ಬೆಂಗಳೂರು : ನೀರಜ್ ಚೋಪ್ರಾ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಫೈನಲ್‌ಗೆ ಲಗ್ಗೆ ಇಟ್ಟಿದ್ದಾರೆ. ಅಲ್ಲದೆ ಪ್ಯಾರಿಸ್ ಒಲಿಂಪಿಕ್ಸ್‌ಗೂ ಅರ್ಹತೆ ಪಡೆದಿದ್ದಾರೆ. ನೀರಜ್ ಚೋಪ್ರಾ ತಮ್ಮ ಮೊದಲ ಪ್ರಯತ್ನದಲ್ಲಿ 88.77 ಮೀಟರ್‌ಗಳಷ್ಟು ದೂರ ಜಾವೆಲಿನ್ ಎಸೆದು ಫೈನಲ್‌ ಪ್ರವೇಶಿಸಿದ್ದಾರೆ.  ಇಲ್ಲಿಯವರೆಗೆ, ಈ ಚಾಂಪಿಯನ್‌ಶಿಪ್‌ನಲ್ಲಿ ಭಾರತ ಒಂದೂ ಚಿನ್ನದ ಪದಕವನ್ನು ಗೆದ್ದಿಲ್ಲ. 
 
ಚಿನ್ನದ ಪದಕದ ಮೇಲೆ  ನೀರಜ್ ಚೋಪ್ರಾ  ಕಣ್ಣು : 
ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ, ಇದೀಗ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ ಪ್ರಶಸ್ತಿ ಮೇಲೆ ಕಣ್ಣಿಟ್ಟಿದ್ದಾರೆ. ಕಳೆದ ವರ್ಷ ನೀರಜ್ ಚೋಪ್ರಾ ಈ ಟೂರ್ನಿಯಲ್ಲಿ ಬೆಳ್ಳಿ ಗೆದ್ದಿದ್ದರು. ಅಂತಿಮ ಪಂದ್ಯ ಆಗಸ್ಟ್ 27 ರಂದು ಭಾರತೀಯ ಕಾಲಮಾನದ ಪ್ರಕಾರ ರಾತ್ರಿ 11.45ಕ್ಕೆ ಆರಂಭವಾಗಲಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ : Cricketers Meal: ಕ್ರಿಕೆಟ್ ಪಂದ್ಯದ ವೇಳೆ ಕ್ರಿಕೆಟಿಗರ ಆಹಾರ ಪದ್ದತಿ ಹೇಗಿರುತ್ತೆ ಗೊತ್ತಾ?


ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಾಂಪಿಯನ್ : 
ನೀರಜ್ ಚೋಪ್ರಾ 2021ರಲ್ಲಿ ನಡೆದ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದು ಇತಿಹಾಸ ಸೃಷ್ಟಿಸಿದ್ದರು. ಈ ಮೂಲಕ ಅಥ್ಲೆಟಿಕ್ಸ್‌ನಲ್ಲಿ ಒಲಿಂಪಿಕ್ ಚಿನ್ನ ಗೆದ್ದ ಮೊದಲ ಭಾರತೀಯ ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಆ ಸಂದರ್ಭದಲ್ಲಿ ಚೋಪ್ರಾ 87.58 ಮೀಟರ್ ದೂರಕ್ಕೆ ಜಾವೆಲಿನ್ ಎಸೆಯುವ ಮೂಲಕ ಈ ಸಾಧನೆ ಮಾಡಿದ್ದರು. ಇದಾದ ಬಳಿಕ ಜ್ಯೂರಿಚ್‌ನಲ್ಲಿ ನಡೆದ ಪ್ರತಿಷ್ಠಿತ ಡೈಮಂಡ್ ಲೀಗ್‌ನಲ್ಲಿಯೂ ಚಿನ್ನ ಗೆದ್ದು ದೇಶದ ಕೀರ್ತಿ ಪತಾಕೆ ಹಾರಿಸಿದ್ದರು. 


ಇದನ್ನೂ ಓದಿ : ಕ್ರಿಕೆಟ್ ಪಂದ್ಯದ ವೇಳೆ ಆಟಗಾರರು ಏನು ತಿನ್ನುತ್ತಾರೆ? ದೊಡ್ಡ ರಹಸ್ಯ ಬಹಿರಂಗ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.