ICC Men’s ODI Ranking: ಐತಿಹಾಸಿಕ ಸಾಧನೆಗೆ ಒಂದೇ ಮೆಟ್ಟಿಲು: ಮೂರು ಸ್ವರೂಪದಲ್ಲೂ ಅಗ್ರಸ್ಥಾನ ಪಡೆಯುತ್ತಾ ಟೀಂ ಇಂಡಿಯಾ?
ICC Men’s ODI Ranking: ಇನ್ನು ಟೀಂ ಇಂಡಿಯಾ ಐತಿಹಾಸಿಕ ಸಾಧನೆಯೊಂದನ್ನು ಮಾಡಲು ಕೇವಲ ಒಂದು ಮೆಟ್ಟಿಲು ಬಾಕಿ ಇದೆ. ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಟೆಸ್ಟ್ ತಂಡದ ಇತ್ತೀಚಿನ ಶ್ರೇಯಾಂಕಗಳನ್ನು ಬಿಡುಗಡೆ ಮಾಡಿತ್ತು. ಈ ಟೆಸ್ಟ್ ಶ್ರೇಯಾಂಕದಲ್ಲಿ ಟೀಂ ಇಂಡಿಯಾ ಅಗ್ರ ಸ್ಥಾನ ಕಾಯ್ದುಕೊಂಡಿತ್ತು.
ICC Men’s ODI Ranking: ಇಂದು ರಾಯ್‌ಪುರದ ಶಹೀದ್ ವೀರ್ ನಾರಾಯಣ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಸರಣಿಯಲ್ಲಿ ಟೀಂ ಇಂಡಿಯಾ 2-0 ಮುನ್ನಡೆ ಸಾಧಿಸಿದೆ. ಇನ್ನು ಈ ಪಂದ್ಯದಲ್ಲಿ ಟೀಂ ಇಂಡಿಯಾದ ಬ್ಯಾಟ್ಸ್ ಮನ್ ಮತ್ತು ಬೌಲರ್ ಗಳು ಅಟ್ಟಹಾಸ ಮೆರೆದಿದ್ದು, ನ್ಯೂಜಿಲೆಂಡ್ ತಂಡವನ್ನು 108 ರನ್ ಗಳಿಗೆ ಕಟ್ಟಿಹಾಕಿದ್ದಾರೆ. ಟೀಂ ಇಂಡಿಯಾ ಈ ಪಂದ್ಯದಲ್ಲಿ ಎಂಟು ವಿಕೆಟ್ ಗಳ ಜಯ ಸಾಧಿಸಿ ಸರಣಿ ವಶಪಡಿಸಿಕೊಂಡಿದೆ.
ಇದನ್ನೂ ಓದಿ: IND vs NZ: ಟೀಂ ಇಂಡಿಯಾದಲ್ಲಿ ಬೌಲರ್ ಗಳ ಅಟ್ಟಹಾಸ: ಬ್ಯಾಕ್ ಟು ಬ್ಯಾಕ್ ಉರುಳಿದ ಕೀವೀಸ್ ವಿಕೆಟ್
ಇನ್ನು ಟೀಂ ಇಂಡಿಯಾ ಐತಿಹಾಸಿಕ ಸಾಧನೆಯೊಂದನ್ನು ಮಾಡಲು ಕೇವಲ ಒಂದು ಮೆಟ್ಟಿಲು ಬಾಕಿ ಇದೆ. ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಟೆಸ್ಟ್ ತಂಡದ ಇತ್ತೀಚಿನ ಶ್ರೇಯಾಂಕಗಳನ್ನು ಬಿಡುಗಡೆ ಮಾಡಿತ್ತು. ಈ ಟೆಸ್ಟ್ ಶ್ರೇಯಾಂಕದಲ್ಲಿ ಟೀಂ ಇಂಡಿಯಾ ಅಗ್ರ ಸ್ಥಾನ ಕಾಯ್ದುಕೊಂಡಿತ್ತು. ಬಾಂಗ್ಲಾದೇಶ ವಿರುದ್ಧದ 2 ಟೆಸ್ಟ್‌ಗಳ ಸರಣಿಯನ್ನು ಭಾರತ ಗೆದ್ದುಕೊಂಡಿತ್ತು. ಈ ಹಿನ್ನೆಲೆಯಲ್ಲಿ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ನಂಬರ್ 1 ತಂಡವಾಗಿತ್ತು. ಟೀಮ್ ಇಂಡಿಯಾ ಮೊದಲು ಆಸ್ಟ್ರೇಲಿಯಾ ನಂಬರ್ ಒನ್ ಸ್ಥಾನದಲ್ಲಿತ್ತು. ಇತ್ತೀಚಿನ ಶ್ರೇಯಾಂಕದಲ್ಲಿ ಭಾರತ 3690 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದೆ.
