Pakistan Cricket Team: ಇಂಟರ್ನ್ಯಾಷನಲ್ ಟಿ20ಯಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ ಪಾಕಿಸ್ತಾನ ಕ್ರಿಕೆಟ್ ತಂಡ
Pakistan Cricket Team: ಈ ವರ್ಷ ಟಿ20 ಕ್ರಿಕೆಟ್‌ನಲ್ಲಿ ಇತರ ಯಾವುದೇ ತಂಡ ಗಳಿಸದ ಅತಿ ದೊಡ್ಡ ಗೆಲುವು ಇದಾಗಿದೆ. ಈ ಅವಧಿಯಲ್ಲಿ ಪಾಕಿಸ್ತಾನ ತನ್ನದೇ ದಾಖಲೆಯನ್ನು ಮುರಿದಿದೆ. ಒಂದು ಕ್ಯಾಲೆಂಡರ್ ವರ್ಷದಲ್ಲಿ 18 ಟಿ20 ಪಂದ್ಯಗಳನ್ನು ಗೆದ್ದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾಕಿಸ್ತಾನ ಪಾತ್ರವಾಗಿದೆ. ಇದಕ್ಕೂ ಮುನ್ನ ಪಾಕಿಸ್ತಾನ 2018ರಲ್ಲಿ ಒಟ್ಟು 17 ಟಿ20 ಪಂದ್ಯಗಳನ್ನು ಗೆದ್ದಿತ್ತು.
Pakistan Cricket Team: ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡ ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಸೋಮವಾರ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ T20 ಪಂದ್ಯವನ್ನು 63 ರನ್‌ಗಳಿಂದ ಗೆದ್ದ ನಂತರ, ಪಾಕಿಸ್ತಾನವು 18 ರನ್‌ಗಳೊಂದಿಗೆ ಒಂದು ವರ್ಷದಲ್ಲಿ ಅತಿ ಹೆಚ್ಚು T20 ಪಂದ್ಯಗಳನ್ನು ಗೆದ್ದ ವಿಶ್ವದಾಖಲೆ ಮಾಡಿದೆ. ಇದು ಈ ವರ್ಷ 2021 ರಲ್ಲಿ ಪಾಕಿಸ್ತಾನದ 18 ನೇ ಟಿ20 ಗೆಲುವಾಗಿದೆ.
ಅಂತರಾಷ್ಟ್ರೀಯ ಟಿ20ಯಲ್ಲಿ ಹೊಸ ವಿಶ್ವದಾಖಲೆ ಸೃಷ್ಟಿಯಾಗಿದೆ:
ಈ ವರ್ಷ ಟಿ20 ಕ್ರಿಕೆಟ್‌ನಲ್ಲಿ (T20 Cricket) ಇತರ ಯಾವುದೇ ತಂಡ ಗಳಿಸದ ಅತಿ ದೊಡ್ಡ ಗೆಲುವು ಇದಾಗಿದೆ. ಈ ಅವಧಿಯಲ್ಲಿ ಪಾಕಿಸ್ತಾನ ತನ್ನದೇ ದಾಖಲೆಯನ್ನು ಮುರಿದಿದೆ. ಒಂದು ಕ್ಯಾಲೆಂಡರ್ ವರ್ಷದಲ್ಲಿ 18 ಟಿ20 ಪಂದ್ಯಗಳನ್ನು ಗೆದ್ದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾಕಿಸ್ತಾನ ಪಾತ್ರವಾಗಿದೆ. ಇದಕ್ಕೂ ಮುನ್ನ ಪಾಕಿಸ್ತಾನ 2018ರಲ್ಲಿ ಒಟ್ಟು 17 ಟಿ20 ಪಂದ್ಯಗಳನ್ನು ಗೆದ್ದಿತ್ತು.
ಇದರೊಂದಿಗೆ 2018 ರಲ್ಲಿ ಸ್ಥಾಪಿಸಲಾದ ತಮ್ಮದೇ ದಾಖಲೆಯನ್ನು (17 ಗೆಲುವುಗಳು) ಪಾಕಿಸ್ತಾನ (Pakistan Cricket Team) ಮುರಿದಿದೆ.
