ICC ODI World Cup 2023: ಬಾಬರ್ ಅಜಮ್ ನೇತೃತ್ವದ ಪಾಕಿಸ್ತಾನ ಕ್ರಿಕೆಟ್ ತಂಡ ODI ವಿಶ್ವಕಪ್‌ನಲ್ಲಿ ಭಾಗವಹಿಸಲು ಭಾರತಕ್ಕೆ ಬಂದಿದೆ. 7 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಪಾಕಿಸ್ತಾನ ಕ್ರಿಕೆಟ್ ತಂಡ ಭಾರತ ಪ್ರವಾಸ ಕೈಗೊಂಡಿದ್ದು, ಇದಕ್ಕೂ ಮೊದಲು 2016ರಲ್ಲಿ ಟಿ20 ವಿಶ್ವಕಪ್‌ ಆಡಲು ಭಾರತಕ್ಕೆ ಆಗಮಿಸಿತ್ತು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: IND vs AUS: ಏಕದಿನ ಕ್ರಿಕೆಟ್​ನಲ್ಲಿ ವಿಶೇಷ ದಾಖಲೆ ಬರೆದ ಕೊಹ್ಲಿ, ರಿಕಿ ಪಾಂಟಿಂಗ್ ದಾಖಲೆ ಉಡೀಸ್


ಪಾಕಿಸ್ತಾನ ತಂಡ ಅಕ್ಟೋಬರ್ 6 ರಂದು ನೆದರ್ಲೆಂಡ್ಸ್ ವಿರುದ್ಧ ವಿಶ್ವಕಪ್‌’ನಲ್ಲಿ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ಈ ಪಂದ್ಯಕ್ಕೂ ಮುನ್ನ ಪಾಕಿಸ್ತಾನದ ಆಟಗಾರರು ಅಭ್ಯಾಸದಲ್ಲಿ ಬಿರುಸಿನ ತಯಾರಿ ನಡೆಸುತ್ತಿದ್ದಾರೆ. ಆದರೆ ಪಾಕಿಸ್ತಾನದ ಮೊದಲ ಅಭ್ಯಾಸ ಸೆಷನ್‌’ನಲ್ಲಿ ಹೈಲೈಟ್ ಆಗಿದ್ದು, ಹೈದರಾಬಾದ್‌’ನ 6 ಅಡಿ 9 ಇಂಚು ಎತ್ತರದ ವೇಗದ ಬೌಲರ್ ನಿಶಾಂತ್ ಸರ್ನು.


ಭಾರತಕ್ಕೆ ಪಾಕಿಸ್ತಾನ ತಂಡ ಆಗಮಿಸಿದ 12 ಗಂಟೆಗಳ ಬಳಿಕ ತನ್ನ ಮೊದಲ ಅಭ್ಯಾಸವನ್ನು ಆರಂಭಿಸಿದೆ. ಆದರೆ ಈ ಸಂದರ್ಭದಲ್ಲಿ ಹೈದರಾಬಾದ್ ಅಂಡರ್-19 ತಂಡದಲ್ಲಿ ಸೇರ್ಪಡೆಗೊಂಡಿರುವ ನಿಶಾಂತ್ ಸರ್ನು, ನೆಟ್ ಅಭ್ಯಾಸದಲ್ಲಿ ಪಾಕಿಸ್ತಾನ ತಂಡಕ್ಕೆ ಸಹಾಯ ಮಾಡುವ ನೆಟ್ ಬೌಲರ್‌ ಆಗಿ ಸೇರಿಕೊಂಡಿದ್ದಾರೆ. ಆರಂಭಿಕರಾದ ಫಖರ್ ಜಮಾನ್ ಅವರನ್ನು ಹೊರತುಪಡಿಸಿ ನಿಶಾಂತ್ ಇತರ ಬ್ಯಾಟ್ಸ್‌ಮನ್‌’ಗಳನ್ನು ಬೌಲ್ಡ್ ಮಾಡಿದ್ದರು.


ಆಸ್ಟ್ರೇಲಿಯಾದ ವೇಗದ ಬೌಲರ್‌’ಗಳಾದ ಮಿಚೆಲ್ ಸ್ಟಾರ್ಕ್ ಮತ್ತು ಪ್ಯಾಟ್ ಕಮಿನ್ಸ್ ಅವರನ್ನು ತಮ್ಮ ಆರಾಧ್ಯ ದೈವ ಎಂದು ನಿಶಾಂತ್ ಪರಿಗಣಿಸಿದ್ದಾರಂತೆ. ಈ ಬಗ್ಗೆ ಸ್ವತಃ ಅವರೇ ಹೇಳಿಕೆ ನೀಡಿದ್ದಾರೆ. ಇನ್ನು ಗಂಟೆಗೆ 125 ರಿಂದ 130 ಕಿಲೋಮೀಟರ್ ವೇಗದಲ್ಲಿ ಬೌಲಿಂಗ್ ಮಾಡಬಲ್ಲ ಸಾಮಾರ್ಥ್ಯ ನಿಶಾಂತ್ ಅವರಿಗೆ ಇದೆ.


ಇದನ್ನೂ ಓದಿ: ಆಸ್ಟ್ರೇಲಿಯಾ ಬ್ಯಾಟರ್‌ ಮಾರ್ನಸ್ ಮುಂದೆ ವಿರಾಟ್ ಕೊಹ್ಲಿ ಡ್ಯಾನ್ಸ್‌ : ವಿಡಿಯೋ ವೈರಲ್‌


ವಿಶ್ವಕಪ್ 2023ರ ಪಾಕಿಸ್ತಾನ ತಂಡ:


ಬಾಬರ್ ಆಜಮ್ (ನಾಯಕ), ಶಾದಾಬ್ ಖಾನ್, ಫಖರ್ ಜಮಾನ್, ಇಮಾಮ್-ಉಲ್-ಹಕ್, ಅಬ್ದುಲ್ಲಾ ಶಫೀಕ್, ಮೊಹಮ್ಮದ್ ರಿಜ್ವಾನ್, ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಸಲ್ಮಾನ್ ಅಲಿ ಆಗಾ, ಮೊಹಮ್ಮದ್ ನವಾಜ್, ಉಸಾಮಾ ಮಿರ್, ಹ್ಯಾರಿಸ್ ರೌಫ್, ಹಸನ್ ಅಲಿ, ಶಾಹೀನ್ ಅಫ್ರಿದಿ, ಮೊಹಮ್ಮದ್ ಅಫ್ರಿದಿ ವಾಸಿಂ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.