New Zealand vs India 2nd T20I: ಮತ್ತೆ ಮಿಂಚಿದ ಕೆ.ಎಲ್.ರಾಹುಲ್, ಸುಲಭ ತುತ್ತಾದ ಕೀವಿಸ್ ಪಡೆ

ಆಕ್ಲೆಂಡ್‌ನಲ್ಲಿ ಭಾನುವಾರ ನಡೆದ ಎರಡನೇ ಟಿ 20 ಯಲ್ಲಿ ಭಾರತ ನ್ಯೂಜಿಲೆಂಡ್ ತಂಡವನ್ನು ಏಳು ವಿಕೆಟ್‌ಗಳಿಂದ ಸೋಲಿಸಿದೆ. ಕನ್ನಡಿಗ ಕೆ.ಎಲ್.ರಾಹುಲ್ ಅಜೇಯ 58 ರನ್ ಗಳಿಸುವ ಮೂಲಕ ಐದು ಪಂದ್ಯಗಳ ಸರಣಿ ಭಾರತಕ್ಕೆ 2-0 ಮುನ್ನಡೆ ತಂದುಕೊಟ್ಟರು.
ನವದೆಹಲಿ: ಆಕ್ಲೆಂಡ್‌ನಲ್ಲಿ ಭಾನುವಾರ ನಡೆದ ಎರಡನೇ ಟಿ 20 ಯಲ್ಲಿ ಭಾರತ ನ್ಯೂಜಿಲೆಂಡ್ ತಂಡವನ್ನು ಏಳು ವಿಕೆಟ್‌ಗಳಿಂದ ಸೋಲಿಸಿದೆ. ಕನ್ನಡಿಗ ಕೆ.ಎಲ್.ರಾಹುಲ್ ಅಜೇಯ 58 ರನ್ ಗಳಿಸುವ ಮೂಲಕ ಐದು ಪಂದ್ಯಗಳ ಸರಣಿ ಭಾರತಕ್ಕೆ 2-0 ಮುನ್ನಡೆ ತಂದುಕೊಟ್ಟರು.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ನ್ಯೂಜಿಲೆಂಡ್ ತಂಡವು 20 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 132 ರನ್ ಗಳಿಸಿತು. ಇನ್ನೊಂದೆಡೆ ಭಾರತ ತಂಡದ ಬೌಲರ್ ಗಳು ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್ ತಂಡವನ್ನು ಬೇಗನೆ ಕಟ್ಟಿ ಹಾಕುವಲ್ಲಿ ಯಶಸ್ವಿಯಾದರು.
133 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ ಭಾರತ ತಂಡವು 39 ರನ್ ಗಳಾಗುವಷ್ಟರಲ್ಲಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ವಿಕೆಟ್ ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ಸಂದರ್ಭದಲ್ಲಿ ಜೊತೆಗೂಡಿದ ಕನ್ನಡಿಗ ಕೆ.ಎಲ್.ರಾಹುಲ್ (57) ಹಾಗೂ ಶ್ರೇಯಸ್ ಅಯ್ಯರ್ (44) ಸ್ಪೋಟಕ ಬ್ಯಾಟಿಂಗ್ ನಿಂದಾಗಿ ಭಾರತ ತಂಡವು ಕೇವಲ ಮೂರು ವಿಕೆಟ್ ನಷ್ಟಕ್ಕೆ 17.3 ಓವರ್ ಗಳಲ್ಲಿ ಗೆಲುವಿನ ದಡ ಸೇರಿತು. ಆ ಮೂಲಕ ಸರಣಿಯಲ್ಲಿ ಈಗ ಭಾರತ ತಂಡವು 2-0 ಅಂತರದಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದೆ.