ODI World Cup 2023: ಏಕದಿನ ವಿಶ್ವಕಪ್​ನ ಅರ್ಹತಾ ಸುತ್ತಿನ ಸೂಪರ್ 6​ ಪಂದ್ಯದಲ್ಲಿ ಸ್ಕಾಟ್​​ಲ್ಯಾಂಡ್ ವಿರುದ್ಧ ಹೀನಾಯ ಸೋಲು ಕಾಣುವ ಮೂಲಕ ವೆಸ್ಟ್ ಇಂಡೀಸ್ ತಂಡವು ಏಕದಿನ ವಿಶ್ವಕಪ್‍ನಿಂದ ಹೊರಬಿದ್ದಿದೆ. 1975 & 1979ರಲ್ಲಿ ವಿಶ್ವ ಚಾಂಪಿಯನ್ ಆಗಿದ್ದ ವೆಸ್ಟ್ ಇಂಡೀಸ್ ಇದೇ ಮೊದಲ ಬಾರಿಗೆ ಏಕದಿನ ವಿಶ್ವಕಪ್​ ಟೂರ್ನಿಯಿಂದ ಔಟ್ ಆಗಿದ್ದು, ಅಭಿಮಾನಿಗಳಿಗೆ ದೊಡ್ಡ ನಿರಾಸೆ ಮೂಡಿಸಿದೆ.


COMMERCIAL BREAK
SCROLL TO CONTINUE READING

ಕಳೆದ 12 ಏಕದಿನ ವಿಶ್ವಕಪ್​ಗಳಲ್ಲಿಯೂ ಪಾಲ್ಗೊಂಡಿದ್ದ ವೆಸ್ಟ್ ಇಂಡೀಸ್ ತಂಡ ಈ ಬಾರಿ ಅರ್ಹತಾ ಸುತ್ತಿನಲ್ಲೇ ನಿರ್ಗಮಿಸುವ ಮೂಲಕ ಭಾರೀ ಮುಖಭಂಗಕ್ಕೆ ಈಡಾಗಿದೆ. ಈ ಬಾರಿಯ ಏಕದಿನ ವಿಶ್ವಕಪ್ ಅರ್ಹತಾ ಸುತ್ತಿನ ಪಂದ್ಯಗಳಲ್ಲಿ ವೆಸ್ಟ್ ಇಂಡೀಸ್ ತಂಡವು USA ಮತ್ತು ನೇಪಾಳ ವಿರುದ್ಧ ಗೆಲುವು ಸಾಧಿಸಿತ್ತು. ಆದರೆ ಝಿಂಬಾಬ್ವೆ ಮತ್ತು ನೆದರ್​ಲ್ಯಾಂಡ್ಸ್ ವಿರುದ್ಧ ಹೀನಾಯ ಸೋಲು ಕಂಡಿತ್ತು. 2 ಗೆಲುವಿನೊಂದಿಗೆ ಅರ್ಹತಾ ಸುತ್ತಿನ ಸೂಪರ್ 6 ಹಂತ ತಲುಪಿದ್ದ ತಂಡಕ್ಕೆ ದೊಡ್ಡ ಆಘಾತವುಂಟಾಗಿದೆ.


ಇದನ್ನೂ ಓದಿ: ಮೊದಲ ಓವರ್’ನಲ್ಲೇ 4 ವಿಕೆಟ್ ಉಡೀಸ್! ಕ್ರಿಕೆಟ್ ದಿಗ್ಗಜನ ಅಳಿಯನ ಸ್ಫೋಟಕ ಬೌಲಿಂಗ್’ಗೆ ವಿಶ್ವದಾಖಲೆ ಸೃಷ್ಟಿ


ಸೂಪರ್ 6​ನ ಮೊದಲ ಪಂದ್ಯದಲ್ಲೇ ಸ್ಕಾಟ್​ಲ್ಯಾಂಡ್ ವಿರುದ್ಧ ವೆಸ್ಟ್ ಇಂಡೀಸ್‍ ಸೋಲು ಕಂಡಿದೆ. ಈ ಮೂಲಕ ಭಾರತದಲ್ಲಿ ಏಕದಿನ ವಿಶ್ವಕಪ್ ಆಡುವ ವಿಂಡೀಸ್ ತಂಡದ ಕನಸು ಕಮರಿದೆ. ಹರಾರೆಯಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸ್ಕಾಟ್​ಲ್ಯಾಂಡ್​ ಫೀಲ್ಡಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ 43.5 ಓವರ್‍ಗಳಲ್ಲಿ ತನ್ನೆಲ್ಲಾ ವಿಕೆಟ್‍ಗಳನ್ನು ಕಳೆದುಕೊಂಡು 181 ರನ್ ಗಳಿಸಲಷ್ಟೇ ಶಕ್ತವಾಯಿತು.


ವೆಸ್ಟ್ ಇಂಡೀಸ್ ವಿರುದ್ಧ ಭರ್ಜರಿ ಜಯ ಸಾಧಿಸುವ ಮೂಲಕ ಸ್ಕಾಟ್​ಲ್ಯಾಂಡ್ ಹೊಸ ಇತಿಹಾಸ ನಿರ್ಮಿಸಿದೆ. ಹೀನಾಯ ಸೋಲು ಕಂಡ ವಿಂಡೀಸ್ ತಂಡ ನಿರಾಸೆ ಮೂಡಿಸಿದೆ.  


ಇದನ್ನೂ ಓದಿ: ಬೆಂಗಳೂರಲ್ಲಿನ ಇಂಡಿಯನ್ ನ್ಯಾಷನಲ್ ರ್ಯಾಲಿ ಸ್ಪ್ರಿಂಟ್ ಚಾಂಪಿಯನ್‌ ನಲ್ಲಿ 120 ಬೈಕರ್ ಗಳು ಭಾಗಿ 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.