India vs South Africa: ಟೀಂ ಇಂಡಿಯಾದ ದೊಡ್ಡ ಶತ್ರು ಟೆಸ್ಟ್ ಸರಣಿಯಿಂದ ಹೊರಗುಳಿಯುವ ಸಾಧ್ಯತೆ
ಪಾಕಿಸ್ತಾನ ಕ್ರಿಕೆಟ್ ತಂಡದ ದೊಡ್ಡ ಸಾಧನೆ:
ಮೊದಲ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಪಾಕಿಸ್ತಾನ 63 ರನ್ ಗಳಿಂದ ಸೋಲಿಸಿತ್ತು. ಸೋಮವಾರ ಕರಾಚಿ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ನಾಯಕ ನಿಕೋಲಸ್ ಪೂರನ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಮೊದಲು ಬ್ಯಾಟಿಂಗ್‌ಗೆ ಆಹ್ವಾನಿಸಿದ ಪಾಕಿಸ್ತಾನ 6 ವಿಕೆಟ್‌ಗೆ 200 ರನ್ ಗಳಿಸಿತು. ಪಾಕಿಸ್ತಾನ ನೀಡಿದ್ದ 201 ರನ್‌ಗಳ ಗುರಿ ಬೆನ್ನತ್ತಿದ ವಿಂಡೀಸ್ ತಂಡ 19 ಓವರ್‌ಗಳಲ್ಲಿ 137 ರನ್‌ಗಳಿಗೆ ಆಲೌಟಾಯಿತು. ಅವರಿಗೆ, ಆರಂಭಿಕ ಶಾಯ್ ಹೋಪ್ 31 ರನ್‌ಗಳ ಗರಿಷ್ಠ ಇನ್ನಿಂಗ್ಸ್‌ಗಳನ್ನು ಆಡಿದರು. ಪಾಕಿಸ್ತಾನ ಪರ ಮೊಹಮ್ಮದ್ ವಾಸಿಂ ಜೂನಿಯರ್ 4 ವಿಕೆಟ್ ಪಡೆದರು.
ಇದನ್ನೂ ಓದಿ- ರೋಹಿತ್ ನಾಯಕತ್ವದಲ್ಲಿ ಆಡಲು ವಿರಾಟ್ ನಕಾರ, ದ.ಆಫ್ರಿಕಾ ಸರಣಿಯಿಂದ ಹೆಸರು ವಾಪಸ್
ಪಾಕಿಸ್ತಾನದ ಬ್ಯಾಟ್ಸ್‌ಮನ್‌ಗಳ ಅದ್ಭುತ ಪ್ರದರ್ಶನ:
ವೆಸ್ಟ್ ಇಂಡೀಸ್ ವಿರುದ್ಧ ಪಾಕಿಸ್ತಾನದ ದೊಡ್ಡ ಗೆಲುವಿನಲ್ಲಿ, ಆರಂಭಿಕರಾದ ಮೊಹಮ್ಮದ್ ರಿಜ್ವಾನ್, ಹೈದರ್ ಅಲಿ, ವೇಗದ ಬೌಲರ್‌ಗಳಾದ ಮೊಹಮ್ಮದ್ ವಾಸಿಮ್ ಜೂನಿಯರ್ ಮತ್ತು ಶಾದಾಬ್ ಖಾನ್ ಅದ್ಭುತ ಪ್ರದರ್ಶನ ನೀಡಿದರು. ಪಾಕ್ ಪರ ಮೊಹಮ್ಮದ್ ರಿಜ್ವಾನ್ 52 ಎಸೆತಗಳಲ್ಲಿ 10 ಬೌಂಡರಿಗಳ ನೆರವಿನಿಂದ 78 ರನ್ ಹಾಗೂ ಹೈದರ್ ಅಲಿ 39 ಎಸೆತಗಳಲ್ಲಿ 6 ಬೌಂಡರಿ ಹಾಗೂ 4 ಸಿಕ್ಸರ್ ನೆರವಿನಿಂದ 68 ರನ್ ಗಳಿಸಿದರು. ಅಂತಿಮವಾಗಿ ಮೊಹಮ್ಮದ್ ನವಾಜ್ 10 ಎಸೆತಗಳಲ್ಲಿ ಮೂರು ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ ಅಜೇಯ 30 ರನ್ ಗಳಿಸಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.