ಚಾಂಪಿಯನ್ಸ್ ಟ್ರೋಫಿಯಲ್ಲಿ ಒಂದೇ ಒಂದು ಪಂದ್ಯ ಗೆಲ್ಲದ ಪಾಕಿಸ್ತಾನಕ್ಕೆ ಐಸಿಸಿಯಿಂದ ಸಿಕ್ತು ಕೋಟಿ ಕೋಟಿ ಹಣ!

Champions Trophy 2025: ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ 2025ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಪ್ರಸ್ತುತ ಪಂದ್ಯಾವಳಿಯಲ್ಲಿ ಒಂದೇ ಒಂದು ಪಂದ್ಯವನ್ನು ಗೆಲ್ಲಲು ಸಾಧ್ಯವಾಗಲಿಲ್ಲ.  

Written by - Puttaraj K Alur | Last Updated : Mar 10, 2025, 02:07 PM IST
  • ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ
  • ಈ ಟೂರ್ನಿಯಲ್ಲಿ ಮೊಹಮ್ಮದ್‌ ರಿಜ್ವಾನ್‌ ನಾಯಕತ್ವದ ಪಾಕ್ ಒಂದೇ ಒಂದು ಪಂದ್ಯ ಗೆಲ್ಲಲಿಲ್ಲ‌
  • ಟೂರ್ನಿಯಲ್ಲಿ ಒಂದೂ ಗೆಲುವು ಸಾಧಿಸಿದ ಪಾಕಿಸ್ತಾನ ತಂಡಕ್ಕೆ ಕೋಟಿ ಕೋಟಿ ರೂಪಾಯಿ ಸಿಕ್ಕಿದೆ
ಚಾಂಪಿಯನ್ಸ್ ಟ್ರೋಫಿಯಲ್ಲಿ ಒಂದೇ ಒಂದು ಪಂದ್ಯ ಗೆಲ್ಲದ ಪಾಕಿಸ್ತಾನಕ್ಕೆ ಐಸಿಸಿಯಿಂದ ಸಿಕ್ತು ಕೋಟಿ ಕೋಟಿ ಹಣ!
ಚಾಂಪಿಯನ್ಸ್ ಟ್ರೋಫಿ

Pakistan Cricket Team Champions Trophy 2025: ಪಾಕಿಸ್ತಾನದ ಆತಿಥ್ಯದಲ್ಲಿ ನಡೆದ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಟೀಂ ಇಂಡಿಯಾ ಗೆದ್ದುಕೊಂಡಿದೆ. ದುಬೈ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಫೈನಲ್‌ ಪಂದ್ಯದಲ್ಲಿ ಬಲಿಷ್ಠ ನ್ಯೂಜಿಲೆಂಡ್‌ ತಂಡವನ್ನ ಮಣಿಸುವ ಮೂಲಕ ಭಾರತ ಮೂರನೇ ಬಾರಿಗೆ ಚಾಂಪಿಯನ್ಸ್‌ ಟ್ರೋಫಿ ಎತ್ತಿ ಹಿಡಿದು ಸಂಭ್ರಮಿಸಿದೆ. 

Add Zee News as a Preferred Source

ವಿಶೇಷ ಅಂತಿರೋ ಅಥವಾ ಬ್ಯಾಡ್‌ ಲಕ್ ಅಂತಿರೋ ತಾನೇ ಆಯೋಜಿಸಿದ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ ಪಾಕಿಸ್ತಾನ ಒಂದೇ ಒಂದು ಪಂದ್ಯದಲ್ಲಿ ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ. ಗ್ರೂಪ್‌ ಹಂತದ ಉದ್ಘಾಟನಾ ಪಂದ್ಯದಲ್ಲಿಯೇ ನ್ಯೂಜಿಲೆಂಡ್‌ ವಿರುದ್ಧ 60 ರನ್‌ಗಳಿಂದ ಹೀನಾಯವಾಗಿ ಸೋತ ಪಾಕಿಸ್ತಾನ, ನಂತರ ಭಾರತದ ವಿರುದ್ಧವೂ 6 ವಿಕೆಟ್‌ಗಳಿಂದ ಸೋಲು ಕಂಡು ಟೂರ್ನಿಯಿಂದ ಹೊರಬಿದ್ದಿತು. ಬಾಂಗ್ಲಾದೇಶದ ವಿರುದ್ಧದ ಕೊನೆಯ ಪಂದ್ಯದಲ್ಲಿಯಾದರೂ ಗೆಲುವು ಸಾಧಿಸಬೇಕೆಂದುಕೊಂಡಿದ್ದ ಪಾಕಿಸ್ತಾನದ ಆಸೆಗೆ ಮಳೆ ತಣ್ಣೀರೆರಚಿತು. ಮಳೆಯಿಂದಾಗಿ ಈ ಪಂದ್ಯ ರದ್ದಾಗಿದ್ದರಿಂದ ಪಾಕ್‌ಗೆ ಒಂದೇ ಒಂದು ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ.

