ಭಾರತ ತಂಡದ ಸೂಪರ್ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಬಹಳ ಸಮಯದಿಂದ ಕಳಪೆ ಫಾರ್ಮ್‌ನಲ್ಲಿ ಹೋರಾಡುತ್ತಿದ್ದಾರೆ. ಅವರ ಈ ಆಟವು ಟೀಂ ಇಂಡಿಯಾದ ಸೋಲಿಗೆ ಕಾರಣವಾಗುತ್ತಿದೆ. ಕಳೆದ ಮೂರು ವರ್ಷಗಳಿಂದ ಯಾವುದೇ ಮಾದರಿಯ ಕ್ರಿಕೆಟ್‌ನಲ್ಲಿ ಶತಕ ಬಾರಿಸಲು ಕೊಹ್ಲಿಗೆ ಸಾಧ್ಯವಾಗುತ್ತಿಲ್ಲ. ಇದೀಗ ಪಾಕಿಸ್ತಾನದ ಬ್ಯಾಟ್ಸ್‌ಮನ್ ಬಾಬರ್ ಆಜಂ ವಿರಾಟ್ ಕೊಹ್ಲಿಯನ್ನು ಬೆಂಬಲಿಸಿದ್ದು, ಮಹತ್ವದ ಮಾತೊಂದನ್ನು ಹೇಳಿದ್ದಾರೆ. 


COMMERCIAL BREAK
SCROLL TO CONTINUE READING

ಇಂಗ್ಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕೇವಲ 16 ರನ್ ಗಳಿಸಲಷ್ಟೇ ಶಕ್ತರಾಗಿದ್ದರು. ಇನ್ನು ಇದೀಗ ಪಾಕಿಸ್ತಾನದ ಬ್ಯಾಟ್ಸ್‌ಮನ್ ಮತ್ತು ನಾಯಕ ಬಾಬರ್ ಅಜಮ್ ವಿರಾಟ್ ಕೊಹ್ಲಿಯನ್ನು ಬೆಂಬಲಿಸಿ ಟ್ವೀಟ್ ಮಾಡಿದ್ದಾರೆ. ಕಳೆದ ವರ್ಷ ಟಿ20 ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ ಜೊತೆ ಇರುವ ಚಿತ್ರವನ್ನು ಅಜಮ್ ಪೋಸ್ಟ್ ಮಾಡಿದ್ದರು. "ಸದೃಢವಾಗಿರಿ, ಇದೂ ಸಹ ಕಳೆದುಹೋಗುತ್ತದೆ" ಎಂದು ಧೈರ್ಯದ ಮಾತುಗಳನ್ನು ಹೇಳಿದ್ದಾರೆ. ಬಾಬರ್ ಆಜಂ ವಿಶ್ವದ ಅತ್ಯುತ್ತಮ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರು ಎಂದು ಗುರುತಿಸಲ್ಪಟ್ಟಿದ್ದಾರೆ.


ಲಾರ್ಡ್ಸ್‌ನಲ್ಲಿ ಮಿಂಚಿದ ಭಾರತದ ಬೌಲರ್, ಸೋತ ಪಂದ್ಯದಲ್ಲೂ ಇತಿಹಾಸ ಸೃಷ್ಟಿ!


ವಿರಾಟ್ ಕೊಹ್ಲಿ ತಂಡದಲ್ಲಿ ಮುಂದುವರೆಯುವ ಬಗ್ಗೆ ಇದೀಗ ಪ್ರಶ್ನೆಗಳು ಎದ್ದಿವೆ. ಅವರ ಸ್ಥಾನಕ್ಕೆ ಭಾರತ ತಂಡದಲ್ಲಿ ಹಲವು ಯುವ ಆಟಗಾರರಿದ್ದಾರೆ. ಕೊಹ್ಲಿಯ ಬ್ಯಾಟ್ ಬಹಳ ಸಮಯದಿಂದ ಮೌನವಾಗಿದೆ ಎನ್ನಬಹುದು. ಕಪಿಲ್ ದೇವ್ ಅವರಂತಹ ದಿಗ್ಗಜ ಆಟಗಾರರು ಸಹ ಕೊಹ್ಲಿಯನ್ನು ಟೀಕಿಸಿದ್ದಾರೆ. ವಿರಾಟ್ ಕೊಹ್ಲಿ ತಮ್ಮ 14 ವರ್ಷಗಳ ಅಂತಾರಾಷ್ಟ್ರೀಯ ವೃತ್ತಿ ಜೀವನದಲ್ಲಿ 12000ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಅಷ್ಟೇ ಅಲ್ಲದೆ,  ಟಿ20 ಕ್ರಿಕೆಟ್‌ನಲ್ಲೂ ಮಾಸ್ಟರ್ ಎಂದು ಖ್ಯಾತಿ ಪಡೆದಿದ್ದಾರೆ.


