌ಐಆರ್ ರದ್ದುಪಡಿಸುವುದು ಸೇರಿದಂತೆ ನಾಲ್ಕು ಬೇಡಿಕೆಗಳನ್ನು ಕುಸ್ತಿಪಟುಗಳು ಕೇಂದ್ರ ಸಚಿವರ ಮುಂದೆ ಇರಿಸಿದ್ದರು.
ಈ ಕುರಿತು ಮಾಹಿತಿ ನೀಡಿರುವ ಮೂಲಗಳು, "ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳು ಮತ್ತು ವ್ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಗೆ ಮಹಿಳಾ ಮುಖ್ಯಸ್ಥರನ್ನು ನೇಮಿಸಬೇಕೆಂದು ಅವರು ಒತ್ತಾಯಿಸಿದ್ದಾರೆ. ಬ್ರಿಜ್ ಭೂಷಣ್ ಸಿಂಗ್ ಅಥವಾ ಅವರ ಕುಟುಂಬ ಸದಸ್ಯರು ಫೆಡರೇಶನ್‌ನ ಭಾಗವಾಗಿರಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಈ ಸಂದರ್ಭದಲ್ಲಿ, ಅವರು ಬ್ರಿಜ್ ಭೂಷಣ್ ಸಿಂಗ್ ಬಂಧನಕ್ಕೆ ತಮ್ಮ ಬೇಡಿಕೆಯನ್ನು ಪುನರುಚ್ಚರಿಸಿದ್ದಾರೆ. ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ನಂತರ ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರನ್ನು ಭೇಟಿ ಮಾಡಲು ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ಸರ್ಕಾರ ಆಹ್ವಾನ ನೀಡಿತ್ತು.
ಇದನ್ನೂ ನೋಡಿ-
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.