ಇದನ್ನೂ ಓದಿ: ಡಿವೋರ್ಸ್‌ ವದಂತಿ ನಡುವೆ ಚಹಾಲ್ ಜೊತೆ ಕಾಣಿಸಿಕೊಂಡ ಮಿಸ್ಟ್ರಿ ಗರ್ಲ್‌.. ಭಾರತ vs ನ್ಯೂಜಿಲೆಂಡ್ ಫೈನಲ್ ವೇಳೆ ಗಮನ ಸೆಳೆದ ಸುಂದರಿ ಯಾರು!

ಲೀಗ್‌ ಹಂತದ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದ ಟೀಂ ಇಂಡಿಯಾ ಸೆಮಿಫೈನಲ್‌ ಪ್ರವೇಶಿಸಿತು. ಹೀಗಾಗಿ ಸೆಮಿಫೈನಲ್‌ ಪಂದ್ಯವನ್ನು ದುಬೈನಲ್ಲಿಯೇ ಆಯೋಜಿಸಬೇಕಾಯಿತು. ನಂತರ ಆಸ್ಟ್ರೇಲಿಯಾವನ್ನು ಸೋಲಿಸುವ ಮೂಲಕ ಕೂಡ ಫೈನಲ್‌ ಪ್ರವೇಶಿಸಿತು. ಹೀಗಾಗಿ ಫೈನಲ್‌ ಪಂದ್ಯವೂ ಸಹ ದುಬೈನಲ್ಲಿಯೇ ನಡೆಯಬೇಕಾಯ್ತು. ಅಂತಿಮವಾಗಿ ಟೀಂ ಇಂಡಿಯಾ ನ್ಯೂಜಿಲೆಂಡ್‌ ತಂಡವನ್ನು ನಾಲ್ಕು ವಿಕೆಟ್‌ಗಳಿಂದ ಮಣಿಸುವ ಮೂಲಕ ಚಾಂಪಿಯನ್ಸ್‌ ಟ್ರೋಫಿ ಎತ್ತಿಹಿಡಿದು ಸಂಭ್ರಮಿಸಿತು. ಆದರೆ ತಾನು ಆಯೋಜಿಸಿದ ಟೂರ್ನಿಯಲ್ಲಿ ಒಂದೇ ಒಂದು ಪಂದ್ಯ ಗೆಲ್ಲಲಿಲ್ಲವೆಂದು ಪಾಕಿಸ್ತಾನ ಸಪ್ಪೆ ಮೋರೆ ಹಾಕಬೇಕಾಯಿತು. 

ಪಾಕಿಸ್ತಾನಕ್ಕೆ ದುಃಸ್ವಪ್ನವಾದ ಚಾಂಪಿಯನ್ಸ್‌ ಟ್ರೋಫಿ!

ಟೀಂ ಇಂಡಿಯಾ ಒಂದೇ ಒಂದು ಪಂದ್ಯವನ್ನು ಸೋಲದೆ ಅಜೇಯವಾಗಿ ಚಾಂಪಿಯನ್ಸ್‌ ಟ್ರೋಫಿ ಗೆದ್ದಿದೆ. ಭಾರತ ತಂಡವು ಸುಮಾರು 20 ಕೋಟಿ ರೂ.ಗಳನ್ನು ಬಹುಮಾನದ ಹಣವಾಗಿ ಪಡೆದುಕೊಂಡಿತು. ಮತ್ತೊಂದೆಡೆ ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನ ತಂಡಕ್ಕೆ ದುಃಸ್ವಪ್ನವಾಗಿತ್ತು. ಒಂದೇ ಒಂದು ಗೆಲುವು ಸಾಧಿಸಿದ ಪಾಕಿಸ್ತಾನ ತಂಡದ ಕಳಪೆ ಪ್ರದರ್ಶನಕ್ಕೆ ಮಾಜಿ ಆಟಗಾರರು ಮತ್ತು ಫ್ಯಾನ್ಸ್‌ಗಳು ಛಿಮಾರಿ ಹಾಕಿದರು. ತಂಡದ ಆಟಗಾರರನ್ನ ಕೆಟ್ಟದಾಗಿ ಟ್ರೋಲ್‌ ಸಹ ಮಾಡಲಾಯಿತು. ಮಾಜಿ ಆಟಗಾರರಂತೂ ಪಾಕ್‌ ತಂಡದ ಪ್ರದರ್ಶನಕ್ಕೆ ಕೆಂಡಕಾರಿದರು. ಈ ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಕಿಸ್ತಾನ ತಂಡ ೭ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ಗಳಿಸಿತು. 

