ಮುಂಬೈ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್.ಧೋನಿ ಏಕದಿನ ಕ್ರಿಕೆಟ್ ಪಂದ್ಯಗಳಿಗೆ ವಿದಾಯ ಹೇಳುವ ಪ್ರಶ್ನೆಯೇ ಇಲ್ಲ ಎಂದು ಭಾರತಿಯ ಕ್ರಿಕೆಟ್ ತಂಡದ ತರಬೇತುದಾರ ರವಿ ಶಾಸ್ತ್ರಿ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಧೋನಿ ಏಕದಿನ ಪಂದ್ಯಕ್ಕೆ ವಿದಾಯ ಹೇಳಲಿದ್ದಾರೆ ಎಂಬ ಎಲ್ಲಾ ವದಂತಿಗಳಿಗೆ ತೆರೆ ಬಿದ್ದಂತಾಗಿದೆ. 


COMMERCIAL BREAK
SCROLL TO CONTINUE READING

ಇಂಗ್ಲೆಂಡ್ ವಿರುದ್ಧ ನಡೆದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದ ಬಳಿಕ ಫೀಲ್ಡ್ ಅಂಪೈರ್ ಕೈಯಿಂದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮ್ಯಾಚ್ ಬಾಲ್ ಪಡೆದಿರುವುದು ಹಲವಾರು ಊಹಾಪೋಹಗಳಿಗೆ ಎಡೆ ಮಾಡಿಕೊಟ್ಟಿತ್ತು. ಇದು ಏಕದಿನ ಕ್ರಿಕೆಟ್‌ಗೂ ಧೋನಿ ನಿವೃತ್ತಿ ಸಲ್ಲಿಸುವ ಸೂಚನೆಯೇ ಎಂಬುದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. 


ಈ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ಕೋಚ್ ರವಿ ಶಾಸ್ತ್ರೀ ಅವರು "ಧೋನಿ ಕ್ರಿಕೆಟ್‌ನಿಂದ ನಿವೃತ್ತರಾಗುವ ಪ್ರಶ್ನೆಯೇ ಇಲ್ಲ; ಅವರ ಉಪಸ್ಥಿತಿ ಭಾರತ ತಂಡಕ್ಕೆ ಅಗತ್ಯವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಧೋನಿ ನಿವೃತ್ತಿ ಬಗ್ಗೆ ಮೂಡಿ ಬಂದ ಚರ್ಚೆಗಳನ್ನು ಅಸಂಬದ್ಧ ಎಂದಿರುವ ಶಾಸ್ತ್ರಿ, ಧೋನಿ ಎಲ್ಲಿಗೂ ಹೋಗುವುದಿಲ್ಲ" ಎಂದು ಸ್ಪಷ್ಟಪಡಿಸಿದ್ದಾರೆ.