ಇನ್ನೊಂದೆಡೆ ಭಾರತ ತಂಡ ಟಿ20ಯಲ್ಲಿಯೂ ಸಹ ನಂಬರ್ 1 ಎನಿಸಿಕೊಂಡಿದೆ. ಪ್ರಸ್ತುತ ಏಕದಿನ ರ್ಯಾಂಕಿಂಗ್‌ನಲ್ಲಿ ನಾಲ್ಕನೇ ಸ್ಥಾನದಲ್ಲಿರುವ ಟೀಂ ಇಂಡಿಯಾ ಮೊದಲ ಸ್ಥಾನಕ್ಕೇರಲು ಕೇವಲ ಒಂದು ಹೆಜ್ಜೆ ಬಾಕಿ ಇದೆ.
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಏಕದಿನ ಸರಣಿಯ ಮೊದಲ ಪಂದ್ಯ ಹೈದರಾಬಾದ್‌ನಲ್ಲಿ ನಡೆದಿತ್ತು. ಅದರಲ್ಲಿಯೂ ಭಾರತ ಗೆಲುವು ಸಾಧಿಸಿತ್ತು. ಇಂದು ರಾಯ್ಪುರದಲ್ಲಿ ನಡೆದ ಎರಡನೇ ಪಂದ್ಯದಲ್ಲೂ ಟೀಂ ಇಂಡಿಯಾ ಗೆದ್ದು ಸರಣಿ ಕೈವಶ ಮಾಡಿಕೊಂಡಿದೆ. ಮುಂದೆ ನಡೆಯಲಿರುವ ಮೂರನೇ ಪಂದ್ಯ ಇಂಧೋರ್ ನಲ್ಲಿ ನಡೆಯಲಿದೆ. ಈ ಪಂದ್ಯದಲ್ಲೂ ಗೆಲುವು ಸಾಧಿಸಿದರೆ, ಟೀಂ ಇಂಡಿಯಾ ಐಸಿಸಿ ಏಕದಿನ ರ‍್ಯಾಂಕಿಂಗ್‌ನಲ್ಲಿ ನಂಬರ್ ಒನ್ ಆಗುವ ಸುವರ್ಣಾವಕಾಶವನ್ನು ಪಡೆಯುತ್ತದೆ.
ಇದನ್ನೂ ಓದಿ: IND vs NZ: ಬೌಲಿಂಗ್-ಬ್ಯಾಟಿಂಗ್ ನಲ್ಲಿ ಮಿಂಚಿದ ಟೀಂ ಇಂಡಿಯಾ: ಕೀವೀಸ್ ವಿರುದ್ಧ ಗೆದ್ದು ಸರಣಿ ವಶಪಡಿಸಿಕೊಂಡ ರೋಹಿತ್ ಪಡೆ
ಈ ಸರಣಿಯಲ್ಲಿ ನ್ಯೂಜಿಲೆಂಡ್ ತಂಡವನ್ನು 3-0 ಅಂತರದಿಂದ ಸೋಲಿಸಿದರೆ ಮಾತ್ರ ಈ ಸಾಧನೆ ಮಾಡಬಹುದು. ಸದ್ಯ ಏಕದಿನ ಶ್ರೇಯಾಂಕದಲ್ಲಿ ನ್ಯೂಜಿಲೆಂಡ್ ತಂಡ 115 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಟೀಂ ಇಂಡಿಯಾ 111 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ. ಈ ಸರಣಿಯನ್ನು ಟೀಂ ಇಂಡಿಯಾ ಕ್ಲೀನ್ ಸ್ವೀಪ್ ಮಾಡಿದರೆ 114 ಅಂಕಗಳನ್ನು ಪಡೆದು ನ್ಯೂಜಿಲೆಂಡ್ ತಂಡ 111 ಅಂಕಗಳಿಗೆ ಕುಸಿಯಲಿದೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.