ಪಾಕಿಸ್ತಾನಕ್ಕೆ ಸಿಕ್ಕ ಹಣ ಎಷ್ಟು?

2025ರ ಚಾಂಪಿಯನ್ಸ್ ಟ್ರೋಫಿಯಲ್ಲಿ 7 ಅಥವಾ 8 ನೇ ಸ್ಥಾನ ಗಳಿಸುವ ತಂಡಗಳು $140,000 ಅಥವಾ ಭಾರತೀಯ ರೂಪಾಯಿಗಳಲ್ಲಿ ಸರಿಸುಮಾರು 1 ಕೋಟಿ 22 ಲಕ್ಷ ರೂ.ಗಳನ್ನು ಪಡೆಯುತ್ತವೆ. ಆದರೆ ಪಾಕಿಸ್ತಾನ ತಂಡವು ಚಾಂಪಿಯನ್ಸ್ ಟ್ರೋಫಿಯ ಆಥಿತ್ಯ ವಹಿಸಿದ್ದಕ್ಕಾಗಿ $125,000 ಪಡೆದಿದೆ, ಇದು ಭಾರತೀಯ ರೂಪಾಯಿಗಳಲ್ಲಿ ಸರಿಸುಮಾರು 1 ಕೋಟಿ 9 ಲಕ್ಷ ರೂ. ಆಗುತ್ತದೆ. ಈ ರೀತಿ ಪಾಕಿಸ್ತಾನವು ಪ್ರಸಕ್ತ ಚಾಂಪಿಯನ್ಸ್ ಟ್ರೋಫಿಯಲ್ಲಿ ಯಾವುದೇ ಪಂದ್ಯವನ್ನು ಗೆಲ್ಲದೆ ಸರಿಸುಮಾರು 2 ಕೋಟಿ 31 ಲಕ್ಷ ರೂ.ಗಳನ್ನು ಪಡೆದುಕೊಂಡಿತು. 

ಇದನ್ನೂ ಓದಿ: ಕಾವ್ಯ ಮಾರನ್ OR ನೀತಾ ಅಂಬಾನಿ ಐಪಿಎಲ್‌ನ ಅತ್ಯಂತ ಶ್ರೀಮಂತ ಮಾಲೀಕರು ಯಾರು?

ಸರ್ಫರಾಜ್ ಅಹ್ಮದ್ ನಾಯಕತ್ವದಲ್ಲಿ ಪ್ರಶಸ್ತಿ ಗೆದ್ದಿದ್ದ ಪಾಕ್!  

ಪಾಕಿಸ್ತಾನ ತಂಡ 2017ರ ಚಾಂಪಿಯನ್ಸ್ ಟ್ರೋಫಿಯ ಫೈನಲ್‌ಗೆ ತಲುಪಿತ್ತು. ನಂತರ ಸರ್ಫರಾಜ್ ಅಹ್ಮದ್ ನಾಯಕತ್ವದಲ್ಲಿ ಭಾರತ ತಂಡವನ್ನು 180 ರನ್‌ಗಳಿಂದ ಸೋಲಿಸಿತು. ಆದರೆ 2025ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಕಿಸ್ತಾನದ ಪ್ರದರ್ಶನ ನಿರೀಕ್ಷೆಗಳಿಗೆ ಸಂಪೂರ್ಣವಾಗಿ ವಿರುದ್ಧವಾಗಿತ್ತು. ತಂಡದ ಬೌಲರ್‌ಗಳು ಮತ್ತು ಬ್ಯಾಟ್ಸ್‌ಮನ್‌ಗಳು ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾದರು. ಈ ಟೂರ್ನಿಯಲ್ಲಿ ಪಾಕಿಸ್ತಾನ ಪರ ಒಬ್ಬನೇ ಒಬ್ಬ ಬ್ಯಾಟ್ಸ್‌ಮನ್ ಕೂಡ ಶತಕ ಗಳಿಸಲು ಸಾಧ್ಯವಾಗಲಿಲ್ಲ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ

About the Author

Puttaraj K Alur

ಪುಟ್ಟರಾಜ ಕೆ ಆಲೂರ ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser) ನ್ಯೂಸ್‌, ಒಪೊಯಿ‌ (Opoyi) ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. ...Read More

Trending News