ನವದೆಹಲಿ: ವಿರಾಟ್ ಕೊಹ್ಲಿ ನೇತೃತ್ವದ ಭಾರತ ಮಂಗಳವಾರ ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆಯುತ್ತಿರುವ ಐಸಿಸಿ ಕ್ರಿಕೆಟ್ ವಿಶ್ವಕಪ್ 2019 ರ ಮೊದಲ ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಸೆಣಸುತ್ತಿದೆ. ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಟಾಸ್ ಗೆದ್ದು ಭಾರತ ವಿರುದ್ಧ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.  


COMMERCIAL BREAK
SCROLL TO CONTINUE READING

ಮಂಗಳವಾರ ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆಯುತ್ತಿರುವ ಐಸಿಸಿ ಕ್ರಿಕೆಟ್ ವಿಶ್ವಕಪ್ 2019 ರ ಮೊದಲ ಸೆಮಿಫೈನಲ್‌ನಲ್ಲಿ ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ ಹೋರಾಡಲು ಸಜ್ಜಾಗಿದೆ. ಇದುವರೆಗೆ ಲೀಗ್ ಪಂದ್ಯಾವಳಿಯಲ್ಲಿ ಭಾರತ ಕೇವಲ ಒಂದು ಪಂದ್ಯವನ್ನು ಸೋತಿದೆ.ಆದ್ದರಿಂದ ಭಾರತವನ್ನು ನೆಚ್ಚಿನ ತಂಡ ಎಂದು ಹೇಳಲಾಗುತ್ತಿದೆ. ಆದರೆ ಕಿವೀಸ್  ತಂಡವನ್ನು ಅಷ್ಟು ಸುಲಭವಾಗಿ ಲಘುವಾಗಿ ಪರಿಗಣಿಸುವ ಹಾಗಿಲ್ಲ,


ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಈವರೆಗೆ ಪಂದ್ಯಾವಳಿಯಲ್ಲಿ ಉತ್ತಮ ಫಾರ್ಮ್‌ನಲ್ಲಿದ್ದಾರೆ, ಯಾವುದೇ ಸಂದರ್ಭದಲ್ಲಿ ಅವರು ಆಟದ ಗತಿಯನ್ನೇ ಬದಲಿಸುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಇನ್ನೊಂದೆಡೆಗೆ ವಿರಾಟ್ ಕೊಹ್ಲಿ ಅರ್ಧ ಶತಕಗಳನ್ನು ಗಳಿಸಿದ್ದರು ಕೂಡ ಅವುಗಳನ್ನು ಶತಕಗಳನ್ನಾಗಿ ಪರಿವರ್ತಿಸುವಲ್ಲಿ ವಿಫಲರಾಗಿದ್ದಾರೆ.


ಭಾರತ ತಂಡ: ಲೋಕೇಶ್ ರಾಹುಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ , ರಿಷಭ್ ಪಂತ್, ಎಂ.ಎಸ್.ಧೋನಿ , ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ಯುಜ್ವೇಂದ್ರ ಚಾಹಲ್, ಜಸ್ಪ್ರೀತ್ ಬುಮ್ರಾ.


ನ್ಯೂಜಿಲೆಂಡ್ ತಂಡ: ಮಾರ್ಟಿನ್ ಗುಪ್ಟಿಲ್, ಹೆನ್ರಿ ನಿಕೋಲ್ಸ್, ಕೇನ್ ವಿಲಿಯಮ್ಸನ್ , ರಾಸ್ ಟೇಲರ್, ಟಾಮ್ ಲಾಥಮ್ , ಜೇಮ್ಸ್ ನೀಶಮ್, ಕಾಲಿನ್ ಡಿ ಗ್ರ್ಯಾಂಡ್‌ಹೋಮ್, ಮಿಚೆಲ್ ಸ್ಯಾಂಟ್ನರ್, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಟ್ರೆಂಟ್ ಬೌಲ್ಟ್.