ಇನ್ನು ವೆಸ್ಟ್ ಇಂಡೀಸ್ ಪ್ರವಾಸದಿಂದ ವಿರಾಟ್ ಕೊಹ್ಲಿಗೆ ಆಯ್ಕೆಗಾರರು ವಿಶ್ರಾಂತಿ ನೀಡಿದ್ದಾರೆ. ಇನ್ನು ಶ್ರೀಲಂಕಾದಲ್ಲಿ ನಡೆಯಲಿರುವ ಏಷ್ಯಾಕಪ್‌ನಲ್ಲಿ ಭಾಗವಹಿಸುವ ಸಾಧ್ಯತೆಯಿದೆ. ಕಳೆದ ಬಾರಿ ಭಾರತ ಮತ್ತು ಪಾಕಿಸ್ತಾನ ಟಿ20 ವಿಶ್ವಕಪ್‌ನಲ್ಲಿ ಮುಖಾಮುಖಿಯಾಗಿದ್ದವು. ಆಗ ಪಾಕಿಸ್ತಾನ 10 ವಿಕೆಟ್‌ಗಳಿಂದ ಭಾರತವನ್ನು ಸೋಲಿಸಿತ್ತು. 


ಇದನ್ನೂ ಓದಿ: ಚಂದ್ರನ ರಾಶಿಗೆ ಸೂರ್ಯನ ಪ್ರವೇಶ, ಈ 4 ರಾಶಿಯವರಿಗೆ ತಿಂಗಳು ಪೂರ್ತಿ ಅದೃಷ್ಟ! 


ಇನ್ನು ವಿರಾಟ್ ಕೊಹ್ಲಿ ತನ್ನ ಸ್ವಂತ ಬಲದಿಂದ ಭಾರತ ತಂಡಕ್ಕೆ ಹಲವು ಪಂದ್ಯಗಳನ್ನು ಗೆದ್ದುಕೊಟ್ಟಿದ್ದಾರೆ. ಅವರ ಹೆಸರಿನಲ್ಲಿ ಅದೆಷ್ಟೋ ದಾಖಲೆಗಳು ಸೃಷ್ಟಿಯಾಗಿವೆ. 70 ಶತಕಗಳನ್ನು ಬಾರಿಸಿರುವ ಕೊಹ್ಲಿ ಇದೀಗ ರನ್‌ ಕಲೆ ಹಾಕಲು ಕಷ್ಟಪಡುವಂತಹ ಸ್ಥಿತಿ ನಿರ್ಮಾಣವಾಗಿದೆ. ವಿಶ್ವದ ದೊಡ್ಡ ಬೌಲರ್‌ಗಳು ಕೊಹ್ಲಿ ಮುಂದೆ ಬೌಲಿಂಗ್ ಮಾಡಲು ಹೆದರುತ್ತಿದ್ದರು. ಆದರೆ ಇದೀಗ ವಿರಾಟ ಪಂದ್ಯ ಮೌನವಾಗಿದೆ. ಕೊಹ್ಲಿ ಭಾರತ ಪರ 102 ಟೆಸ್ಟ್ ಪಂದ್ಯಗಳು, 260 ಏಕದಿನ ಪಂದ್ಯಗಳು ಮತ್ತು 102 ಟಿ20 ಪಂದ್ಯಗಳನ್ನು ಆಡಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.